ಉತ್ತರಪ್ರಭ ಸುದ್ದಿ
ಗದಗ:
ತಾಲೂಕಿನ ಅಸುಂಡಿ ಗ್ರಾಮದಲ್ಲಿ 9ನೇ ತರಗತಿಯ ವಿದ್ಯಾರ್ಥಿಯು ಕಾಣೆಯಾಗಿದ್ದಾಳೆ ಎಂದು 2ದಿನಗಳ ಹಿಂದೆ ವಿದ್ಯಾರ್ಥಿನಿಯ ಪೋಷಕರು ಗದಗ ಗ್ರಾಮಿಣ ಪೋಲಿಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದರು ಎನ್ನಲಾಗಿದೆ. ಆದರೆ ಬುಧವಾರ ಸಂಜೆ ವಿದ್ಯಾರ್ಥಿನಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ ಯಾಗಿದ್ದು. ಶವ ಕೊಳೆತು ವಾಸನೆ ಬಂದದ್ದನ್ನು ಸಮೀಪದಲ್ಲಿಯೇ ಇದ್ದ ಚಿಕನ್ ಅಂಗಡಿಯವರು ಪೊಲೀಸರಿಗೆ ತಿಳಿಸಿದ ನಂತರ ಈ ಪ್ರಕರಣ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ, ಡಿವೈಎಸ್ಪಿ, ಸಿಪಿಐ ಗದಗ ಗ್ರಾಮೀಣ ಪೊಲೀಸರು ಬೇಟಿ ನೀಡಿ ಶವವನ್ನು ಪರಿಶೀಲಿಸಿದಾಗ ವಿದ್ಯಾರ್ಥಿನಿಯನ್ನು ಕಿಡ್ನ್ಯಾಪ್ ಮಾಡಿ ಕೊಲೆ ಮಾಡಿ ಬಿಸಾಡಿರುವ ಶಂಕೆಯ ಮೇರೆಗೆ ಗದಗ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಕಿಡ್ನ್ಯಾಪ್ ಮತ್ತು ಕೊಲೆ ಪ್ರಕರಣ ದಾಖಲಿಸಿ ಕೊಂಡು ಆರೋಪಿಗಳ ಪತ್ತೆಗೆ ಬಲೆ ಬಿಸಿದ್ದಾರೆ. 5ರಿಂದ6 ಯುವಕರು ಕೃತ್ಯ ದಲ್ಲಿ ಭಾಗಿಯಾಗಿರುವ ಶಂಕೆಯನ್ನು ಸಾರ್ವಜನಿಕರು ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಮನುಕುಲದ ಸೂರ್ಯ ಲಿಂ.ತೋಂಟದ ಸಿದ್ದಲಿಂಗ ಶ್ರೀ

ಆಲಮಟ್ಟಿ : ಲಿಂ, ತೋಂಟದ ಡಾ.ಸಿದ್ದಲಿಂಗ ಶ್ರೀ ಕರುನಾಡು,ದೇಶ ಕಂಡ ಅಪರೂಪದ ಜೀವ ದೈವ. ನಿಭೀ೯ಡೆ…

ಗದಗನಲ್ಲಿ ಎಇಇ ಮನೆ ಮೇಲೆ ಎಸಿಬಿ ದಾಳಿ

ಗದಗ: ಇಲ್ಲಿನ ರಾಜೀವ್ ಗಾಂಧಿ ನಗರದಲ್ಲಿರುವ ಬಾಗಲಕೋಟೆ ಜಿಲ್ಲೆಯ ನೀರು‌ ಸರಬರಾಜು ಮಂಡಳಿಯ ಎಇಇ ಹನುಮಂತ…

ಗದಗ ಬೆಟಗೇರಿ ನಗರಸಭೆ ಸಾರ್ವತ್ರಿಕ ಚುನಾವಣೆ-2021 ಮತಗಟ್ಟೆಗಳ ಬದಲಾವಣೆ ಮಾಡಿದ ಮಾಹಿತಿ

ಗದಗ ಬೆಟಗೇರಿ ನಗರಸಭೆ ಸಾರ್ವತ್ರಿಕ ಚುನಾವಣೆ ನೇದ್ದಕ್ಕೆ ಸಂಬOಧಿಸಿದ ಬೆಟಗೇರಿಯಲ್ಲಿನ ಈ ಕೆಳಗಿನ ಮತಗಟ್ಟೆಗಳನ್ನು ಬದಲಾವಣೆ…

ನಾಡಿನ ಸಂಸ್ಕೃತಿ ಉಳಿಸಿ ಬೆಳಸುವಲ್ಲಿ ಕಸಾಪ ಮಹತ್ವ ಪಾತ್ರ ಹೊಂದಿದೆ

ಪಟ್ಟಣದಲ್ಲಿ ಕನ್ನಡ ನಾಡು, ನುಡಿ, ಭಾಷೆ, ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಕನ್ನಡ ಸಾಹಿತ್ಯ ಪರಿಷತ್‌ನಿಂದ 300ಕ್ಕೂ ಹೆಚ್ಚು ಕಾರ್ಯಕ್ರಮಗಳನ್ನು ನಡೆಸುವ ಮೂಲಕ ಹೊಸ ಭಾಷ್ಯ ಬರೆದಿದೆ ಎಂದು ಕಸಾಪ ತಾಲೂಕಾಧ್ಯಕ್ಷ ಐ.ಎ. ರೇವಡಿ ಹೇಳಿದರು.