ಲಕ್ಷ್ಮೇಶ್ವರ :ಜಿಲ್ಲಾ ನಗರಾಭಿವೃದ್ಧಿ ಕೋಶ , ಜಿಲ್ಲಾಡಳಿತ ಗದಗವತಿಯಿಂದ ಕಾರ್ಯಲಯ ಲಕ್ಷ್ಮೇಶ್ವರ ಇವರ ಸಹಯೋಗದೊಂದಿಗೆ ಲಕ್ಷ್ಮೇಶ್ವರ ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪೌರಕಾರ್ಮಿಕರಿಗೆ ಹಾಗೂ ನೈರ್ಮಲ್ಯ ಕಾರ್ಯ ನಿರ್ವಹಿಸುವ ಸಿಬ್ಬಂದಗಳು, ವಾಹನ ಚಾಲಕರು ಮತ್ತು ಅವಲಂಬಿತ ಕಾರ್ಮಿಕರಿಗೆ ಮುಖ್ಯ ಆರೋಗ್ಯ ತಪಾಸಣೆ ಹಾಗೂ ಲಸಿಕಾ ಅಭಿಯಾನ ಹಮ್ಮಿಕೊಳ್ಳಲಾಯಿತು.

ಅಭಿಯಾನವನ್ನು ಉದ್ದೇಶಿಸಿ ಮಾತನಾಡಿದ ಲಕ್ಷ್ಮೇಶ್ವರ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ಅಧಿಕಾರಿ ಶ್ರೀಕಾಂತ್ ಕಾಟೇವಾಲೇ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಅಬ್ಬರಿಸಿ ಕೇಕೆಹಾಕುತ್ತಿದೆ. ಇದರ ವಿರುದ್ಧ ಆರೋಗ್ಯ ಇಲಾಖೆ, ಪೊಲಿಸ್ ಇಲಾಖೆ, ಪೌರ ಕಾರ್ಮಿಕರು ಸೇರಿದಂತೆ ಅನೇಕರು ವಾರಿಯರ್ಸ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ವಿಶೇಷ ಅಂದ್ರೆ ಪೌರ ಕಾರ್ಮಿಕರ ಸೇವೆ ಇಲ್ಲಿ ಅನನ್ಯ, ಯಾವುದೇ ರೋಗ ರುಜಿನಗಳು ಹರಡದಂತೆ ಕಾರ್ಮಿಕರು ಸಂಪೂರ್ಣ ನಗರವನ್ನು ಸ್ವಚ್ಛವಾಗಿಡುವಲ್ಲಿ ಶ್ರಮಿಸುತ್ತಾರೆ. ಹೀಗಾಗಿ ಇಂಥಹ ಕೊರೊನಾ ಸಂದರ್ಭದಲ್ಲಿ ಪೌರಕಾರ್ಮಿಕರು ತಮ್ಮ ಕುಟುಂಬವನ್ನೂ ಲೆಕ್ಕಿಸದೇ ಕೊರೊನಾ ವಾರಿಯರ್ಸ್​ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ಹೀಗಾಗಿ ಗದಗ ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆ ಇಂದು ಪುರಸಭೆ ಪೌರಕಾರ್ಮಿಕರ ಆರೋಗ್ಯ ಪರೀಕ್ಷೆ ನಡೆಸಿತು. ನೂರಕ್ಕೂ ಹೆಚ್ಚು ಕಾರ್ಮಿಕರಿಗೆ ಬಿಪಿ, ಶುಗರ್, ಥರ್ಮಲ್ ಸ್ಕ್ರೀನಿಂಗ್ ಸೇರಿದಂತೆ ಎಲ್ಲರಿಗೂ ಕೋರೋನಾ ಲಸಿಕೆ, ಸ್ವ್ಯಾಬ್ ಟೆಸ್ಟ್ ಮಾಡಲಾಯಿತು.

.

ಆರೋಗ್ಯ ಇಲಾಖೆ ಸಿಬ್ಬಂದಿ ಪಿಪಿಈ ಕಿಟ್ ಧರಿಸಿ ಪ್ರತಿಯೊಬ್ಬರ ಸ್ವ್ಯಾಬ್ ಕಲೆಕ್ಟ್ ಮಾಡಿದ್ರು. ನಂತರ ಚೆಕಪ್ ಮಾಡಿದ ಕೊಠಡಿ ಹಾಗೂ ಕಾರ್ಮಿಕರು ಸೇರಿದ್ದ ಸ್ಥಳವನ್ನು ಸಂಪೂರ್ಣವಾಗಿ ಸ್ಯಾನಿಟೈಸ್ ಮಾಡಲಾಯಿತು. ಇಡೀ ನಗರವನ್ನು ಸ್ವಚ್ಛಗೊಳಿಸುವ ಪೌರಕಾರ್ಮಿಕರ ಆರೋಗ್ಯ ಕಾಳಜಿಗೆ ಮುಂದಾದ ಆರೋಗ್ಯ ಇಲಾಖೆ‌ ಕಾರ್ಯಕ್ಕೆ ಸ್ಥಳಿಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದರು

Leave a Reply

Your email address will not be published. Required fields are marked *

You May Also Like

ಜುಲೈ 7ರ ನಂತರ ರಾಜ್ಯದಲ್ಲಿ ಲಾಕ್ ಡೌನ್?

ಬೆಂಗಳೂರು : ಸಿಲಿಕಾನ್ ಸಿಟಿ ಸೇರಿದಂತೆ ರಾಜ್ಯದಲ್ಲಿ ಕೊರೊನಾ ತನ್ನ ಅಟ್ಟಹಾಸ ಮುಂದುವರೆಸಿದೆ. ಈ ಸಂದರ್ಭದಲ್ಲಿ…

ಗದಗನಲ್ಲಿಂದು 18 ಕೊರೊನಾ ಪಾಸಿಟಿವ್: ಸೋಂಕಿತರ ಸಂಖ್ಯೆ 78 ಕ್ಕೆ ಏರಿಕೆ

ಗದಗ: ಜಿಲ್ಲೆಯಲ್ಲಿಂದು 18 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 78…

ರೋಣದಲ್ಲಿ ಭೀಕರ ಅಪಘಾತ, ಕಾರ ಬ್ಲಾಸ್ಟ್ : 3 ಜನರ ಸಾವು

ಉತ್ತರಪ್ರಭರೋಣ: ರೋಣದಿಂದ ಹೊರಟ್ಟಿದ್ದ ಕಾರು ನಿಯಂತ್ರಣ ತಪ್ಪಿ ಗಿಡಕ್ಕೆ ರಭಸವಾಗಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ…

ರೋಣದ ವಿವಿಧ ಹಳ್ಳಿಗಳಲ್ಲಿ ವಿದ್ಯುತ್ ವ್ಯತ್ಯಯ

ಉತ್ತರಪ್ರಭ ಸುದ್ದಿಗದಗ: 110/33/11 ಕೆವ್ಹಿ ರೋಣ, ವಿದ್ಯುತ್ ವಿತರಣಾ ಉಪ-ಕೇಂದ್ರದ 10 MVA ಪರಿವರ್ತಕದ ನಿರ್ವಹಣಾ…