ಗದಗ-ಬೆಟಗೇರಿ ನಗರಸಭೆಯ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಿಗೆ ಚುನಾವಣೆ ನಡೆಸಲು ಜ. 24 ರಂದು ತೀರ್ಮಾನಿಸಲಾಗಿದೆ. ಈ ಕುರಿತು ಉಪವಿಭಾಗಧಿಕಾರಿ ರಾಯಪ್ಪ ಹುಣಸಗಿ ಮಾಹಿತಿ ನೀಡಿದ್ದಾರೆ. ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಕೆ.ಎಲ್.ಪ್ರಸಾದ್ ಅವರು ಜ.12 ರಂದು ನಿರ್ದೇಶಿಸಿದ್ದರು.

ಉಪಾಧ್ಯಕ್ಷ ಸ್ಥಾನಗಳಿಗೆ ವಿವಿಧ ಪ್ರವರ್ಗಗಳ ಮೀಸಲಾತಿ ನಿಗದಿಪಡಿಸಿ ಸರ್ಕಾರದ ಅಧಿಸೂಚನೆಯಲ್ಲಿ ಪ್ರಕಟಿಸಿದೆ. ಸದರಿ ಅಧಿಸೂಚನೆಯನ್ವಯ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಿಗೆ ಚುನಾವಣೆ ನಡೆಸಲು ನಿಯಮಾನುಸಾರ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದ್ದರು.

ಇನ್ನು ರಾಜ್ಯ ಸರ್ಕಾರ ಗದಗ-ಬೆಟಗೇರಿ ನಗರಸಭೆಯ ಅಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಿರಿಸಿದೆ.

ಗದಗ-ಬೆಟಗೇರಿ ನಗರಸಭೆಯ 35 ವಾರ್ಡ್ ಗಳಿಗೆ ಡಿ.27ರಂದು ಚುನಾವಣೆ ನಡೆದಿತ್ತು. ಡಿ.30 ರಂದು ಚುನಾವಣಾ ಫಲಿತಾಂಶ ಹೊರ ಬಿದ್ದಿತ್ತು. ಅದರಲ್ಲಿ ಬಿಜೆಪಿ 18, ಕಾಂಗ್ರೆಸ್ 15 ಹಾಗೂ ಇಬ್ಬರು ಪಕ್ಷೇತರ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದರು.

Leave a Reply

Your email address will not be published. Required fields are marked *

You May Also Like

ಲಕ್ಷ್ಮೇಶ್ವರ ತಾಲೂಕಿನಲ್ಲಿ 7 ಜನ ಅವಿರೋಧ ಆಯ್ಕೆ: 167 ಸ್ಥಾನಗಳಿಗೆ ಚುನಾವಣೆ

ತಾಲ್ಲೂಕಿನಲ್ಲಿ ಗ್ರಾಮ ಪಂಚಾಯ್ತಿಗಳ ಚುನಾವಣಾ ಕಣ ರಂಗೇರುತ್ತಿದೆ. ಸೋಮವಾರ ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿತ್ತು.

ಕೆ.ಪಿ.ಎಸ್.ಸಿ ಪರೀಕ್ಷೆ ದಿನಾಂಕ ನಿಗದಿ

ಸಹಾಯಕ/ ಪ್ರಥಮ ದರ್ಜೆ ಸಹಾಯಕ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ, ದಿನಾಂಕ 24-1-21 ರಂದು ನಡೆಯಬೇಕಾಗಿದ್ದ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಮುಂದೂಡಲಾಗಿರುತ್ತದೆ.

ನಿಗದಿತ ವೇಳಾಪಟ್ಟಿಯಂತೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಲು ಹೊರಟ್ಟಿ ಪತ್ರ

ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾದ ಎಸ್.ಸುರೇಶ್ ಕುಮಾರ್ ಅವರಿಗೆ ಪತ್ರ ಬರೆದಿದ್ದಾರೆ.

ರಾಜ್ಯಕ್ಕೆ ಮುಂಗಾರು ಯಾವಾಗ ಪ್ರವೇಶಿಸುವುದು ಯಾವಾಗ ಗೊತ್ತಾ?

ಪ್ರತಿ ವರ್ಷ ಜೂನ್ 1ಕ್ಕೆ ನೈರುತ್ಯ ಮುಂಗಾರು ಕೇರಳ ಪ್ರವೇಶಿಸಿ ನಂತರ ರಾಜ್ಯಕ್ಕೆ ಆಗಮಿಸುತ್ತಿತ್ತು. ಆದರೆ, ಈ ಬಾರಿ ಜೂ. 5ರಂದು ಕೇರಳಕ್ಕೆ ಮುಂಗಾರು ಪ್ರವೇಶಿಸಲಿದೆ