ಗದಗ : ರಾಜ್ಯಾದ್ಯಂತ ಸೋಂಕು ನಿಯಂತ್ರಣಕ್ಕಾಗಿ ರ‍್ಕಾರ ಜಾರಿಗೊಳಿಸಿರುವ ಮರ‍್ಗಸೂಚಿಗಳನ್ನು ಜಿಲ್ಲೆಯ ಕಂದಾಯ, ಪೊಲೀಸ್ ಹಾಗೂ ಇತರೆ ಇಲಾಖೆಗಳು ಸಮನ್ವಯದೊಂದಿಗೆ ಕಾರ್ಯ ನಿರ್ವಹಿಸುವದರ ಮೂಲಕ ರಾತ್ರಿ ಹಾಗೂ ವಾರಾಂತ್ಯದ ಕಫ್ರ‍್ಯೂ ಮರ‍್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವಂತೆ ಜಿಲ್ಲಾ ವಿಪತ್ತು ನರ‍್ವಹಣಾ ಸಮಿತಿ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ಅವರು ಸೂಚನೇ ನೀಡಿದರು.

ಜಿಲ್ಲಾಡಳಿತ ಭವನದ ವಿಡೀಯೋ ಸಂವಾದ ಸಭಾಂಗಣದಲ್ಲಿ ಶುಕ್ರವಾರ ಜರುಗಿದ ಕೋವಿಡ್ ಸೋಂಕು ನಿಯಂತ್ರಣ ಹಾಗೂ ಕಠಿಣ ಮರ‍್ಗಸೂಚಿಗಳ ಅನುಷ್ಠಾನ ಕುರಿತ ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸೋಂಕು ನಿಯಂತ್ರಣದಲ್ಲಿ ವಿವಿಧ ಇಲಾಖೆಗಳು ಪ್ರಮುಖವಾಗಿ ಪೊಲೀಸ್ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಮುಂಚೂಣಿಯಲ್ಲಿ ನಿಂತು ಪರಸ್ಪರ ಸಮನ್ವಯದೊಂದಿಗೆ ರ‍್ತವ್ಯ ನರ‍್ವಹಿಸಬೇಕು. ತಾಲೂಕಾಡಳಿತ ಹಾಗೂ ಸ್ಥಳೀಯ ಆಡಳಿತಗಳು ಸೋಂಕಿನ ಹತೋಟಿಗೆ ಮರ‍್ಗಸೂಚಿಗಳ ಪಾಲನೆ ಸರಿಯಾಗಿ ಅನುಷ್ಠಾನಗೊಳಿಸಬೇಕೆಂದು ಸೂಚಿಸಿದರು.

ದಿ. 05-01-2022 ರ ರಾತ್ರಿ 10 ಗಂಟೆಯಿಂದ ದಿ.19-01-2022ರ ಬೆಳಗ್ಗೆ 5 ಗಂಟೆಯವರೆಗೆ ರಾತ್ರಿ ಕಫ್ರ‍್ಯೂ ಹಾಗೂ ಶುಕ್ರವಾರ ರಾತ್ರಿ 10 ಗಂಟೆಯಿಂದ ಸೋಮವಾರ ಬೆಳಗಿನ 5 ಗಂಟೆಯವರೆಗೆ ವಾರಾಂತ್ಯದ ಕಫ್ರ‍್ಯೂ ಜಾರಿಯಲ್ಲಿರುತ್ತದೆ. ಈ ಅವಧಿಯಲ್ಲಿ ಸರ್ಕಾರ ಜಾರಿಗೊಳಿಸಿರುವ ಪರಿಷ್ಕೃತ ಮರ‍್ಗಸೂಚಿಗಳ ಪಾಲನೆಯಾಗುವಂತೆ ನಿಗಾವಹಿಸಬೇಕು. ಹಾಗೂ ಮಾರ್ಗಸೂಚಿ ಉಲ್ಲಂಘಿಸುವವರ ಮೇಲೆ ನಿಯಮಾನುಸಾರ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದರು.

ವಾರಾಂತ್ಯದ ಕಫ್ರ‍್ಯೂ ವೇಳೆಯಲ್ಲಿ ಬರುವ ಸಂತೆಗಳನ್ನು ಸಾಧ್ಯವಾದಷ್ಟು ಮುಂದೂಡಬೇಕು. ಇಲ್ಲವಾದಲ್ಲಿ ವಿಶಾಲವಾದ ಮೈದಾನಕ್ಕೆ ರ‍್ಗಾಯಿಸಿ ಕೋವಿಡ್ ಮರ‍್ಗಸೂಚಿ ಪಾಲನೆಯಾಗುವಂತೆ ನೋಡಿಕೊಳ್ಳಬೇಕು. ಅಗತ್ಯ ಸೇವೆಗಳ ಅಂಗಡಿ ಮುಂಗ್ಗಟ್ಟುಗಳಲ್ಲಿ ಕೋವಿಡ್ ನಿಯಮ ಕಟ್ಟುನಿಟ್ಟಾಗಿ ಪಾಲಿಸಬೇಕು. ಹಾಗೂ ಪ್ರವೇಶ ದ್ವಾರದಲ್ಲಿ ಕಡ್ಡಾಯವಾಗಿ ಮಾಸ್ಕ ಧರಿಸಿ ಆಗಮಿಸುವಂತೆ ಅಳವಡಿಸಲು ತಿಳಿಸಿ ಸಾಮಾಜಿಕ ಅಂತರ ಪಾಲನೆಯಾಗುವಂತೆ ನೋಡಿಕೊಳ್ಳಬೇಕೆಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ. ಶಿವಪ್ರಕಾಶ ಅವರು ಮಾತನಾಡಿ ಗದಗ ನಗರದ ಸುತ್ತಲಿನ ಪ್ರಮುಖ ಪ್ರವೇಶ ರಸ್ತೆಗಳಲ್ಲಿ ಚೆಕ್ ಪೋಸ್ಟ ತೆರೆಯುವ ಮೂಲಕ ಅನಗತ್ಯ ಸಾರ‍್ವಜನಿಕರ ಸಂಚಾರವನ್ನು ತಡೆಯಬೇಕು. ಸಂಚಾರಿ ದಳಗಳ ವಾಹನಗಳ ಮೂಲಕ ಅಲ್ಲಲ್ಲಿ ಅನಗತ್ಯ ಜನ ಸಂಚಾರವನ್ನು ನಿಯಂತ್ರಿಸಬೇಕು. ಬೀಟ್ ಪೊಲೀಸರು ಪ್ರತಿದಿನ ಜನಜಂಗುಳಿ ಸೇರುವ ಪ್ರದೇಶಗಳ ಮಾಹಿತಿಯನ್ನು ಮೇಲಾಧಿಕಾರಿಗಳಿಗೆ ತಿಳಿಸುವ ಮೂಲಕ ನಿಯಂತ್ರಿಸಲು ಸೂಕ್ತ ಕ್ರಮ ವಹಿಸಬೇಕು. ತಾಲೂಕುಗಳಲ್ಲಿ ಪೊಲೀಸ್ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಒಟ್ಟಿಗೆ ಕರ‍್ಯಾಚರಣೆ ಮಾಡಬೇಕು. ಒಟ್ಟಾರೆ ಸರ್ಕಾರ ನೀಡಿರುವ ಮಾರ್ಗಸೂಚಿಗಳ ಪಾಲನೆಯೊಂದಿಗೆ ಜಿಲ್ಲಾದ್ಯಂತ ಸೋಂಕು ನಿಯಂತ್ರಣ ಮಾಡುವ ಉದ್ದೇಶದಿಂದ ಅಗತ್ಯದ ಕ್ರಮಗಳನ್ನು ಅಧಿಕಾರಿಗಳು ಕೈಗೊಳ್ಳುವಂತೆ ಸೂಚಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಎಂ.ಸತೀಶ್ ಕುಮಾರ,ಉಪವಿಭಾಗಾಧಿಕಾರಿ ರಾಯಪ್ಪ ಹುಣಸಗಿ ಸೇರಿದಂತೆ ಪೊಲೀಸ್ ಇಲಾಖೆ ಹಿರಿಯ ಅಧಿಕಾರಿಗಳು, ವಿವಿಧ ಇಲಾಖೆಯ ಮುಖ್ಯಸ್ಥರು ಆಯಾ ತಾಲೂಕಿನ ತಹಶೀಲ್ದಾರರು, ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

Leave a Reply

Your email address will not be published. Required fields are marked *

You May Also Like

ದೇವರಗುಡ್ಡದ ಕಾರ್ಣಿಕ: ವ್ಯಾದಿ ಬೂದಿ ಆದಿತಲೆ ಸೃಷ್ಟಿ ಸಿರಿ ಆದಿತಲೇ ಪರಾಕ್!

ರಾಣೆಬೆನ್ನೂರ ತಾಲೂಕಿನ ದೇವರಗುಡ್ಡದ ಕರಿಯಾಲದಲ್ಲಿ ವಿಜಯದಶಮಿ ಪ್ರಯುಕ್ತ ಶನಿವಾರ ಸಂಜೆ ನಡೆದ ಕಾರ್ಣಿಕದ ನುಡಿಗಳು. ದೇವರಗುಡ್ಡ ಗ್ರಾಮದ ಗೊರವಯ್ಯ ಕಾರ್ಣಿಕ ನುಡಿದರು.

ಭೀಕರ ದುರಂತದಲ್ಲಿ ಮೃತಪಟ್ಟವರೆಲ್ಲ ನಿಡಗುಂದಿ ಭಾಗದವರು- ಕಾಶಿಗೆ ಹೋಗಿಬಂದವರೇ ಈಗ ರಾಮೇಶ್ವರಕ್ಕೆ ಹೊರಟಿದ್ದರು

ಆಲಮಟ್ಟಿ : ಅವರೆಲ್ಲರೂ ಕಾಶಿಗೆ ಹೋಗಿ ಬಂದಿದ್ದರು. ಕಾಶಿ ದರ್ಶನ ಬಳಿಕ ರಾಮೇಶ್ವರ ದರುಶನಕ್ಕೆ ಶೃದ್ಧಾಭಕ್ತಿ…

ಗದಗ ಜಿಲ್ಲೆಯಲ್ಲಿ ಸಂಪೂರ್ಣ ಲಾಕ್ ಡೌನ್: ಫಿಲ್ಡಿಗಿಳಿದ ಡಿವೈಎಸ್ಪಿ

ಗದಗ ಜಿಲ್ಲೆಯಲ್ಲಿ ಸಂಪೂರ್ಣ ಲಾಕ್ ಡೌನ್: ಫಿಲ್ಡಿಗಿಳಿದ ಡಿವೈಎಸ್ಪಿ ಗದಗ: ಕೊರೊನಾ ನಿಯಂತ್ರಣ ಹಿನ್ನೆಲೆ ಐದು‌ ದಿನಗಳ ಕಾಲ ಗದಗ ಜಿಲ್ಲೆಯಲ್ಲಿ ಕಠೀಣ ಲಾಕ್ಡೌನ್ ಘೋಷಣೆ ಮಾಡಲಾಗಿದೆ. ಈ ಹಿನ್ನೆಲೆ ಶುಕ್ರವಾರ ವಿನಾಕಾರಣ ರಸ್ತೆಗಿಳಿದವರ ಬೈಕ್ ಸೀಜ್ ಮಾಡಲಾಯಿತು. ಸ್ವತ: ಡಿವೈಎಸ್ಪಿ ಫಿಲ್ಡಿಗಿಳಿದು ಬೈಕ್ ಸವಾರರಿಗೆ ತರಾಟೆಗೆ ತೆಗೆದುಕೊಂಡ ದೃಷ್ಯಗಳು ಕಂಡು ಬಂದವು. ರಿಪೋರ್ಟರ್ ಎಂದು ಸುಳ್ಳು ಹೇಳಿದ ವ್ಯಕ್ತಿ, ನಕಲಿ‌ ಪತ್ರಕರ್ತ ಎಂದು ತಿಳಿದ ತಕ್ಷಣ ಬೈಕ್ ವಶಕ್ಕೆ ಪಡೆಯಲಾಯಿತು.

ಸಾರಿಗೆ ನೌಕರರ ಹೊಟ್ಟೆಯ ಮೇಲೆ ಬರೆ ಎಳೆಯಲು ಮುಂದಾದ ಸಂಸ್ಥೆ!

ಹುಬ್ಬಳ್ಳಿ : ಕೊರೊನಾ ಮಹಾಮಾರಿಗೆ ಇಡೀ ದೇಶವೇ ನಲುಗುತ್ತಿದೆ. ಪ್ರತಿಯೊಂದು ಕ್ಷೇತ್ರಗಳು ಆರ್ಥಿಕ ಸಂಕಷ್ಟ ಅನುಭವಿಸುತ್ತಿವೆ.…