ನವದೆಹಲಿ: ಬುಲ್ಲಿ ಬಾಯಿ ಆಪ್‌ನ ಮಾಸ್ಟರ್ ಮೈಂಡ್ ನೀರಜ್ ಬಿಷ್ಣೋಯ್ ಸದ್ಯ ದೆಹಲಿ ಪೊಲೀಸರ ವಶದಲ್ಲಿದ್ದಾರೆ. ವರದಿಯ ಪ್ರಕಾರ ನೀರಜ್ ಬಿಷ್ಣೋಯ್ ಜೈಲಿನಲ್ಲಿ ಎರಡು ಬಾರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇದಾದ ಬಳಿಕ ಪೊಲೀಸರು ನೀರಜ್‌ನ ವೈದ್ಯಕೀಯ ಪರೀಕ್ಷೆ ನಡೆಸಿ ಅವರು ಸುರಕ್ಷಿತವಾಗಿದ್ದಾರೆ ಎಂದು ಖಚಿತಪಡಿಸಿದ್ದಾರೆ. ಪೊಲೀಸ್ ಮೂಲಗಳ ಪ್ರಕಾರ ಸದ್ಯ ನೀರಜ್ ಸ್ಥಿರವಾಗಿದ್ದಾರೆ. ಈ ಸಂಪೂರ್ಣ ಪ್ರಕರಣದ ತನಿಖೆಗೆ ಸಂಬಂಧಿಸಿದ ಹಿರಿಯ ಅಧಿಕಾರಿಯೊಬ್ಬರು ತನಿಖೆಯನ್ನು ಮುಂದಕ್ಕೆ ಕೊಂಡೊಯ್ಯುವುದು ನೀರಜ್ ಅವರ ಯೋಜನೆಯಾಗಿರಬಹುದು. ಹೀಗಾಗಿ ಆತ್ಮಹತ್ಯೆಗೆ ಯತ್ನಿಸಿರುವ ಸಾಧ್ಯತೆ ಇದೆ ಎಂದು ಹೇಳಿದರು. ಆದರೆ ವಿಷಯದ ಸೂಕ್ಷ್ಮತೆಯನ್ನು ಗಮನದಲ್ಲಿಟ್ಟುಕೊಂಡು ಅಧಿಕಾರಿಗಳು ಸಂಪೂರ್ಣ ಭದ್ರತೆ ಮತ್ತು ಕಾಳಜಿಯೊಂದಿಗೆ ವಿಚಾರಣೆ ನಡೆಸುತ್ತಿದ್ದಾರೆ.

ನೀರಜ್ ಬಿಷ್ಣೋಯ್ ಅನೇಕ ವೆಬ್‌ಸೈಟ್‌ಗಳನ್ನು ಹ್ಯಾಕ್ ಮಾಡುತ್ತಿದ್ದರು ಎಂದು ತನಿಖಾ ಸಂಸ್ಥೆ ಹೇಳಿದೆ. ನೀರಜ್ 15ನೇ ವಯಸ್ಸಿನಿಂದಲೇ ಇದೆಲ್ಲವನ್ನೂ ಮಾಡುತ್ತಿದ್ದಾನೆ. ಈ ಹಿಂದೆ ಭಾರತ ಮತ್ತು ಪಾಕಿಸ್ತಾನದ ಹಲವು ಶಾಲೆಗಳು ಮತ್ತು ವಿಶ್ವವಿದ್ಯಾನಿಲಯಗಳ ವೆಬ್‌ಸೈಟ್‌ಗಳನ್ನು ನೀರಜ್ ಹ್ಯಾಕ್ ಮಾಡಿದ್ದಾನೆ ಎಂದು ತನಿಖೆಯ ನೇತೃತ್ವದ ಇಂಟೆಲಿಜೆನ್ಸ್ ಫ್ಯೂಷನ್ ಮತ್ತು ಸ್ಟ್ರಾಟೆಜಿಕ್ ಆಪರೇಷನ್ಸ್ ಡಿಸಿಪಿ ಕೆಪಿಎಸ್ ಮಲ್ಹೋತ್ರಾ ಹೇಳಿದ್ದಾರೆ. ಸದ್ಯ ಪೊಲೀಸರು ಶಾಲೆಯ ವೆಬ್‌ಸೈಟ್ ಅನ್ನು ಹ್ಯಾಕ್ ಮಾಡಿದ್ದಾರೆ ಎಂಬ ಅವರ ಹೇಳಿಕೆಯನ್ನು ತನಿಖೆ ಮಾಡುತ್ತಿದ್ದಾರೆ.

ಮುಸ್ಲಿಂ ಮಹಿಳೆಯರನ್ನು ಹರಾಜು ಹಾಕಲು ‘ಬುಲ್ಲಿ ಬಾಯಿ’ ಆ್ಯಪ್‌ನ ಹಿಂದಿನ ಪ್ರಮುಖ ಆರೋಪಿ ನೀರಜ್ ಬಿಷ್ಣೋಯ್ ಪೊಲೀಸ್ ವಿಚಾರಣೆ ವೇಳೆ ತನ್ನ ಕೃತ್ಯಕ್ಕೆ ಯಾವುದೇ ಪಶ್ಚಾತ್ತಾಪ ವ್ಯಕ್ತಪಡಿಸಿಲ್ಲ ಎಂದು ಮೂಲಗಳು ಶುಕ್ರವಾರ ತಿಳಿಸಿವೆ. ಬದಲಾಗಿ ಆರೋಪಿ ತಾನು ಮಾಡಿದ್ದು ‘ಸರಿ’ ಎಂದು ಭಾವಿಸಿದ್ದನು ಎಂದು ಮೂಲಗಳು ತಿಳಿಸಿವೆ. ಕಳೆದ ಕೆಲ ದಿನಗಳಿಂದ ಭಾರೀ ವಿವಾದವನ್ನು ಸೃಷ್ಟಿ ಮಾಡಿದ ಬುಲ್ಲಿ ಬಾಯಿ ಆ್ಯಪ್‌ನ ಸೃಷ್ಟಿಕರ್ತರ ವಿರುದ್ಧ ಕಠಿಣ ಕ್ರಮಕ್ಕೆ ಆಕ್ರೋಶ ವ್ಯಕ್ತವಾಗಿತ್ತು. ಮುಸ್ಲಿಂ ಮಹಿಳೆಯರ ಫೋಟೋಗಳನ್ನು ಅವರ ಅನುಮತಿ ಇಲ್ಲದೇ ಬುಲ್ಲಿ ಬಾಯಿ ಆ್ಯಪ್‌ನಲ್ಲಿ ಅಪ್ಲೋಡ್ ಮಾಡುವ ಮೂಲಕ ಹರಾಜಿಗಾಗಿ ಬಳಕೆ ಮಾಡಲಾಗುತ್ತಿತ್ತು. ಇದನ್ನು ಖಂಡಿಸಿ ಹಲವಾರು ಜನ ಆಕ್ರೋಶ ಹೊರಹಾಕಿದ್ದರು ಜೊತೆಗೆ ಕ್ರಮಕ್ಕೆ ಒತ್ತಾಯಿಸಿದ್ದರು. ಜೊತೆಗೆ ಇದು ರಾಜಕೀಯ ಕದನಕ್ಕೂ ಒಳಗಾಗಿತ್ತು. ಇದರ ಬೆನ್ನಲ್ಲೇ ಪೊಲೀಸರು ಇದರ ವಿಚಾರಣೆಯನ್ನು ಚುರುಕುಗೊಳಿಸಿ ಈವರೆಗೆ ಪ್ರಕರಣದಲ್ಲಿ ನಾಲ್ವರನ್ನು ವಶಕ್ಕೆ ಪಡೆಯಲಾಗಿದೆ.

Leave a Reply

Your email address will not be published. Required fields are marked *

You May Also Like

ಅಮೆರಿಕದಲ್ಲಿ ವೇದ ಮಂತ್ರ ಪಠಣ!

ಅಮೆರಿಕದಲ್ಲಿ ರಾಷ್ಟ್ರೀಯ ಪ್ರಾರ್ಥನಾ ದಿನಾಚರಣೆ ಅಂಗವಾಗಿ ಶ್ವೇತ ಭವನದಲ್ಲಿ ವೇದ ಮಂತ್ರ ಪಠಣ ಮಾಡಲಾಗಿದೆ.

ವಾಲಿಬಾಲ್ ಪಂದ್ಯಾಟ : ಹಳಕಟ್ಟಿ ಶಾಲೆ ಬಾಲಕಿಯರ ತಂಡ ಸಾಧನೆ

ಆಲಮಟ್ಟಿ : ಸ್ಥಳೀಯ ಎಸ್.ವಿ.ವಿ.ಅಸೋಸಿಯೇಷನ್ ಶಿಕ್ಷಣ ಸಂಸ್ಥೆಯ ಆರ್.ಬಿ.ಪಿ.ಜಿ.ಹಳಕಟ್ಟಿ ಪ್ರೌಢಶಾಲೆಯ ಬಾಲಕಿಯರ ವಾಲಿಬಾಲ್ ತಂಡ  2022-23…

ಭಾರತಕ್ಕೆ ಮರಳಿದವರು ರೂಪಾಂತರಿ ವೈರಸ್ ಹೊತ್ತು ತಂದರು

ವಿಶ್ವದೆಲ್ಲೆಡೆ ಆತಂಕ ಸೃಷ್ಟಿಸಿರುವ ದಕ್ಷಿಣ ಆಫ್ರಿಕಾದ ರೂಪಾಂತರಿ ಕೊರೋನಾ ವೈರಸ್ ಭಾರತದಲ್ಲೂ ವಕ್ಕರಿಸಿದೆ. ದಕ್ಷಿಣ ಆಫ್ರಿಕಾದ ವೈರಸ್ ದೇಶದಲ್ಲಿ ನಾಲ್ಕು ಪ್ರಕರಣಗಳು ವರದಿಯಾಗಿವೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

‘ಪುಷ್ಪ’ ಜಾತಿ ಬಿರುಗಾಳಿಯಲ್ಲಿ

ಹೈದರಾಬಾದ್: ರಾಜಕೀಯ ಮತ್ತು ಸಿನಿಮಾಗಳನ್ನು  ಅತಿ ಹೆಚ್ಚು ಪೋಸಿಸುವ  ರಾಜ್ಯಗಳಲ್ಲಿ ಆಂಧ್ರ ಪ್ರದೇಶಒಂದಾಗಿದೆ.  ಹಿಂದಿನಿಂದಲೂ ಈ…