ಮತಾಂತರ ನಿಷೇಧ ಕಾಯ್ದೆ ವಿಧೆಯಕ ಮಂಡನೆ

ಬೆಳಗಾವಿ: ಬೆಳಗಾವಿಯ ಚಳಿಗಾಲದ ವಿಧಾನಸಭೆ ಅಧಿವೇಶನದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಧಾರ್ಮಿಕ ಸ್ವಾತಂತ್ರ್ಯ ಸಂರಕ್ಷಣೆ ಹಕ್ಕು ಕಾಯ್ದೆ-2021 ಅನ್ನು ಮಂಗಳವಾರ ಮಂಡಿಸಿದರು. ಮಂಗಳವಾರ ಮಧ್ಯಾಹ್ನ ಊಟದ ನಂತರ ಕಲಾಪ ಆರಂಭವಾದ ತಕ್ಷಣ ವಿಧಾನಸಭೆಯಲ್ಲಿ ಮತಾಂತರ ನಿಷೇಧ ವಿಧೇಯಕ ಮಂಡನೆಗೆ ಸ್ಪೀಕರ್ ವಿಶ್ವೇಶ್ವರ್ ಹೆಗಡೆ ಕಾಗೇರಿ ಅವಕಾಶ ನೀಡಿದರು. ವಿರೋಧ ಪಕ್ಷದ ಸದಸ್ಯರು ತೀವ್ರ ವಿರೋಧ ವ್ಯಕ್ತಪಡಿಸಿದರು. ವಿಧೇಯಕದ ಪ್ರತಿ ಕೊಟ್ಟಿಲ್ಲ, ಚರ್ಚೆ ಮಾಡಿಲ್ಲ ಎಂದು ವಿರೋಧ ಪಕ್ಷಗಳ ಸದಸ್ಯರು ಆಕ್ಷೇಪಿಸಿದರು. ಇಂತಹ ವಿಧೇಯಕಗಳನ್ನು ಕದ್ದುಮುಚ್ಚಿ ಏಕೆ ತರುತ್ತೀರಿ. ರಾಜ್ಯ ಸರ್ಕಾರ ಕಳ್ಳತನದಿಂದ ವಿಧೇಯಕ ಮಂಡಿಸಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ಷೇಪಿಸಿದರು. ಇದರ ಮಧ್ಯೆಯೇ ವಿಧಾನಸಭೆಯಲ್ಲಿ ಮತಾಂತರ ನಿಷೇಧ ವಿಧೇಯಕವನ್ನು ಗೃಹ ಸಚಿವ ಆರಗ ಜ್ಞಾನೇಂದ್ರ ಮಂಡಿಸಿದರು.

ಮತಾಂತರ ನಿಷೇಧ ಕಾಯ್ದೆ ವಿಧೆಯಕ ಮಂಡನೆ


ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ್ ಹೆಗಡೆ ಕಾಗೇರಿ ವಿಧಾನದ ಪ್ರಕಾರ ಮತಾಂತರ ವಿರೋಧಿ ಮಸೂದೆಯನ್ನು ಮಂಡಿಸಲು ಸರ್ಕಾರಕ್ಕೆ ಅನುಮತಿ ನೀಡಿದರು ಮತ್ತು ಅದನ್ನು ನಾಳೆ (ಡಿಸೆಂಬರ್ 22) ಚರ್ಚೆಗೆ ತೆಗೆದುಕೊಳ್ಳಲಾಗುವುದು ಎಂದು ಘೋಷಿಸಿದರು.

Exit mobile version