ಹೊಸದಿಲ್ಲಿ: ಮಹಿಳೆಯರ ವಿವಾಹದ ಕನಿಷ್ಠ ವಯಸ್ಸನ್ನು 18ರಿಂದ 21ಕ್ಕೆ ಏರಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಕಳೆದ ವರ್ಷದ ಸ್ವಾತಂತ್ರ್ಯೋತ್ಸವ ಭಾಷಣದ ವೇಳೆ ಪ್ರಧಾನಿ ಮೋದಿ ಈ ಪ್ರಸ್ತಾವನೆಯನ್ನು ಪ್ರಸ್ತಾಪಿಸಿದ್ದರು.
ಈ ಸರ್ಕಾರವು ಹೆಣ್ಣುಮಕ್ಕಳು ಮತ್ತು ಸಹೋದರಿಯರ ಆರೋಗ್ಯದ ಬಗ್ಗೆ ನಿರಂತರವಾಗಿ ಕಾಳಜಿ ವಹಿಸುತ್ತದೆ. ಹೆಣ್ಣು ಮಕ್ಕಳನ್ನು ಅಪೌಷ್ಟಿಕತೆಯಿಂದ ರಕ್ಷಿಸಲು, ಅವರು ಸರಿಯಾದ ವಯಸ್ಸಿನಲ್ಲಿ ಮದುವೆಯಾಗುವುದು ಅವಶ್ಯಕ ಎಂದು ಪ್ರಧಾನಿ ಹೇಳಿದರು.

ಪ್ರಸ್ತುತ, ಪುರುಷರ ಮದುವೆಯ ಕನಿಷ್ಠ ವಯಸ್ಸು 21 ಆದರೆ ಮಹಿಳೆಯರಿಗೆ ಇದು 18 ಆಗಿದೆ.ಯೋಜನೆಯನ್ನು ಕಾರ್ಯರೂಪಕ್ಕೆ ತರಲು ಬಾಲ್ಯವಿವಾಹ ನಿಷೇಧ ಕಾಯಿದೆ, ವಿಶೇಷ ವಿವಾಹ ಕಾಯಿದೆ ಮತ್ತು ಹಿಂದೂ ವಿವಾಹ ಕಾಯಿದೆಗಳಲ್ಲಿ ಬದಲಾವಣೆಗಳನ್ನು ಮಾಡಲು ಸರ್ಕಾರ ಬದ್ದವಾಗಿದೆ ಎಂದರು.