ಮುಂಚೂಣಿ ಕಾರ್ಯಕರ್ತರು, 60 ವರ್ಷ ಮೇಲ್ಪಟ್ಟವರಿಗೆ ಕೋವಿಡ್-19 ಲಸಿಕಾಕರಣ

ಗದಗ : ಜಿಲ್ಲೆಯಲ್ಲಿನ ಆರೋಗ್ಯ ಕಾರ್ಯಕರ್ತರ, ಮುಂಚೂಣಿ ಕಾರ್ಯಕರ್ತರು ಹಾಗೂ 60 ವರ್ಷದ ಮೇಲ್ಪಟ್ಟ ಸಹ ಅಸ್ವಸ್ಥತೆ ಹೊಂದಿರುವ ಫಲಾನುಭವಿಗಳಿಗೆ ಭಾರತ ಸರ್ಕಾರದ ಶಿಫಾರಸ್ಸನ ಮೇರೆಗೆ ಕೋವಿಡ್-19 ಮುನ್ನೆಚ್ಚರಿಕಾ ಲಸಿಕಾ ಡೋಸ್ ನೀಡುವ ಕಾರ್ಯಕ್ರಮವನ್ನು ಜನೇವರಿ 10 ರಿಂದ ಪ್ರಾರಂಭಿಸಲಾಗುವದು.

ಈಗಾಗಲೇ 2ನೇ ಡೋಸ್ ಲಸಿಕೆ ಪಡೆದ 9 ತಿಂಗಳು (39 ವಾರಗಳ) ನಂತರ ಆರೋಗ್ಯ, ಮುಂಚೂಣಿ ಕಾರ್ಯಕರ್ತರು, 60 ವರ್ಷ ಮೇಲ್ಪಟ್ಟ ಅಸ್ವಸ್ಥತೆ ಹೊಂದಿದ ಫಲಾನುಭವಿಗಳು ಮುನ್ನೆಚ್ಚರಿಕಾ ಡೋಸ್ ಪಡೆಯಲು ಅರ್ಹರಾಗಿದ್ದು ಸರ್ಕಾರಿ ಕೋವಿಡ್-19 ಲಸಿಕಾಕರಣ ಕೇಂದ್ರಗಳಲ್ಲಿ ಈ ಗುಂಪಿನ ಫಲಾನುಭವಿಗಳಿಗೆ ಉಚಿತವಾಗಿ ಲಸಿಕೆಗಳನ್ನು ನೀಡಲಾಗುತ್ತದೆ.

ಓಮಿಕ್ರಾನ ವೈರಸ್ ಭೀತಿಯಲ್ಲಿರುವ ಜನರು ಕಡ್ಡಾಯವಾಗಿ 2 ಡೋಸಗಳನ್ನು ಪಡೆಯಲು ಹಾಗೂ ಮುಂಚೂಣಿ, ಆರೋಗ್ಯ ಕಾರ್ಯಕರ್ತರು ಹಾಗೂ 60 ವರ್ಷ ಮೇಲ್ಪಟ್ಟ ಸಹ ಅಸ್ವಸ್ಥತೆ ಹೊಂದಿರುವವರು ಸ್ವಯಂ ಪ್ರೇರಿತವಾಗಿ ಹೆಚ್ಚುವರಿ ಲಸಿಕೆ ಡೋಸನ್ನು ಪಡೆಯಲು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಮನವಿ ಮಾಡಿರುತ್ತಾರೆ.

Exit mobile version