ಶೌರ್ಯ ಪ್ರಶಸ್ತಿ ಮೊತ್ತ 5 ಪಟ್ಟು ಹೆಚ್ಚಳ: ಸಿಎಂ ಘೋಷಣೆ

ಉತ್ತರಪ್ರಭ

ಬೆಳಗಾವಿ: ಸೈನಿಕರಿಗೆ ನೀಡುವ ಪ್ರಶಸ್ತಿ ಮೊತ್ತವನ್ನು 5 ಪಟ್ಟು ಹೆಚ್ಚಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ.ನಗದು ಅನುದಾನದ ಮೊತ್ತದ ಬಗ್ಗೆ ಪರಿಷ್ಕರಣೆ ನಡೆಸಿದ ಸರ್ಕಾರ ಶೌರ್ಯ ಪ್ರಶಸ್ತಿ ವಿಜೇತರಿಗೆ ನೀಡುವ ನಗದು ಅನುದಾನವನ್ನು ಇದೀಗ ಐದು ಪಟ್ಟು ಹೆಚ್ಚಿಸಿದೆ.

ಪರಮವೀರ ಚಕ್ರ 25 ಲಕ್ಷದಿಂದ 1.5 ಕೋಟಿ ರೂ. ಗೆ ಹೆಚ್ಚಳ ಮಾಡಲಾಗಿದೆ. ಮಹಾವೀರ ಚಕ್ರ 12 ಲಕ್ಷದಿಂದ 1 ಕೋಟಿ‌ ರೂಪಾಯಿ, ಅಶೋಕ ಚಕ್ರ 25 ಲಕ್ಷದಿಂದ 1.5 ಕೋಟಿ ರೂಪಾಯಿ, ಕೀರ್ತಿ ಚಕ್ರ 12 ಲಕ್ಷದಿಂದ 1 ಕೋಟಿ ರೂಪಾಯಿ, ವೀರ ಚಕ್ರ 8 ಲಕ್ಷದಿಂದ 50 ಲಕ್ಷ ರೂಪಾಯಿ, ಶೌರ್ಯ ಚಕ್ರ 8 ಲಕ್ಷದಿಂದ 50 ಲಕ್ಷ ರೂಪಾಯಿ, ಸೇನಾ ಮೆಡಲ್‌ 2 ಲಕ್ಷದಿಂದ 15 ಲಕ್ಷ ರೂಪಾಯಿಗೆ ಹೆಚ್ಚಳ ಮಾಡಿ ಸಿಎಂ ಆದೇಶಿದ್ದಾರೆ.

ಪ್ರಶಸ್ತಿ ವಿಜೇತರಿಗೆ ಸುಮಾರು ಐದು ಪಟ್ಟು ಅನುದಾನವನ್ನು ಹೆಚ್ವಿಸಲಾಗಿದೆ. ಅವರ ಬಹಳ ವರ್ಷಗಳ ಬೇಡಿಕೆಯನ್ನು ಈಡೇರಿಸಿ ಆದೇಶವನ್ನು ಹೊರಡಿಸಿದೆ. ಇದು ಸೇನೆಗೆ ನಾವು ಸಲ್ಲಿಸುವ ಗೌರವ. ನಿವೃತ್ತರಾದ ಮೇಲೆ ಉತ್ತಮ ಜೀವನ ನಡೆಸಲು ಹಾಗೂ ಸಾವನ್ನಪ್ಪಿದಾಗ ಸಹಾಯ ಮಾಡುತ್ತಾ ಬಂದಿದ್ದೇವೆ. ಅವರನ್ನು ಗೌರವಿಸುವ ನಿಟ್ಟಿನಲ್ಲಿ ಅನುದಾನವನ್ನು ಹೆಚ್ವಿಸಲಾಗಿದೆ ಎಂದರು.

Exit mobile version