ಉತ್ತರಪ್ರಭ

ಮುಂಡರಗಿ: ಇಂದು ಅಕ್ರಮವಾಗಿ ಅಕ್ಕಿ ಸಾಗಾಟ ಮಾಡುತ್ತಿದ್ದ ಲಾರಿಯನ್ನು ಪೋಲಿಸರು ವಶ ಪಡೆದುಕೊಂಡ ಘಟನೆ ಮುಂಡರಗಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಇಂದು ಮುಂಡರಗಿ ಪೋಲಿಸರು ಭರ್ಜರಿ ಕಾರ್ಯಾಚರಣೆ ಮಾಡಿದ್ದು. ಪೋಲಿಸರಿಗೆ ಅಕ್ರಮ ಅಕ್ಕಿ ಸಾಗಾಟ ಮಾಡುತ್ತಿರುವ ಕುರಿತು ಮಾಹಿತಿ ಮೇರೆಗೆ ಕಾರ್ಯಾಚರಣೆ ಮಾಡಿ ಲಾರಿ ವಶಕ್ಕೆ ಪಡೆದಿದ್ದಾರೆ. ಇಂದು ಬೆಳಗಿನ ಜಾವ 6:30ಕ್ಕೆ ಮುಂಡರಗಿ ತಾಲೂಕಿನ ಮುಂಡವಾಡ ಗ್ರಾಮದ ಸಮೀಪ ಅಕ್ರಮ ಅಕ್ಕಿ ಸಾಗಾಟ ಮಾಡುತ್ತಿದ್ದ ಲಾರಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು ಲಾರಿ ಚಾಲಕ ಪರಾರಿಯಾಗಿದ್ದಾನೆ. ಮಾಲಕರು ಯಾರು ಮತ್ತು ಎಲ್ಲಿಂದ ಅಕ್ಕಿ ಸಾಗಾಣಿಕೆ ಮಾಡುತ್ತಿದ್ದರು ಎಂಬುದು ಇನ್ನೂ ತಿಳಿದು ಬಂದಿಲ್ಲ.

ಈ ಕುರಿತು ಮುಂಡರಗಿ ಪೋಲಿಸರು ಪ್ರಕರಣ ದಾಖಲಿಸಿ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *

You May Also Like

ಅನೈತಿಕ ಸಂಬಂಧದ ಹಿನ್ನಲೆಯಲ್ಲಿ ಪತ್ನಿಯಿಂದಲೇ ಪತಿಯ ಬರ್ಬರ ಹತ್ಯೆ..!

ಉತ್ತರಪ್ರಭ ಸುದ್ದಿ ಗದಗ: ಜಿಲ್ಲೆಯ ಲಕ್ಷೇಶ್ವರ ತಾಲೂಕಿನ ಸುವರ್ಣಗಿರಿ ತಾಂಡಾದಲ್ಲಿ ಪತ್ನಿಯಿಂದಲೇ ಪತಿಯ ಹತ್ಯೆಯಾದ ಘಟನೆ…

ಆಶ್ರಯ ನಿವಾಸಿಗಳು ಮತ್ತು ಸ್ಥಳೀಯ ಮುಸ್ಲಿಂ ಸಮುದಾಯದ ನಡುವೆ ಪರಸ್ಫರ ವಾಗ್ವಾದ

ಉತ್ತರಪ್ರಭ ಸುದ್ದಿ ಲಕ್ಷ್ಮೇಶ್ವರ: ಪಟ್ಟಣದ ಆಶ್ರಯ ಪ್ಲಾಟ್‌ವೊಂದರಲ್ಲಿ ಕಚ್ಚಾ ರಸ್ತೆ, ಚರಂಡಿ ನಿರ್ಮಾಣದ ಸಂಬಂಧ ಮಂಗಳವಾರ…

ಕೆಲಸ ಮಾಡುವಾಗ ವಿದ್ಯುತ್ ಪ್ರವಹಿಸಿ ಲೈನ್ ಮ್ಯಾನ್ ಸಾವು

ಮೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ: ಕುಟುಂಬಸ್ಥರ ಆರೋಪ ಗದಗ: ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಉಳವಿ…

ನಕಲಿ ಚಿನ್ನ ಅಡವಿಟ್ಟು ಕೋಟ್ಯಂತರ ರೂ. ಬ್ಯಾಂಕ್ ಗೆ ವಂಚನೆ

ಉತ್ತರಪ್ರಭ ಸುದ್ದಿ, ಗದಗ: ನಗರದ ಐಡಿಬಿಐ ಬ್ಯಾಂಕ್ ನಲ್ಲಿ ನಕಲಿ ಚಿನ್ನ ಅಡವಿಟ್ಟು 1 ಕೋಟಿ…