ಗದಗ : ಕೋವಿಡ್ ಸೋಂಕು ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ಜಾರಿಗೊಳಿಸಿರುವ ಹೆಚ್ಚುವರಿ ನಿಯಂತ್ರಣ ಕ್ರಮಗಳನ್ನು ಜಿಲ್ಲಾದ್ಯಂತ ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಲು ವಿಪತ್ತು ನಿರ್ವಹಣಾ ಸಮಿತಿ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿ ಎಂ.ಸುAದರೇಶ್ ಬಾಬು ಅವರು ಆದೇಶ ಹೊರಡಿಸಿರುತ್ತಾರೆ.

ಸರ್ಕಾರದ ಮಾರ್ಗಸೂಚಿಗಳನ್ವಯ ದಿ. 05-01-2022 ರ ರಾತ್ರಿ 10 ಗಂಟೆಯಿAದ ದಿ.19-01-2022ರ ಬೆಳಗ್ಗೆ 5 ಗಂಟೆಯವರೆಗೆ ಈ ಆದೇಶವು ಜಾರಿಯಲ್ಲಿರಲಿದೆ. ಪ್ರಸ್ತುತ ಅಸ್ತಿತ್ವದಲ್ಲಿರುವ ಮಾರ್ಗಸೂಚಿಗಳ ಅನುಸಾರ ಗದಗ ಜಿಲ್ಲೆಯಾದ್ಯಂತ ರಾತ್ರಿ 10 ಗಂಟೆಯಿAದ ಬೆಳಿಗ್ಗೆ 05 ಗಂಟೆಯವರೆಗೆ ರಾತ್ರಿ ಕರ್ಫ್ಯೂ ವನ್ನು ಮುಂದುವರೆಸಲಾಗಿದೆ. ಈ ಅವಧಿಯಲ್ಲಿ ಎಲ್ಲಾ ಕಚೇರಿಗಳು ವಾರದಲ್ಲಿ ಐದು ದಿನ ಸೋಮವಾರದಿಂದ ಶುಕ್ರವಾರದವರೆಗೆ ಕಾರ್ಯನಿರ್ವಹಿಸುವುದು.

ಪಬ್‌ಗಳು / ಕ್ಲಬ್‌ಗಳು/ ರೆಸ್ಟೋರೆಂಟ್‌ಗಳು / ಬಾರ್‌ಗಳು / ಹೋಟೆಲ್‌ಗಳು / ಹೋಟೇಲುಗಳ ಊಟದ ಸ್ಥಳಗಳು ಹಾಗೂ ಸಿನಿಮಾ ಹಾಲ್‌ಗಳು/ ಮಲ್ಟಿಪ್ಲೆಕ್ಸ್/ ಸಿನಿಮಾ ಮಂದಿರಗಳು/ ರಂಗ ಮಂದಿರಗಳು/ ಸಭಾಭವನಗಳು ಇತ್ಯಾದಿಗಳು ಕೋವಿಡ್ ಸಮುಚಿತ ವರ್ತನೆಗಳನ್ನು (ಅಂಃ) ಕಡ್ಡಾಯವಾಗಿ ಪಾಲಿಸುವ ಷರತ್ತಿಗೊಳಪಟ್ಟು ಆಸನ ಸಾಮರ್ಥ್ಯದ ಶೇ.50 ರಷ್ಟು ಮಾತ್ರ ಕಾರ್ಯಾಚರಿಸುವುದು ಮತ್ತು ಇಂತಹ ಸ್ಥಳಗಳಲ್ಲಿ ಪೂರ್ಣಪ್ರಮಾಣದ ಕೋವಿಡ್-19 ಲಸಿಕೆಯನ್ನು ಪಡೆದಿರುವವರಿಗೆ ಮಾತ್ರ ಪ್ರವೇಶಕ್ಕೆ ಅನುಮತಿಸುವುದು.

ಕೋವಿಡ್-19 ಸಮುಚಿತ ವರ್ತನೆಗಳನ್ನು ಹಾಗೂ ಅಸ್ತಿತ್ವದಲ್ಲಿರುವ ಸರ್ಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವ ಷರತ್ತಿಗೊಳಪಟ್ಟು ಹೋರಾಂಗಣಗಳಲ್ಲಿ 200 ಜನರು ಮೀರದಂತೆ ಹಾಗೂ ಒಳಾಂಗಣಗಳಲ್ಲಿ 100 ಜನರು ಮೀರದಂತೆ ಮದುವೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಅನುಮತಿಸಿದೆ. ಧಾರ್ಮಿಕ ಸ್ಥಳಗಳಲ್ಲಿ ದರ್ಶನಕ್ಕೆ ಮಾತ್ರ ಅವಕಾಶ ಕಲ್ಪಿಸಿದೆ. ಯಾವುದೇ ಸೇವೆ ಇತ್ಯಾದಿಗಳಿಗೆ ಅವಕಾಶವಿಲ್ಲ. ಯಾವುದೇ ಸಮಯದಲ್ಲಿ ಪೂರ್ಣಪ್ರಮಾಣದ ಕೋವಿಡ್-19 ಲಸಿಕೆಯನ್ನು ಪಡೆದಿರುವ 50 ಜನರಿಗೆ ಮಾತ್ರ ಪ್ರವೇಶಕ್ಕೆ ಅನುಮತಿ ಇರುತ್ತದೆ. ಮಾಲ್‌ಗಳು, ವಾಣಿಜ್ಯ ಸಂಕೀರ್ಣಗಳು, ಎಲ್ಲಾ ಏಕ ಕಟ್ಟಡದಲ್ಲಿನ ಅಂಗಡಿಗಳು ಮತ್ತು ವಾಣಿಜ್ಯ ಸ್ಥಳಗಳು ವಾರದ ದಿನಗಳಲ್ಲಿ ಎಂದಿನAತೆ ಕಾರ್ಯನಿರ್ವಹಿಸಬೇಕು. ಈಜುಕೊಳಗಳು ಮತ್ತು ಜಿಮ್‌ಗಳು, ಕ್ರೀಡಾ ಸಂಕೀರ್ಣಗಳು ಮತ್ತು ಆಟದ ಮೈದಾನಗಳು ಸಾಮರ್ಥ್ಯದ ಶೇ.50 ರಷ್ಟು ಮಾತ್ರ ಕಾರ್ಯಾಚರಿಸಬೇಕು. ಅಲ್ಲಿಯೂ ಸಹ ಪೂರ್ಣ ಪ್ರಮಾಣದ ಕೋವಿಡ್-19 ಲಸಿಕೆಯನ್ನು ಪಡೆದಿರುವವರಿಗೆ ಮಾತ್ರ ಪ್ರವೇಶಕ್ಕೆ ಅನುಮತಿಸುವುದು. ಎಲ್ಲಾ ರೀತಿಯ ರ‍್ರ್ಯಾಲಿಗಳನ್ನು, ಧರಣಿಗಳನ್ನು, ಮುಷ್ಕರಗಳನ್ನು ನಿರ್ಬಂಧಿಸಲಾಗಿರುತ್ತದೆ.

ಜಿಲ್ಲಾದ್ಯಂತ ಶುಕ್ರವಾರ ರಾತ್ರಿ 10 ಗಂಟೆಯಿAದ ಸೋಮವಾರ ಬೆಳಗ್ಗಿನ 5 ಗಂಟೆಯವರೆಗಿನ ವಾರಾಂತ್ಯದ ಕರ್ಫ್ಯೂ ಜಾರಿಯಲ್ಲಿರಲಿದೆ. ಈ ಅವಧಿಯಲ್ಲಿ ತುರ್ತು ಕಾರ್ಯಗಳಿಗೆ ಜನರ ಅಗತ್ಯತೆಗಳನ್ನು ಪೂರೈಸಲು ಸಾರ್ವಜನಿಕ ಸಾರಿಗೆಗಳು ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಕರ ನಿರ್ದೇಶನಗಳನುಸಾರ ಕಾರ್ಯಾಚರಿಸುವುದು. ಈ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ವಿಪತ್ತು ನಿರ್ವರ್ಹಣಾ ಕಾನೂನಿನಡಿ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿಗಳ ಆದೇಶದಲ್ಲಿ ತಿಳಿಸಿರುತ್ತಾರೆ.

Leave a Reply

Your email address will not be published. Required fields are marked *

You May Also Like

ಗದಗ ಬೆಟಗೇರಿ ನಗರಸಭೆ ಸಾರ್ವತ್ರಿಕ ಚುನಾವಣೆ ಅಂತಿಮವಾಗಿ ಚುನಾವಣಾ ಕಣದಲ್ಲುಳಿದ ಅಭ್ಯರ್ಥಿಗಳ ಹಾಗೂ ಚಿಹ್ನೆ ಹಂಚಿಕೆ ವಾರ್ಡವಾರು ವಿವರ

ಗದಗ :ಗದಗ-ಬೆಟಗೇರಿ ನಗರಸಭೆ ಸಾರ್ವತ್ರಿಕ ಚುನಾವಣೆಗೆ ಅಂತಿಮವಾಗಿ  ಕಣದಲ್ಲಿ ಉಳಿದ ಅಭ್ಯರ್ಥಿಗಳ ವಿವರ ಇಂತಿದೆ: ವಾರ್ಡ…

Все возможности мобильного беттинга через MostBet mobile

Все возможности мобильного беттинга через MostBet mobile Где получить промокод на Мостбет…