ಬೆಂಗಳೂರು, : ನೈಟ್‌ ಕರ್ಫ್ಯೂ ಎರಡು ವಾರ ಮುಂದುವರಿಕೆ, ವಾರಾಂತ್ಯದ ಲಾಕ್‌ಡೌನ್ ಜಾರಿ ಹಾಗೂ ಬೆಂಗಳೂರಿನಲ್ಲಿ 10-12ನೇ ತರಗತಿ ಹೊರತುಪಡಿಸಿ ಉಳಿದೆಲ್ಲಾ ಶಾಲೆಗಳನ್ನು ಮುಚ್ಚಿ ಕೇವಲ ಆನ್‌ಲೈನ್ ತರಗತಿ ನಡೆಸಲು ಸರ್ಕಾರ ತೀರ್ಮಾನ ಮಾಡಿದೆ.ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮಂಗಳವಾರ ಸಂಜೆ ಗೃಹ ಕಚೇರಿ ಕೃಷ್ಣಾದಲ್ಲಿ ಕೊರೊನಾ ವಿಷಯಕ್ಕೆ ಸಂಬಂಧಿಸಿದಂತೆ ತಜ್ಞರ ಸಭೆ ಕರೆಯಲಾಗಿತ್ತು. ರಾಜ್ಯದಲ್ಲಿ ಜಾರಿ ಮಾಡಬೇಕಾದ ಕಠಿಣ ರೂಲ್ಸ್‌ಗಳು, ಬೆಡ್‌ಗಳ ಲಭ್ಯತೆ, ಔಷಧಗಳ ದಾಸ್ತಾನು ಸಹಿತ ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಹಲವು ವಿಷಯಗಳ ಕುರಿತು ಚರ್ಚಿಸಲಾಗಿದೆ.ಜ.7 ಶುಕ್ರವಾರ ರಾತ್ರಿ 10ರಿಂದ ಸೋಮವಾರ ಜ.10ರವರೆಗೆ ವಾರಾಂತ್ಯದ ಕರ್ಫ್ಯೂ ಇರುತ್ತದೆ. ಇದರ ಜೊತೆಗೆ ಮುಂದಿನ ಎರಡು ವಾರ ರಾತ್ರಿ ಕರ್ಫ್ಯೂ ಮುಂದುವರಿಯುತ್ತದೆ ಎಂದು ಸಭೆಯ ಬಳಿಕ ಸಚಿವರಾದ ಆರ್. ಅಶೋಕ್ ಮತ್ತು ಡಾ.ಕೆ. ಸುಧಾಕರ್ ಹೇಳಿದರು.ಶಾಲೆಗಳಿಗೆ ಆನ್‌ಲೈನ್ ತರಗತಿ:
ನಗರ ಪ್ರದೇಶಗಳಲ್ಲಿ ಓಮಿಕ್ರಾನ್ ಪ್ರಕರಣಗಳು ಹೆಚ್ಚಾಗುತ್ತಿರುವ ಕಾರಣ ಬೆಂಗಳೂರಲ್ಲಿ 10-12ನೇ ತರಗತಿ ಹೊರತುಪಡಿಸಿ ಉಳಿದೆಲ್ಲಾ ಶಾಲೆ ಮುಚ್ಚಲು ತೀರ್ಮಾನಿಸಲಾಗಿದೆ. ಮಕ್ಕಳನ್ನು ಪ್ರತಿನಿತ್ಯ ಶಾಲೆಗೆ ಕರೆಯಿಸದೆ ಆನ್‌ಲೈನ್ ಮೂಲಕ ಮಾತ್ರ ತರಗತಿಗಳನ್ನು ನಡೆಸಲು ಸೂಚಿಸಲಾಗಿದೆ. ಇದು ಪದವಿ ಕಾಲೇಜುಗಳಿಗೂ ಅನ್ವಯಿಸುತ್ತದೆ ಎಂದು ಸಚಿವರು ಹೇಳಿದರು.

50:50 ರೂಲ್ಸ್‌:
ಸರ್ಕಾರಿ ಕಚೇರಿಗಳು ಭಾರತ ಸರ್ಕಾರದ ಮಾರ್ಗಸೂಚಿ ಅನುಸರಿಸಲು ತೀರ್ಮಾನಿಸಿ. ಉಳಿದಂತೆ ಚಿತ್ರಮಂದಿರ, ಮಾಲ್, ಬಾರ್, ಕ್ಲಬ್‌ಗಳಿಗೆ ಶೇ 50ರಷ್ಟು ಮಾತ್ರ ಆಸನಗಳ ಭರ್ತಿಗೆ ಅವಕಾಶ ನೀಡಲಾಗಿದೆ.ಮಹಾರಾಷ್ಟ್ರ, ಕೇರಳ ಮತ್ತು ಗೋವಾದಿಂದ ಬರುವ ಪ್ರಯಾಣಿಕರಿಗೆ ಆರ್‌ಟಿಪಿಸಿಆರ್ ಟೆಸ್ಟ್ ಮತ್ತು ನೆಗೆಟಿವ್‌ ರಿಪೋರ್ಟ್ ಕಡ್ಡಾಯ ಮಾಡಲಾಗಿದೆ. ವಿದೇಶಿ ಪ್ರಯಾಣಿಕರಿಗೆ ಭಾರತ ಸರ್ಕಾರದ ಮಾರ್ಗಸೂಚಿಗಳನ್ನು ಅನ್ವಯ ಮಾಡಲಾಗುತ್ತದೆ.

Leave a Reply

Your email address will not be published. Required fields are marked *

You May Also Like

ಕರ್ನಾಟಕದಲ್ಲಿ ಮತ್ತೆ ಕೊರೊನಾ ವೈರಸ್ ಸೋಂಕಿನ ಹಾವಳಿ..!

ರಾಜ್ಯದಲ್ಲಿ ಒಂದೇ ದಿನದಲ್ಲಿ 760 ಮಂದಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. 331 ಸೋಂಕಿತರು ಗುಣಮುಖರಾಗಿದ್ದು, ಆರು ಜನರು ಸೋಂಕಿನಿಂದ ಮೃತಪಟ್ಟಿದ್ದಾರೆ.

ಶಿಶುವಿನ ಜೀವ ಉಳಿಸಿದ ವೈದ್ಯರಿಗೆ ಸಚಿವ ಸಿ .ಸಿ .ಪಾಟೀಲರ ಅಭಿನಂದನೆ

ಉತ್ತರಪ್ರಭ ಸುದ್ದಿಗದಗ: ಮಹಿಳೆಯೊಬ್ಬರು ಮೃತ ಪಟ್ಟರೂ ಸಹ ಅತ್ಯಂತ ಕಾಳಜಿಯಿಂದ ಅಪರೂಪದ ಶಸ್ತ್ರಚಿಕಿತ್ಸೆ ನಡೆಸಿ ಅವರ…

ಹೆಚ್ಚಿದ ಕಾಂಗ್ರೆಸ್ ಆಕಾಂಕ್ಷಿಗಳ ಸಂಖ್ಯೆ: ಮುಂದೂಡಿದ ಅರ್ಜಿ ಸಲ್ಲಿಕೆ

ಉತ್ತರಪ್ರಭಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯಿಂದ ಮುಂದಿನ ವಿಧಾನ ಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದ…

ಮಹಾರಾಷ್ಟ್ರ ಸಿಎಂ ಗೆ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ತಿರುಗೇಟು

ಬೆಳಗಾವಿ : ಬೆಳಗಾವಿ ನಮ್ಮದು. ಬೆಳಗಾವಿಯ ಒಂದಿಂಚು ಜಾಗ ಬಿಟ್ಟುಕೊಡಲ್ಲ ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಮಹಾರಾಷ್ಟ್ರ ಸಿಎಂ ಗೆ ನೀಡಿದ್ದಾರೆ.