ಹೆಲಿಕಾಪ್ಟರ್ ಪತನ: ಸೇನಾ ಮುಖ್ಯಸ್ಥ ಬಿಪಿನ್ ರಾವತ್ ನಿಧನ

ಉತ್ತರಪ್ರಭ ಸುದ್ದಿ

ತಮಿಳುನಾಡು: ತಮಿಳುನಾಡಿನಲ್ಲಿ ಸಂಭವಿಸಿದ ಹೆಲಿಕಾಪ್ಟರ್ ಪತನದಲ್ಲಿ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ನಿಧನರಾಗಿದ್ದಾರೆ.

ಇಂದು ತಮಿಳುನಾಡಿನ ಊಟಿ ಬಳಿಯ ಕುನೂರು ಅರಣ್ಯ ಪ್ರದೇಶದಲ್ಲಿ ಬುಧವಾರ ಸೇನಾ ಹೆಲಿಕಾಪ್ಟರ್ ಪತನವಾಗಿದ್ದು, ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ. Mi-17V5 ಸೇನಾ ಹೆಲಿಕಾಪ್ಟರ್ ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಸಿಡಿಎಸ್ ಜನರಲ್ ಬಿಪಿನ್ ರಾವತ್ ಪತ್ನಿ ಮಧುಲಿಕಾ ರಾವತ್ ಸೇರಿ 13 ಮಂದಿ ದರ‍್ಮರಣಕ್ಕೀಡಾಗಿದ್ದಾರೆ. ಇನ್ನು ಬಿಪಿನ್ ರಾವತ್ ನಿಧನರಾಗಿದ್ದಾರೆ.


ಸೇನಾ ಹೆಲಿಕಾಪ್ಟರ್ ಪತನ; ಮೋದಿಗೆ ಮಾಹಿತಿ ನೀಡಿದ ರಾಜನಾಥ್ ಸಿಂಗ್ ತಮಿಳುನಾಡಿನ ನೀಲಗಿರಿ ಜಿಲ್ಲೆಯ ಕೂನೂರಿನಲ್ಲಿ ಸೇನಾ ಹೆಲಿಕಾಪ್ಟರ್ ಪತನಗೊಂಡಿದೆ. ಈ ಸೇನಾ ಹೆಲಿಕಾಪ್ಟರ್ ಸೇನೆಯ ಐವರು ಹಿರಿಯ ಅಧಿಕಾರಿಗಳ ಸಹಿತ ಸೇನಾ ರಕ್ಷಣಾ ಪಡೆ ಸಿಬ್ಬಂದಿಗಳ ಮುಖ್ಯಸ್ಥ ಬಿಪಿನ್ ರಾವತ್ ಮತ್ತು ಅವರ ಪತ್ನಿ ಸೇರಿ ಒಟ್ಟು 14 ಮಂದಿ ಪ್ರಯಾಣಿಸುತ್ತಿದ್ದರು. ಇವರು ಸೇನಾ ಕಾಲೇಜಿನ ಕರ‍್ಯಕ್ರಮದಲ್ಲಿ ಭಾಗಿಯಾಗಲು ತೆರಳುತ್ತಿದ್ದರು ಎಂದು ಹೇಳಲಾಗುತ್ತಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ ಮಾಹಿತಿ ನೀಡಿದ್ದಾರೆ. ಆ ಬಳಿಕ ಕೇಂದ್ರ ಸಚಿವ ಸಂಪುಟದ ತರ‍್ತು ಸಭೆ ಕರೆಯಲಾಗಿದೆ. ಇನ್ನು ಘಟನಾ ಸ್ಥಳದಲ್ಲಿ 8 ಮೃತ ದೇಹಗಳು ಪತ್ತೆಯಾಗಿವೆ. ಇನ್ನು ಮಿ-ಸೀರೀಸ್ ಹೆಲಿಕಾಪ್ಟರ್ ಕೊಯಮತ್ತೂರು ಮತ್ತು ಸುಲೂರ್ ನಡುವೆ ಅಪಘಾತಕ್ಕೀಡಾಗಿದೆ. ಈವರೆಗಿನ ಲಭ್ಯವಿರುವ ಮಾಹಿತಿಯ ಪ್ರಕಾರ, ಅಪಘಾತವಾದ ಹೆಲಿಕಾಪ್ರ‍್ನಲ್ಲಿ ಮಧುಲಿಕಾ ರಾವತ್, ಬ್ರಿಗೇಡಿಯರ್ ಎಲ್. ಎಸ್. ನಾಯಕ, ಲೆಫ್ಟಿನೆಂಟ್ ರ‍್ಜಿಂದರ್ ಸಿಂಗ್, ಎನ್. ಕೆ. ಗುರ್ ಸೇವಕ್ ಸಿಂಗ್, ಎನ್. ಕೆ. ಜಿತೇಂದ್ರ ಸಿಂಗ್, ಎಲ್.ಎನ್. ಕೆ. ವಿವೇಕ್ ಕುಮಾರ್, ಎಲ್.ಎನ್. ಕೆ. ಬಿ. ಸಾಯಿ ತೇಜ, ಎಚ್. ಎ.ವಿ. ಸಾತ್ಪಾಲ್ ಅವರನ್ನು ಹೊತ್ತೊಯ್ಯುತ್ತಿತ್ತು ಎನ್ನಲಾಗಿದೆ.

Exit mobile version