ವರದಿ : ವಿಠಲ‌ ಕೆಳೂತ್


ಮಸ್ಕಿ: ಬೆಂಗಳೂರುನಲ್ಲಿನ ಪುನೀತ ರಾಜಕುಮಾರ ಸಮಾಧಿವರೆಗೆ ಪಾದಯಾತ್ರೆ ನಡೆಸಿರುವ ಅಪ್ಪು ಅಭಿಮಾನಿಗೆ ಇಲ್ಲಿನ ಪ್ರತಾಪಗೌಡ ಪಾಟೀಲ್ ಪೌಂಡೇಶನ್ ಅಧ್ಯಕ್ಷ ಪ್ರಸನ್ನ ಪಾಟೀಲ ಅವರು ಸನ್ಮಾನಿಸಿ ಗೌರವಿಸಿದರು.
ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಐಕೂರು ಗ್ರಾಮದ ವಿಶೇಷ ಚೇತನ ರವಿಕುಮಾರ ಎಂಬ ಯುವಕ ಯಾದಗಿರಿ ಜಿಲ್ಲೆಯಿಂದ ಬೆಂಗಳೂರಿನ ಅಪ್ಪುವಿನ ಸಮಾಧಿವರೆಗೆ ಪಾದಯಾತ್ರೆ ಕೈಗೊಂಡಿದ್ದನ್ನು ಕಂಡು ಸ್ಥಳೀಯ ಬಿಜೆಪಿ ಮುಖಂಡರು ಪಟ್ಟಣದ ಹಳೇ ಬಸ್ ನಿಲ್ದಾಣದ‌‌‌ ಬಳಿ ಸನ್ಮಾನಿಸಿ ಶುಭ ಹಾರೈಸಿದರು.
ರಾಜಧಾನಿ ಬೆಂಗಳೂರುವರೆಗೆ ನಿಮ್ಮ ಪಾದಯಾತ್ರೆ ಸುಗಮವಾಗಲಿ ಎಂದು ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಪುರಸಭೆ ಸದಸ್ಯ ರವಿಗೌಡ ಪಾಟೀಲ, ಚೇತನ ಪಾಟೀಲ, ಶರಣಬಸವ ಸೊಪ್ಪಿಮಠ, ಮಲ್ಲಿಕಾರ್ಜುನ ಬ್ಯಾಳಿ, ಸಂತೋಷ ಪತ್ತಾರ, ಮೌನೇಶ ನಾಯಕ, ದುರ್ಗಾಪ್ರಸಾದ ತೋರಣದಿನ್ನಿ ಶಿವರಾಜ ಹರಸೂರ, ಶರಣಗೌಡ ಪೊಲೀಸ ಪಾಟೀಲ, ಅಮರಯ್ಯ ಸೊಪ್ಪಿಮಠ, ಮಲ್ಲಿಕಾರ್ಜುನ ಬೈಲಗುಡ್ಡ ಸೇರಿದಂತೆ ಇನ್ನಿತರಿದ್ದರು.

Leave a Reply

Your email address will not be published. Required fields are marked *

You May Also Like

ರೋಣದಲ್ಲಿ ಬೈಕ್ ಪಲ್ಟಿ ಸವಾರ ಸಾವು

ಬಾರ್ ಬೆಂಡಿಂಗ್ ಕೆಲಸ ಮಾಡುತ್ತಿದ್ದ ಬೈಕ್ ಸವಾರ ಮುಗಳಿ ಗ್ರಾಮಕ್ಕೆ ಕೆಲಸಕ್ಕಾಗಿ ಹೊರಟಿದ್ದ ವೇಳೆ, ನಿಯಂತ್ರಣ ತಪ್ಪಿ ಬೈಕ್ ಪಲ್ಟಿಯಾಗಿ ಬಿದ್ದ ಪರಿಣಾಮ ಸವಾರ ಸ್ಥಳದಲ್ಲಿ ಸಾವನ್ನಪ್ಪಿದ ಘಟನೆ ನಡೆದಿದೆ.

ಕಳಸಾ-ಬಂಡೂರಿ: ಕುಡಿಯುವ ನೀರಿನ ಯೋಜನೆಗೆ ಒಪ್ಪಿಗೆ: ಹಣಕಾಸು ಅನುಮೋದನೆ ಯಾವಾಗ?

ಬೆಳಗಾವಿ ಜಿಲ್ಲೆಯ ಖಾನಾಪುರ ತಾಲ್ಲೂಕಿನ ಕಣಕುಂಬಿ ಗ್ರಾಮದ ಬಳಿ ಮಹದಾಯಿ‌ ನದಿಗೆ ಅಣೆಕಟ್ಟುನಿರ್ಮಿಸಿ ಕೂಡು ಕಾಲುವೆ ಮುಖಾಂತರ 1.72 ಟಿ ಎಂ ಸಿ ನೀರನ್ನು ಕುಡಿಯುವ ನೀರಿನ ಉದ್ದೇಶಕ್ಕಾಗಿ ಮಲಪ್ರಭಾ ನದಿಗೆತಿರುಗಿಸುವ ಕಳಸಾ ನಾಲಾ ತಿರುವು ಯೋಜನೆಗೆ ರಾಜ್ಯ ಸರ್ಕಾರ ಆಡಳಿತಾತ್ಮಕ ಅನುಮೋದನೆ ನೀಡಿದೆ.

ಡಿಸೆಂಬರ್ ಅಂತ್ಯದವರೆಗೆ ಶಾಲೆ ಆರಂಭವಿಲ್ಲ, ಮುಂದಿನ ನಡೆ ಡಿಸೆಂಬರ್ ನಂತರ ತೀರ್ಮಾನ

ಕೋವಿಡ್ 19 ಹಿನ್ನೆಲೆ ಈಗಾಗಲೇ ಶೈಕ್ಷನಿಕ ವರ್ಷದಲ್ಲಿ ಶಾಲೆಗಳಿನ್ನು ಆರಂಭವಾಗಿಲ್ಲ. ಡಿ.17ಕ್ಕೆ ಸರ್ಕಾರ ಕೆಲವು ಮಾರ್ಗಸೂಚಿಗಳನ್ವಯ ಕಾಲೇಜು ಆರಂಭಕ್ಕೆ ಅನುಮತಿ ನೀಡಿದೆ. ಆದರೆ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಆರಂಭದ ಕುರಿತು ಇಂದು ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಮಹತ್ವದ ಸಭೆ ಕರೆಯಲಾಗಿತ್ತು.

ಕ್ರೀಡೆಗಳಿಂದ ಆರೋಗ್ಯಕರ ಭಾವನೆ

ಉತ್ತರಪ್ರಭ ಸುದ್ದಿನಿಡಗುಂದಿ: ಹಲ ಬಗೆಯ ಕ್ರೀಡೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವದರಿಂದ ನಮ್ಮ ಆರೋಗ್ಯ ರಕ್ಷಣೆ ಮಾಡಲು ಸಾಧ್ಯ…