ಬೆಂಗಳೂರು:  ಪದ್ಮನಾಭನಗರ ಕ್ಷೇತ್ರದ ಬಿಜೆಪಿ ಶಾಸಕ, ಕಂದಾಯ ಸಚಿವ ಆರ್. ಅಶೋಕಗೆ ಕೋವಿಡ್ ಸೋಂಕು ತಗುಲಿದೆ. ನಗರದ ಖಾಸಗಿ ಆಸ್ಪತ್ರೆಗೆ ಅವರು ದಾಖಲಾಗಿದ್ದಾರೆ.ಕೋವಿಡ್ ಸೋಂಕು ತಗುಲಿರುವ ಸಚಿವ ಆರ್. ಅಶೋಕ ಶುಕ್ರವಾರ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ.

ಕರ್ನಾಟಕದಲ್ಲಿ ಗುರುವಾರ 5031 ಹೊಸ ಕೋವಿಡ್ ಪ್ರಕರಣ ದಾಖಲಾಗಿತ್ತು. ಇದರಲ್ಲಿ ಬೆಂಗಳೂರು ನಗರದಲ್ಲಿಯೇ 4,324 ಪ್ರಕರಣ ಪತ್ತೆಯಾಗಿತ್ತು. ರಾಜ್ಯದ ಪಾಸಿಟಿವಿಟಿ ದರ ಶೇ 3.95 ಆಗಿದೆ. ಕರ್ನಾಟಕದಲ್ಲಿ ಕೋವಿಡ್ ಸೋಂಕು ಹರಡುವಿಕೆ ತಡೆಯಲು ಹಲವಾರು ನಿರ್ಬಂಧಗಳನ್ನು ಜಾರಿಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಶುಕ್ರವಾರ ರಾತ್ರಿ 10 ಗಂಟೆಯಿಂದ ವಾರಾಂತ್ಯದ ಕರ್ಫ್ಯೂ ಸಹ ಜಾರಿಗೆ ಬರುತ್ತಿದೆ. ಮಂಗಳವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಜ್ಞರ ಜೊತೆ ಸುಧೀರ್ಘ ಸಭೆ ನಡೆಸಿದ್ದರು. ಸಭೆಯಲ್ಲಿ ಕಂದಾಯ ಸಚಿವ ಆರ್. ಅಶೋಕ ಸಹ ಪಾಲ್ಗೊಂಡಿದ್ದರು. ಸಭೆಯ ಬಳಿಕ ಅವರೇ ಕಠಿಣ ನಿಯಮಗಳ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದರು.


Leave a Reply

Your email address will not be published. Required fields are marked *

You May Also Like

ಸಾರ್ವಜನಿಕರ ಗಮನಕ್ಕೆ

ಬೆಟಗೇರಿ ನಗರಸಭೆ ವ್ಯಾಪ್ತಿಯ ಖಸಾಯಿ ಖಾನೆಗಳಲ್ಲಿ ಮಹಾಶಿವರಾತ್ರಿ ಅಂಗವಾಗಿ ಮಾ.11 ರಂದು ಪ್ರಾಣಿವಧೆ ಹಾಗೂ ಮಾಂಸ ಮಾರಾಟ, ಜಾನುವಾರುಗಳ ವಧೆ ಮಾಡುವುದನ್ನು ನಿಷೇಧಿಸಲಾಗಿದೆ.

ಲಕ್ಷ್ಮೆಶ್ವರದಲ್ಲಿ ಮಣ್ಣು ಮುಕ್ಕುತ್ತಿದ್ದರೂ ಅಧಿಕಾರಿಗಳು ಮೌನ!

ಅನ್ನ ಭಾಗ್ಯ ಯೋಜನೆಯ ಅಕ್ಕಿ, ಮರಳು ಲೂಟಿ ಮಾಡುವುದು ಆಗಾಗ ಸಾಮಾನ್ಯವಾಗಿದೆ. ಆದರೆ, ತಾಲೂಕಿನಲ್ಲಿ ರೈತರ ಜಮೀನುಗಳಲ್ಲಿ ಮಣ್ಣು ಕೂಡ ಸದ್ದಿಲ್ಲದೇ ಲೂಟಿಯಾಗುತ್ತಿರುವುದು ಬೆಳಕಿಗೆ ಬಂದಿದೆ.

ಗದಗ-ಬೆಟಗೇರಿ ರೈಲ್ವೆ ಹೋರಾಟ ಸಮಿತಿಯಿಂದ ಮನವಿ

ನಗರದ ರೈಲು ನಿಲ್ದಾಣಕ್ಕೆ ನೈರುತ್ಯ ರೈಲ್ವೆ ಪ್ರಧಾನ ವ್ಯವಸ್ಥಾಪಕ ಅಜಯ್‌ಕುಮಾರ್ ಸಿಂಗ್ ಶುಕ್ರವಾರ ಭೇಟಿ ನೀಡಿ, ನಿಲ್ದಾಣದ ಆವರಣದಲ್ಲಿ ನಡೆಯುತ್ತಿರುವ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದರು.

ನನ್ನ ತೋಳಿನಾಸರೆ ನಿನಗೆ ಸಾಂತ್ವನ ನೀಡಲು ಕಾಯುತಿದೆ

ಪ್ರೇಮದ ಭಾಷೆ, ನೆನಪು,ತುಂಟಾಟಗಳ ಆಲಾಪವಾಗುತ್ತಿದೆ. ಸಾಂತ್ವಾನ ನೀಡಲು ತೋಳಿನಾಸರೆ ಸಖನಿಗಾಗಿ ಕಾಯುತ್ತಿವೆ. ಕಾಳಜಿ, ಪ್ರೀತಿ, ವಿಶ್ವಾಸ ಕಥೆಯ ಸಾರವಾಗಿದೆ. ಕಲ್ಪನಾ ಸಾಗರ್ ಅವರ ಲೇಖನವನ್ನು ನೀವು ಓದಿ…