ಗದಗ:ಜಿಲ್ಲಾದ್ಯಂತ ಕೋವಿಡ್ ಸೋಂಕು ನಿಯಂತ್ರಣಕ್ಕೆ ಕಟ್ಟುನಿಟ್ಟಾಗಿ ಕ್ರಮ ಜರುಗಿಸಲಾಗುತ್ತಿದೆ. ಶಾಲಾ ಮಕ್ಕಳಿಗೆ ಸೋಂಕು ತಗಲುವಿಕೆಯ ಪ್ರಮಾಣ ಆಧರಿಸಿ ತಜ್ಞರ ಅಭಿಪ್ರಾಯದಂತೆ ಶಾಲೆಗಳಿಗೆ ರಜೆ ನೀಡಲು ಸೂಕ್ತ ಕ್ರಮ ವಹಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ಅವರು ಹೇಳಿದರು.


ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ಶಾಲಾ ಮಕ್ಕಳಿಗೆ ಕೋವಿಡ್ ಸೋಂಕು ನಿಯಂತ್ರಣ ಕುರಿತು ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು, ಮಹಿಳಾ ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು,  ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರೊಂದಿಗೆ ಗಂಭೀರ ಚರ್ಚೆ ಜರುಗಿಸಿದ ಜಿಲ್ಲಾಧಿಕಾರಿಗಳು ಶಾಲೆಗಳಲ್ಲಿ ಕೋವಿಡ್ ಸುರಕ್ಷತಾ ಕ್ರಮಗಳನ್ನು ಅನುಸರಿಸಲು ಆದ್ಯತೇ ನೀಡುವಂತೆ ಸೂಚಿಸಿದರು.


ಶಾಲಾ ಮುಖ್ಯಸ್ಥರು ಶಾಲಾ ಆರಂಭದ ವೇಳೆಯಲ್ಲಿ ಮಕ್ಕಳಿಗೆ ಸೋಂಕಿನ ನಿಯಂತ್ರಣ ಕ್ರಮಗಳನ್ನು ಪಾಲಿಸುವ ಬಗ್ಗೆ ಹಾಗೂ ಕಡ್ಡಾಯವಾಗಿ ಮಾಸ್ಕ ಧರಿಸುವ ಬಗ್ಗೆ ಸಾಮಾಜಿಕ ಅಂತರದೊಂದಿಗೆ ತರಗತಿಗಳು ನಡೆಯುವಂತೆ ತಿಳಿ ಹೇಳಬೇಕು. ಶಿಕ್ಷಕರು ತರಗತಿಗಳಲ್ಲಿ ಸೋಂಕಿನ ಲಕ್ಷಣಗಳಿರುವ ಮಕ್ಕಳು ಕಂಡು ಬಂದಲ್ಲಿ ತಕ್ಷಣವೇ ಪಾಲಕರ ಗಮನಕ್ಕೆ ತರುವ ಮೂಲಕ ಸೂಕ್ತ ತಪಾಸಣೆಯೊಂದಿಗೆ ಚಿಕಿತ್ಸೆಗೆ ಸಲಹೇ ನೀಡಬೇಕು. ಸೋಂಕು ಧೃಡಪಟ್ಟಲ್ಲಿ ತುರ್ತಾಗಿ ಆರೋಗ್ಯ ಇಲಾಖೆ ಹಾಗೂ ಮೇಲಾಧಿಕಾರಿಗಳ ಗಮನಕ್ಕೆ ತರುವ ಮೂಲಕ ಸೋಂಕು ಹರಡುವದನ್ನು ನಿಯಂತ್ರಿಸುವದರೊಂದಿಗೆ ಮಕ್ಕಳನ್ನು ತಪಾಸಣೆಗೆ ಒಳಪಡಿಸುವ ಪ್ರಕ್ರಿಯೆ ನಡೆಸಬೇಕೆಂದರು.


ಅಂಗನವಾಡಿ, ಶಾಲೆ ಹಾಗೂ ಕಾಲೇಜುಗಳ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳೆಲ್ಲರು ಎರಡು ಡೋಸ್ ಲಸಿಕೆ ಪಡೆದಿರುವ ಬಗ್ಗೆ ಇಲಾಖಾ ಮುಖ್ಯಸ್ಥರು ಖಚಿತಪಡಿಸಿಕೊಳ್ಳಬೇಕು. ಆಯಾ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಸಮನ್ವಯಾಧಿಕಾರಿಗಳು ಕ್ರಮವಾಗಿ ತಮ್ಮ ವ್ಯಾಪ್ತಿಯ ಶಾಲೆಗಳಿಗೆ ಭೇಟಿ ನೀಡುವ ಮೂಲಕ ಸೋಂಕು ನಿಯಂತ್ರಣ ಕ್ರಮಗಳ ಪಾಲನೆ ಹಾಗೂ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಿದರು.
ಶಾಲೆಗಳಲ್ಲಿ ಸೋಂಕಿನ ಪ್ರಕರಣಗಳು ಕಂಡು ಬಂದಲ್ಲಿ ಆ ಶಾಲೆಯನ್ನು ಒಂದು ಘಟಕವಾಗಿ ಪರಿಗಣಿಸಿ ರಜೆ ನೀಡಬೇಕು. ಶಾಲೆಯ ಎಲ್ಲ ಮಕ್ಕಳು ಹಾಗೂ ಶಾಲಾ ಸಿಬ್ಬಂದಿಗಳನ್ನು ಕೋವಿಡ್ ತಪಾಸಣೆಗೆ ಒಳಪಡಿಸಬೇಕು. ಶಾಲಾ ಮಕ್ಕಳಿಗೆ ಹಾಜರಾತಿಯಿಂದ ವಿನಾಯತಿ ನೀಡಬೇಕು. ಮುಂದಿನ ದಿನಗಳಲ್ಲಿ ಸೋಂಕಿನ ಪ್ರಮಾಣ ಆಧರಿಸಿ ತರಗತಿಗೆ ಹಾಜರಾಗುವದನ್ನು ಆಸನದ ಸಾಮಥ್ರ್ಯಕ್ಕೆ ತಕ್ಕಂತೆ ಶೇ. 50ಕ್ಕೆ ಸೀಮಿತಗೊಳಿಸಬೇಕು ಎಂದರು.
ಪ್ರತಿ 2-3 ದಿನಗಳಿಗೊಮ್ಮೆ ಸಂಬಂಧಿಸಿದ ಅಧಿಕಾರಿಗಳು ಸಭೆ ಸೇರಿ ಶಾಲೆಗಳಲ್ಲಿ ಸೋಂಕಿನ ಹರಡುವಿಕೆಯ ಹಾಗೂ ನಿಯಂತ್ರಣದ ಕ್ರಮಗಳ ಬಗ್ಗೆ ಚರ್ಚಿಸುವ ಮೂಲಕ ಸೋಂಕು ನಿಯಂತ್ರಣದಲ್ಲಿ ಸಮನ್ವಯದೊಂದಿಗೆ ಕಾರ್ಯನಿರ್ವಹಿಸಲು ಸೂಚಿಸಿದರು.


ಜಿಲ್ಲೆಯಲ್ಲಿ 15 ರಿಂದ 18 ವಯೋಮಾನದ ಮಕ್ಕಳಿಗೆ ಲಸಿಕೆ ನೀಡುವ ಕುರಿತಂತೆ ಪ್ರೌಢ ಶಾಲೆಗಳಲ್ಲಿ ಅರ್ಹ ಮಕ್ಕಳ ಪೈಕಿ ಶೆ. 71 ರಷ್ಟು ಲಸಿಕಾಕರಣ ವಾಗಿದೆ. ಅದೇ ರೀತಿ ಕಾಲೇಜುಗಳ ಅರ್ಹ 21,450 ಮಕ್ಕಳ ಪೈಕಿ 15,630 ಮಕ್ಕಳಿಗೆ ಲಸಿಕೆ ನೀಡಲಾಗಿದೆ ಎಂದು ಸಭೆಗೆ ಮಾಹಿತಿ ಒದಿಗಿಸಿದರು.
ಸಭೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಬಸವಲಿಂಗಪ್ಪ, ಮಹಿಳಾ ಮತ್ತು ಮಕ್ಕಳ ಅಬಿವೃದ್ಧಿ ಇಲಾಖೆ ಉಪನಿರ್ದೇಶಕ ಉಸ್ಮಾನ ಎ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಂ.ಕಾಂಬಳೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಹಾಜರಿದ್ದರು.  

Leave a Reply

Your email address will not be published. Required fields are marked *

You May Also Like

ವಿಧಾನ ಪರಿಷತ್ ಚುನಾವಣೆ ಪ್ರಚಾರಕ್ಕೆ ಗದಗ ಆಗಮಿಸಿದ ಸಿ ಎಂ ಬೊಮ್ಮಾಯಿ

ಉತ್ತರಪ್ರಭ ಸುದ್ದಿ ಗದಗ: ಜಿಲ್ಲಾ ಪ್ರವಾಸ ಕಾರ್ಯಕ್ರಮವನ್ನುಹಮ್ಮಿಕೋಂಡಿದ್ದ ಸಿ ಎಂ ಬಸವರಾಜ ಬೊಮ್ಮಾಯಿಯವರು ಇಂದು ಗದಗ…

ಶಾಂತಿಯಿಂದ ಹೋಳಿ ಆಚರಿಸಿ

ಯಾರಿಗೂ ತೊಂದರೆಯಾಗದಂತೆ ಹೋಳಿ ಹಬ್ಬವನ್ನು ಆಚರಿಸಬೇಕು. ಹಬ್ಬದ ನೆಪದಲ್ಲಿ, ಸಾವರ್ಜನಿಕ ಸ್ಥಳಗಳಲ್ಲಿ ಅಶ್ಲೀಲ ಬರಹಗಳನ್ನು ಬರೆಯುವುದು, ಶಾಲಾ ಕಾಲೇಜುಗಳ ಗೋಡೆಗಳಿಗೆ ಬಣ್ಣ ಎರೆಚುವುದು ಕಂಡುಬಂದಲ್ಲಿ ಅಥವಾ ಸಾರ್ವಜನಿಕ ಆಸ್ತಿ ಪಾಸ್ತಿ ಹಾನಿ ಮಾಡಿದರೆ ಅಂತಹವರ ವಿರುದ್ಧ ಕಠೀಣ ಕ್ರಮ ಕೈಗೊಳ್ಳಲಾಗುವುದು.

ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 925 ಕ್ಕೆ ಏರಿಕೆ

ಬೆಂಗಳೂರು: ಇಂದಿನ 63 ಪ್ರಕರಣಗಳು ಸೇರಿ ರಾಜ್ಯದಲ್ಲಿ ಪತ್ತೆಯಾಗಿರುವ ಒಟ್ಟು ಪ್ರಕರಣಗಳ ಸಂಖ್ಯೆ 925 ಕ್ಕೆ…

ಚಿನ್ನ, ಬೆಳ್ಳಿ ಮತ್ತಷ್ಟು ಇಳಿಕೆ

ಎರಡು ದಿನಗಳಿಂದ ಚಿನ್ನ ದರ ಇಳಿಕೆಯತ್ತ ಮುಖ ಮಾಡಿದೆ. ಹಾಗೆಯೇ ಎರಡು ದಿನಗಳಿಂದ ಸ್ಥಿರವಾಗಿದ್ದ ಬೆಳ್ಳಿ ದರ ಕೂಡಾ ಇಂದು ಇಳಿಕೆ ಕಂಡಿದೆ.