ಪ್ರಧಾನಮಂತ್ರಿ ಗ್ರಾಮ ಸಡಕ ಯೋಜನೆ ಅಡಿಯಲ್ಲಿ ರಸ್ತೆ ಕಾಮಗಾರಿಗೆ ಚಾಲನೆ
ಉತ್ತರಪ್ರಭ
ನರೆಗಲ್ಲ: ಉತ್ತಮ ಗುಣಮಟ್ಟದ ರಸ್ತೆ ನಿರ್ಮಾಣಕ್ಕೆ ಗುತ್ತಿಗೆದಾರರು ಆಧ್ಯತೆ ನಿಡಬೇಕು ಎಂದು ಶಾಸಕ KSSIDC ಅಧ್ಯಕ್ಷ ಕಳಕಪ್ಪ ಜಿ,ಬಂಡಿ ಹೇಳಿದರು. ಅವರು ಸಮೀಪದ ಹಾಲಕೆರೆ ಗ್ರಾಮದಲ್ಲಿ ಪ್ರಧಾನಮಂತ್ರಿ ಗ್ರಾಮ ಸಡಕ ಯೋಜನೆ ಅಡಿಯಲ್ಲಿ 9 ಕೋಟಿ ರೂಪಾಯಿ ವೆಚ್ಚದ ಹಾಲಕೆರೆ ಗ್ರಾಮದಿಂದ ತೋಟಗಂಟಿ ಮಾರ್ಗವಾಗಿ ಅಬ್ಬಿಗೇರಿ ವರೆಗೆ ರಸ್ತೆ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು.
ಗುಣಮಟ್ಟದ ರಸ್ತೆಗಳಿಂದ ಅಭಿವೃದ್ಧಿಗೆ ಆಧ್ಯತೆ ನೀಡಲಾಗುತ್ತದೆ ಜನಪ್ರತಿನಿಧಿಗಳ ಸಹಕಾರದೊಂದಿಗೆ ಸಾರ್ವಜನಿಕರಿಗೆ ಉಪಯೋಗಿಸುವಂತೆ ತಿಳಿಸಿದರು.
ದಿವ್ಯ ಸಾನಿಧ್ಯವಹಿಸಿ ಮಾತನಾಡಿದ ಹಾಲಕೆರೆ ಪರಮ ಪೂಜ್ಯ ಶ್ರೀ ಮುಪ್ಪಿನ ಬಸವಲಿಂಗ ಸ್ವಾಮಿಗಳು ಗ್ರಾಮೀಣ ಪ್ರದೇಶಗಳ ರಸ್ತೆಗಳ ಅಭಿವೃದ್ಧಿ, ಕುಡಿಯುವ ನೀರು ಸೇರಿದಂತೆ ಹಲವು ಮೂಲ ಸೌಲಭ್ಯಗಳನ್ನು ಸಮರ್ಪಕವಾಗಿ ಒದಗಿಸಿದಾಗ ಮಾತ್ರ ಗ್ರಾಮೀಣ ಪ್ರದೇಶಗಳು ಅಭಿವೃದ್ಧಿಯಾಗುವುದರೊಂದಿಗೆ ದೇಶದ ಉನ್ನತಿಗೂ ಸಹಾಯವಾಗುತ್ತದೆ ಎಂದು ಹೇಳಿದರು.
ಈ ಸಂಧರ್ಭದಲ್ಲಿ ರೋಣ ಮಂಡಳ ಬಿಜೆಪಿ ಅಧ್ಯಕ್ಷ ಮುತ್ತಣ್ಣ ಕಡಗದ.ಸಜ್ಜನ ವಕೀಲರು.ಸಂಗಮೇಶ ಅಬ್ಬಿಗೇರಿ.ಹನುಮಂತ ಸೂಡಿ. ಬಸವರಾಜ ಅಂಗಡಿ. ರಾಜಶೇಖರಗೌಡ ಪಾಟೀಲ, ಚನ್ನು ಪಾಟೀಲ, ಗ್ರಾಮದ ಮುಖಂಡರು ಕಾರ್ಯಕರ್ತರು ಇದ್ದರು.
