ಗದಗ: ದೇಶದಲ್ಲಿ ಇಂಧನ ಬೆಲೆ, ವಿದ್ಯುತ್ ಬೆಲೆ ಏರಿಕೆಯನ್ನು ಖಂಡಿಸಿ, ಶೀಘ್ರವಾಗಿ ಬೆಲೆ ಏರಿಕೆ ನಿಲ್ಲಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ (ಹೆಚ್.ಶಿವರಾಮೇಗೌಡ) ಬಣದ ಜಿಲ್ಲಾ ಘಟಕದಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಇದೇ ವೇಳೆ ಮಾತನಾಡಿ, ಇಡೀ ದೇಶವೇ ಕೊರೊನಾ ಲಾಕ್‌ಡೌನ್‌ನಿಂದ ತತ್ತರಿಸಿ ಹೋಗಿರುವ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಕಳೆದ 2 ವರ್ಷಗಳಿಂದ 40ಕ್ಕೂ ಹೆಚ್ಚು ಬಾರಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು 100 ರೂ. ಕ್ಕೂ ಅಧಿಕ ಬೆಲೆಯಲ್ಲಿ ಏರಿಕೆಯಾಗಿತ್ತಿದೆ. ಪರಿಣಾಮ ಜನಸಾಮಾನ್ಯರು, ರೈತರು ತತ್ತರಿಸುವಂತಾಗಿದೆ. ದಿನಸಿ ವಸ್ತುಗಳ ಬೆಲೆ ಪ್ರತಿದಿನ ಏರುತ್ತಲೇ ಇವೆ ಎಂದು ಆಕ್ರೋಶ ಹೊರಹಾಕಿದರು.
ಗ್ರಾಪಂ ಸದಸ್ಯ ಮಂಜುನಾಥ ಪರ್ವತಗೌಡ್ರ ಮಾತನಾಡಿ, ಲಾಕ್‌ಡೌನ್‌ನಿಂದ ಸಿಲುಕಿ ಅನೇಕ ಕುಟುಂಬಗಳು ಸಂಕಷ್ಟದಲ್ಲಿ ಕಾಲ ಕಳೆಯುತ್ತಿವೆ. ಅಗತ್ಯ ವಸ್ತುಗಳಾದ ಗ್ಯಾಸ್ ಸಿಲೆಂಡರ್, ಒಳ್ಳೆ ಎಣ್ಣಿ ಜನಸಾಮಾನ್ಯರ ಕೈಗೆಟುಕದಂತಾಗಿದೆ. ವಿದ್ಯುತ್ ಬಿಲ್ ತುಂಬಲಾಗದAತಹ ದುಸ್ಥಿತಿಯಲ್ಲಿ ರಾಜ್ಯದ ಜನರಲ್ಲಿ ಇದೆ. ರಾಜ್ಯದ ಬಿಜೆಪಿ ಸರಕಾರ ಪ್ರತಿ ಯೂನಿಟ್ ವಿದ್ಯುತ್‌ಗೆ 30 ಪೈಸೆಯಂತೆ ದರ ಏರಿಸಿ ಗಾಯದ ಮೇಲೆ ಬರೆ ಎಳೆದಿದೆ. ಕೂಡಲೇ ಕೇಂದ್ರ, ರಾಜ್ಯ ಸರಕಾರಗಳು ಬೆಲೆ ಏರಿಕೆಯನ್ನು ಕೂಡಲೇ ಹಿಂಪಡೆಯಬೇಕು ಎಂದು ಒತ್ತಾಯಿಸಿದರು.
ಮುಂಗಾರು ಕೃಷಿ ಚಟುವಟಿಕೆ ಪ್ರಾರಂಭವಾಗಿದೆ. ರೈತ ಸಮುದಾಯ ಟ್ಯಾಕ್ಟರ್‌ಗೆ ಡೀಸೆಲ್ ಹಾಕಲು ಹಣವಿಲ್ಲದ ಪರಿಸ್ಥತಿ ಇದೆ. ಪ್ರತಿ ರೈತ ಕುಟುಂಬಗಳಿಗೆ, ಕಾರ್ಮಿಕ ಬಂಧುಗಳಿಗೆ, ಆಟೋ ಚಾಲಕರಿಗೆ ಹಾಗೂ ಕ್ಷೌರಿಕರಿಗೆ, ಬಡಿಗ ಸಮುದಾಯಕ್ಕೆ ಅಸಂಘಟಿತ ವಲಯದಲ್ಲಿ ಕೆಲಸ ಮಾಡುವ ಬೀದಿ ಬದಿ ವ್ಯಾಪಾರಸ್ಥರಿಗೆ, ಹಮಾಲರಿಗೆ ಸಹಾಯಧನ 5 ಸಾವಿರದಂತೆ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.
ದಾವಲ್ ಮುಳಗುಂದ, ಬಸವರಾಜ ಮುಳ್ಳಾಳ, ಶ್ರವಣ ಅಗಸಿಮನಿ, ಸುರೇಶ ಮುಳಗುಂದ, ವೀರನಗೌಡ ಮರಿಗೌಡ್ರ, ಯಲ್ಲಪ್ಪ ದೊಡಮನಿ, ಹನುಮೇಶ ಹುಚ್ಚನ್ನವರ, ಶ್ರೀಕಾಂತ ಹುಗ್ಗಿ, ನಿಂಗರಾಜ ಹುಯಿಲಗೋಳ ಸೇರಿದಂತೆ ಇನ್ನೂ ಅನೇಕ ಕಾರ್ಯಕರ್ತರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

You May Also Like

ರೈತ ವಿರೋಧಿ ಕಾಯ್ದೆ ಹಾಗೂ ಬೆಲೆ ಏರಿಕೆ ಖಂಡಿಸಿ ರ್ಯಾಲಿ ಪ್ರತಿಭಟನೆ.

ಕೇಂದ್ರ ಹಾಗೂ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರರ್ಕಾರ, ಸುಳ್ಳು ಆಶ್ವಾಸನೆ ನೀಡುವದರ ಮೂಲಕ ಅಧಿಕಾರವನ್ನು ಪಡೆದುಕೊಂಡ ಮೇಲೆ ಚುನಾವಣೆಯ ಸಂಧರ್ಭದಲ್ಲಿ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತಿಲ್ಲ.

ದೇವಾಂಗ ಅಭಿವೃದ್ಧಿ ನಿಗಮ ಸ್ಥಾಪನೆಗೆ ಸರ್ವಧರ್ಮ, ಜಾತಿಯ ಬೆಂಬಲ

ದೇವಾಂಗ ಅಭಿವೃದ್ಧಿ ನಿಗಮ ಸ್ಥಾಪನೆಗಾಗಿ ಹಕ್ಕೊತ್ತಾಯಕ್ಕಾಗಿ ಪಟ್ಟಣದಲ್ಲಿ ಬುಧವಾರ ನಡೆದ ಬೃಹತ್ ಹೋರಾಟದ ಮೆರವಣಿಗೆಯಲ್ಲಿ ತಾಲ್ಲೂಕಿನ ಮುಸ್ಲಿಂ, ಜೈನ, ಕ್ರಿಶ್ಚಿಯನ್, ವೀರಶೈವ ಲಿಂಗಾಯತ, ಕುರುಬ, ನಾಯಕ ಸೇರಿ ಎಲ್ಲಾ ಧರ್ಮ, ಜಾತಿಯ ಮುಖಂಡರು ಭಾಗವಹಿಸಿ ದೇವಾಂಗ ಸಮಾಜಕ್ಕೆ ಬೆಂಬಲ ವ್ಯಕ್ತಪಡಿಸಿದರು.

ಸ್ಥಳೀಯ ಸಂಸ್ಥೆಯ ಚುನಾವಣೆಯಲ್ಲಿಯೂ ಶುರುವಾಯಿತು ಆಪರೇಷನ್ ಕಮಲ!

ಚಿಕ್ಕೋಡಿ : ಸ್ಥಳೀಯ ಸಂಸ್ಥೆ ಚುನಾವಣೆಯಿಂದಲೂ ಬಿಜೆಪಿಯಿಂದ ಆಪರೇಷನ್ ಕಮಲ ನಡೆಯುತ್ತಿದೆ ಎಂಬ ಆರೋಪ ಕೇಳಿ ಬರುತ್ತಿದೆ.

ದೈಹಿಕ ಶಿಕ್ಷಣ ನಿರ್ದೇಶಕ ಪ್ರಕಾಶ ನಿಧನಕ್ಕೆ ಗಣ್ಯರ ಸಂತಾಪ

ನಗರದ ಆರ್‌ಬಿಪಿಜಿ ಹಳಕಟ್ಟಿ ಪ್ರೌಢಶಾಲೆಯ ಚಿತ್ರಕಲಾ ಶಿಕ್ಷಕ ಗುಲಾಬಚಂದ ಜಾಧವ ಅವರ ಕಿರಿಯ ಸಹೋದರ ಪ್ರಕಾಶ ಜಾಧವ ಅವರ ಅಕಾಲಿಕ ನಿಧನಕ್ಕೆ ಅನೇಕ ಗಣ್ಯರು ಸಂತಾಪ ಸೂಚಿಸಿ ಶೋಕ ವ್ಯಕ್ತಪಡಿಸಿದ್ದಾರೆ.