ರಾಜ್ಯ: ಸೆ.12ರಂದು  ನೀಟ್ ಪರೀಕ್ಷೆಯು ರಾಜ್ಯಾದ್ಯಂತ 202 ಪರೀಕ್ಷಾ ಕೇಂದ್ರಗಳಲ್ಲಿ ನಡೆದಿದ್ದು, ಒಟ್ಟು 16.1 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಇದೆ ಸೋಮವಾರ ಸಂಜೆ ನೀಟ್ ಫಲಿತಾಂಶವನ್ನು ಪ್ರಕಟಿಸಿದೆ.

ವೈದ್ಯಕೀಯ ಮತ್ತು ದಂತವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸುವ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ(ನೀಟ್) 2021ರ ಫಲಿತಾಂಶ ಪ್ರಕಟವಾಗಿದ್ದು, ರಾಜ್ಯದ ಇಬ್ಬರು ವಿದ್ಯಾರ್ಥಿಗಳು ಅಖಿಲ ಭಾರತ ಮಟ್ಟದಲ್ಲಿ (ಎಐಆರ್) 5ನೇ ರ್ಯಾಂಕ್​ ಪಡೆಯುವ ಮೂಲಕ ಕರ್ನಾಟಕ ಟಾಪರ್ ಎಂಬ ಕೀರ್ತಿ ಪಡೆದಿದ್ದಾರೆ.

ಎಚ್.ಕೆ.ಮೇಘನ್: ನೀಟ್ ಪರೀಕ್ಷೆಯಲ್ಲಿ 5ನೇ ರ್ಯಾಂಕ್​ ಬಂದಿರುವುದು ಸಂತಸವನ್ನು ತಂದಿದೆ. ದೆಹಲಿಯ ಏಮ್ಸ್‌ನಲ್ಲಿ ಎಂಬಿಬಿಎಸ್ ಕೋರ್ಸ್‌ಗೆ ಸೇರಬೇಕು ಎಂದುಕೊಂಡಿದ್ದೇನೆ. ವೈದ್ಯನಾಗಬೇಕೆಂಬ ಕನಸು ಇಟ್ಟುಕೊಂಡಿದ್ದ ಹಿನ್ನೆಲೆಯಲ್ಲಿ ಪ್ರೌಢಶಾಲೆಗೆ ಬಂದ ತಕ್ಷಣವೇ ನೀಟ್ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದೆ. ಕರೊನಾ ರಜೆ ಸಿಕ್ಕ ಕಾರಣ ಓದಲು ಮತ್ತಷ್ಟು ಅವಕಾಶ ಸಿಕ್ಕಂತಾಯಿತು. ಈ ಸಾಧನೆಗೆ ಎಲ್ಲ ಪ್ರೋತ್ಸಾಹ ನೀಡಿದ ನನ್ನ ಪಾಲಕರಿಗೆ ಹಾಗೂ ಉಪನ್ಯಾಸಕರಿಗೆ ಧನ್ಯವಾದಗಳು ಎಂದು ಹೇಳಿದರು.

Leave a Reply

Your email address will not be published. Required fields are marked *

You May Also Like

ಇಂದೂ ಆರ್ಭಟಿಸಲಿದ್ದಾನೆ ಮಳೆರಾಯ – ಹಲವೆಡೆ ಯೆಲ್ಲೋ ಅಲರ್ಟ್ ಘೋಷಣೆ!

ಬೆಂಗಳೂರು : ರಾಜ್ಯದಲ್ಲಿ ಮಳೆರಾಯನ ಅಟ್ಟಹಾಸ ಮುಂದುವರೆದಿದ್ದು, ಇಂದು 5 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನುಳಿದ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

5 ವರ್ಷದೊಳಗಿನ ಮಕ್ಕಳಿಗೆ ತಪ್ಪದೇ ಪಲ್ಸ್ ಪೋಲಿಯೋ ಲಸಿಕೆ ಹಾಕಿಸಿ

ಆರೋಗ್ಯವಂತ ಮಕ್ಕಳು ದೇಶದ ಸಂಪತ್ತು, 5 ವರ್ಷದೊಳಗಿನ ಮಕ್ಕಳಿಗೆ ತಪ್ಪದೇ ಪಲ್ಸ್ ಪೋಲಿಯೋ ಲಸಿಕೆ ಹಾಕಿಸಿ. ಎಂದು ಪಟ್ಟಣ ಪಂಚಾಯ್ತಿ ಅಧ್ಯಕ್ಷ ಹೊನ್ನಪ್ಪ ವಡ್ಡರ ಹೇಳಿದರು.

ಕೊರೊನಾಕ್ಕೆ ಬೆಚ್ಚಿಬಿದ್ದ ಕರುನಾಡು: ಸೋಂಕಿತರ ಸಂಖ್ಯೆ 1267, ಯಾವ ಜಿಲ್ಲೆಯಲ್ಲಿ ಎಷ್ಟು..?

ಬೆಂಗಳೂರು: ರಾಜ್ಯದಲ್ಲಿಂದು 1267 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 13190…