ಉತ್ತರಪ್ರಭ ಸುದ್ದಿ
ಗದಗ
: ದಿ 7-03-2013 ರಂದು ಚಿಕ್ಕಮಗಳೂರು, ಗದಗ – ಬೆಟಗೇರಿ, ಹೊಸಪೇಟೆ ಮತ್ತು ಶಿರಾ ನಗರಸಭೆಗಳು ಹಾಗೂ ಅಥಣಿ, ಅಣ್ಣಿಗೇರಿ ಮತ್ತು ಬಂಕಾಪುರ ಪುರಸಭೆಗಳಿಗೆ ಸಾರ್ವತ್ರಿಕ ಚುನಾವಣೆಯನ್ನು ನಡೆಸಲಾಗಿರುತ್ತದೆ. ಸದರಿ ನಗರ ಸ್ಥಳೀಯ ಸಂಸ್ಥೆಗಳ ಅವಧಿಯು 2019 ನೇ ಸಾಲಿನ ಮಾರ್ಚ್ ಮಾಹೆಯ ವಿವಿಧ ದಿನಾಂಕಗಳಲ್ಲಿ ಮುಕ್ತಾಯವಾಗಿರುತ್ತದೆ. ಸದರಿ 7 ನಗರ ಸ್ಥಳೀಯ ಸಂಸ್ಥೆಗಳಿಗೆ 2011ರ ಜನಗಣತಿಯಂತ ಸರ್ಕಾರವು ಕ್ಷೇತ್ರ ಪುನರ್ವಿಂಗಡಣೆ ಮಾಡಿ, ವಾರ್ಡುವಾರು ಮೀಸಲಾತಿಯನ್ನು ನಿಗದಿಪಡಿಸಿ ಅಧಿಸೂಚಿಸಿ ರಾಜ್ಯಪತ್ರದಲ್ಲಿ ಪುಕಟಿಸಿದ. ಸರ್ಕಾರವು ನಿಗದಿಪಡಿಸಿದ ಕ್ಷೇತ್ರವಿಂಗಡಣ ಮತ್ತು ವಾರ್ಡುವಾರು ಮೀಸಲಾತಿ ಅಧಿಸೂಚನೆಗಳನ್ನು ಪ್ರಶ್ನಿಸಿ ಮಾನ್ಯ ಉಚ್ಚನ್ಯಾಯಾಲಯದ ವಿವಿಧ ಪೀಠಗಳಲ್ಲಿ ಪಕರಣಗಳು ದಾಖಲಾಗಿರುತ್ತವೆ. ಪ್ರಸ್ತುತ ಬೆಂಗಳೂರು, ಮಾನ್ಯ ಉಚ್ಚ ನ್ಯಾಯಾಲಯವು ಸ್ವಯಂಪ್ರೇರಿತವಾಗಿ ದಾಖಲು ಮಾಡಿಕೊಂಡಿದ್ದ ಪ್ರಕರಣ ಸಂಖ್ಯೆ: 14925/2020 (SUO – MOTU) ರಲ್ಲಿ ನೀಡಲಾದ ಮಧ್ಯಂತರ ಆದೇಶದಂತೆ ಸರ್ಕಾರವು ಪರಿಷ್ಕೃತ ವಾರ್ಡುವಾರು ಮೀಸಲಾತಿಯನ್ನು ಆಯೋಗಕ್ಕೆ ದಿನಾಂಕ: 26.11.2021 ರೊಳಗೆ ಒದಗಿಸುವಂತೆ ಹಾಗೂ ದಿನಾಂಕ: 30.12.2021 ರ ಒಳಗೆ ಅವಧಿ ಮುಕ್ತಾಯಗೊಂಡಿರುವ ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಲು ಕ್ರಮ ಕೈಗೊಳ್ಳುವಂತೆ ನ್ಯಾಯಾಲಯವು ಆದೇಶಿಸಿದೆ. ಅದರಂತೆ, ಸರ್ಕಾರವು ವಾರ್ಡುವಾರು ಅಂತಿಮ ಮೀಸಲಾತಿಯನ್ನು ನಿಗದಪಡಿಸಿ ಅಧಿಸೂಚಿಸಿ ರಾಜ್ಯಪತ್ರದಲ್ಲಿ ಪ್ರಕಟಿಸಿದೆ.ಸದರಿ ಒಟ್ಟು 58 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಲು ಪೂರ್ವಸಿದ್ಧತೆಗಳನ್ನು ಮಾಡಿಕೊಂಡಿದ್ದು, ವಾರ್ಡುವಾರು ಮತದಾರರ ಪಟ್ಟಿಯನ್ನು ಸಂಬAಧಪಟ್ಟ ಜಿಲ್ಲಾಧಿಕಾರಿಗಳು ಈಗಾಗಲೇ ಪ್ರಕಟಪಡಿಸಿರುತ್ತಾರೆ. ಅಂತಿಮ ವಾರ್ಡುವಾರು ಮೀಸಲಾತಿಯನ್ನು ಆಯೋಗದ ವೆಬ್‌ಸೈಟ್ www.karsec.gov.in ಪ್ರಚುರ ಪಡಿಸಲಾಗಿದೆ.

ಚುನಾವಣಾ ವೇಳಾಪಟ್ಟಿ:

1) ಜಿಲ್ಲಾಧಿಕಾರಿಗಳು ಚುನಾವಣಾ ಅಧಿಸೂಚನೆಯನ್ನು ಹೊರಡಿಸುವ ದಿನಾಂಕ ಮತ್ತು ದಿನ 08.12.2021 (ಬುಧವಾರ),
2) ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನಾಂಕ ಮತ್ತು ದಿನ 15.12.2021 (ಬುಧವಾರ),
3) ನಾಮಪತ್ರಗಳನ್ನು ಪರಿಶೀಲಿಸುವ ದಿನಾಂಕ ಮತ್ತು ದಿನ 16.12.2021 (ಗುರುವಾರ),
4) ಉಮೇದುವಾರಿಕೆಗಳನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನಾಂಕ ಮತ್ತು ದಿನ 18.12.2021 (ಶನಿವಾರ),
5) ಮತದಾನ ಅವಶ್ಯವಿದ್ದರೆ, ಮತದಾನವನ್ನು ನಡೆಸಬೇಕಾದ ದಿನಾಂಕ ಮತ್ತು ದಿನ (ಸಮಯ ಬೆಳಿಗ್ಗೆ 7.00 ಗಂಟೆಯಿAದ ಸಾಯಂಕಾಲ 5.00 ಗಂಟೆಯವರೆಗೆ), 27.12.2021 (ಸೋಮವಾರ),
6) ಮರು ಮತದಾನ ಇದ್ದಲ್ಲಿ ಮತದಾನ ನಡೆಸಬೇಕಾದ ದಿನಾಂಕ ಮತ್ತು ದಿನ (ಸಮಯ ಬೆಳಿಗ್ಗೆ 7.00 ಗಂಟೆಯಿAದ ಸಾಯಂಕಾಲ 5.00 ಗಂಟೆವರೆಗೆ) 29.12.2021 (ಬುಧವಾರ),
7) ಮತಗಳ ಎಣಿಕೆಯ ದಿನಾಂಕ ಮತ್ತು ದಿನ (ಬೆಳಿಗ್ಗೆ 8.00 ಗಂಟೆಯಿAದ) (ತಾಲ್ಲೂಕಿನ ಕೇಂದ್ರ ಸ್ಥಳದಲ್ಲಿ) 30.12.2021 (ಗುರುವಾರ),
8) ಚುನಾವಣೆಯನ್ನು ಯಾವ ದಿನಾಂಕಕ್ಕೆ ಮುಂಚೆ ಮುಕ್ತಾಯಗೊಳಿಸಬೇಕೋ ಆ ದಿನಾಂಕ ಮತ್ತು ದಿನ 30.12.2021 (ಗುರುವಾರ).
ಸದಾಚಾರ ಸಂಹಿತೆಯು ದಿನಾಂಕ: 08.12.2021 ರಿಂದ ದಿನಾಂಕ: 30.12.2021 ರವರೆಗೆ ಸಾರ್ವತ್ರಿಕ ಚುನಾವಣೆ ನಡೆಯುವ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಮತ್ತು ಉಪ ಚುನಾವಣೆ ನಡೆಯುವ ನಗರ ಸ್ಥಳೀಯ ಸಂಸ್ಥೆಗಳ ವಾರ್ಡ್ ವ್ಯಾಪ್ತಿಯಲ್ಲಿ ಜಾರಿಯಲ್ಲಿರುತ್ತದೆ.

Leave a Reply

Your email address will not be published. Required fields are marked *

You May Also Like

ಗದಗ ಜಿಲ್ಲೆಯಲ್ಲಿಂದು 116 ಕೊರೊನಾ ಪಾಸಿಟಿವ್!

ಜಿಲ್ಲೆಯಲ್ಲಿಂದು 116 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3894 ಕ್ಕೆ ಏರಿಕೆಯಾಗಿದೆ. ಸೋಂಕಿನಿಂದ ಗುಣಮುಖರಾಗಿ ಇಂದು 121 ಜನರು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಈ ಮೂಲಕ ಒಟ್ಟು ಬಿಡುಗಡೆ ಹೊಂದಿದವರ ಸಂಖ್ಯೆ 2756.

ಉತ್ತರ ಪ್ರಭ ನ್ಯೂಸ್ ಪೋರ್ಟಲ್ ಲೋಕಾರ್ಪಣೆ

ಉತ್ತರ ಪ್ರಭ ದಿನ ಪತ್ರಿಕೆ ಕಾರ್ಯಾಲಯದಲ್ಲಿ ನಡೆದ ಉತ್ತರ ಪ್ರಭ ನ್ಯೂಸ್ ಪೋರ್ಟಲ್ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಆಯುರ್ವೇದ ವೈದ್ಯ ಡಾ.ಕೆ.ಯೋಗೇಶನ್ ಮಾತನಾಡಿದರು.

ಶಾಂತಿಯಿಂದ ಹೋಳಿ ಆಚರಿಸಿ

ಯಾರಿಗೂ ತೊಂದರೆಯಾಗದಂತೆ ಹೋಳಿ ಹಬ್ಬವನ್ನು ಆಚರಿಸಬೇಕು. ಹಬ್ಬದ ನೆಪದಲ್ಲಿ, ಸಾವರ್ಜನಿಕ ಸ್ಥಳಗಳಲ್ಲಿ ಅಶ್ಲೀಲ ಬರಹಗಳನ್ನು ಬರೆಯುವುದು, ಶಾಲಾ ಕಾಲೇಜುಗಳ ಗೋಡೆಗಳಿಗೆ ಬಣ್ಣ ಎರೆಚುವುದು ಕಂಡುಬಂದಲ್ಲಿ ಅಥವಾ ಸಾರ್ವಜನಿಕ ಆಸ್ತಿ ಪಾಸ್ತಿ ಹಾನಿ ಮಾಡಿದರೆ ಅಂತಹವರ ವಿರುದ್ಧ ಕಠೀಣ ಕ್ರಮ ಕೈಗೊಳ್ಳಲಾಗುವುದು.

ಚಾಲಕನ ನಿಯಂತ್ರಣ ತಪ್ಪಿ ವಾಹನ ಪಲ್ಟಿ

ಚಾಲಕನ ನಿಯಂತ್ರಣ ತಪ್ಪಿ ಟಾಟಾ ಏಸ್ ವಾಹನ ಮಗುಚಿ ಬಿದ್ದು ಸ್ಥಳದಲ್ಲಿ ಓರ್ವ ವ್ಯಕ್ತಿ ಸಾವನ್ನಪಿದ್ದು, ಐವರು ಪ್ರಯಾಣಿಕರು ತೀವ್ರವಾಗಿ ಗಾಯಗೊಂಡಿರುವ ಘಟನೆ ಶುಕ್ರವಾರ ಲಕ್ಷ್ಮೇಶ್ವರ ತಾಲೂಕಿನ ಅಕ್ಕಿಗುಂಧ ರಸ್ತೆಯಲ್ಲಿ ನಡೆದಿದೆ.