ನಟ ಪುನೀತ್ ರಾಜ್ ಕುಮಾರ್ ತೀವ್ರ ಅಸ್ವಸ್ಥ:ವಿಕ್ರಮ್ ಆಸ್ಪತ್ರೆಯತ್ತ ಗಣ್ಯರ ದೌಡು

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ಆರೋಗ್ಯದಲ್ಲಿ ಇದ್ದಕ್ಕಿದ್ದಂತೆ ಏರುಪೇರಾದ ಹಿನ್ನೆಲೆಯಲ್ಲಿ ಅವರನ್ನು ಖಾಸಗಿ ಆಸ್ಪತ್ರೆಯೊಂದಕ್ಕೆ ಚಿಕಿತ್ಸೆಗೆ ದಾಖಿಸಲಾಗಿದೆ.

ಇಂದು ಜಿಮ್ ನಲ್ಲಿ ಕಸರತ್ತು ಮಾಡುವ ವೇಳೆಯಲ್ಲಿ ಆರೋಗ್ಯದಲ್ಲಿ ಸ್ವಲ್ಪ ಸಮಸ್ಯೆ ಕಂಡುಬAದಿದ್ದು, ತಕ್ಷಣ ಅವರನ್ನು ವಿಕ್ರಂ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ತುರ್ತು ನಿಗಾ ಘಟಕದಲ್ಲಿ ಅವರಿಗೆ ಇಸಿಜಿ ಸೇರಿದಂತೆ ಹಲವು ಪರೀಕ್ಷೆಗಳನ್ನು ಮಾಡಲಾಗುತ್ತಿದ್ದು,ಶಿವರಾಜ್ ಕುಮಾರ್ ಪುತ್ರಿ ಸೇರಿದಂತೆ ಹಲವರು ಆಸ್ಪತ್ರೆಗೆ ದೌಡಾಯಿಸಿದ್ದಾರೆ. ವಿಕ್ರಂ ಆಸ್ಪತ್ರೆಗೆ ಮುಖ್ಯಮಂತ್ರಿ ಬಸವರಾಜ ಬೋಮ್ಮಾಯಿ ,ಮಾಜಿ ಮುಖ್ಯಮಂತ್ರಿ ಕುಮಾರ ಸಾಮಿ, ನಟ ಯಶ್, ದರ್ಶನ್, ಗಣೇಶ್ ,ನಿಖಿಲ್ ಕುಮಾರಸ್ವಾಮಿ, ನಿನಾಸಂ ಸತೀಸ್ ಗಣ್ಯಾತಿಗಣ್ಯರು ಸೇರಿದಂತೆ ಅಪಾರ ಅಭಿಮಾನಿಗಳು ಆಗಮಿಸುತ್ತಿದ್ದು, ಹೆಚ್ಚಿನ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಹಿರಿಯ ಪೊಲೀಸ್ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡುತ್ತಿದ್ದಾರೆ. ಪುನೀತ್ ರಾಜ್ ಕುಮಾರ್ ಅವರ ನಿವಾಸದ ಬಳಿಯೂ ಭಾರೀ ಭದ್ರತೆ ಒದಗಿಸಲಾಗಿದೆ.

ಪುನೀತ್ ರಾಜ್ ಕುಮಾರ್ ಬೇಗ ಗುಣಮುಖ ಗುಣಮುಖರಾಗಲಿ ಎಂಬುದು ಉತ್ತರಪ್ರಭ ಮತ್ತು ಅಭಿಮಾನಿಗಳ ಪ್ರಾರ್ಥನೆ

Exit mobile version