ಗದಗ: ರಾಯಲ್ ವಿಲ್ಲಾ ಹೋಟೆಲ್ ನಲ್ಲಿ ಸರಕಾರಿ ಆಸ್ಪತ್ರೆಯಲ್ಲಿ ನರ್ಸಿಂಗ್ ಹುದ್ದೆ ಕೊಡೆಸುತ್ತೇನೆಂದು ಮಹಿಳೆಯೊಬ್ಬರಿಂದ ಹಣ ಪಡೆಯುತ್ತಿದ್ದ ವೇಳೆ ಜಿಲ್ಲಾ ಬಿಜೆಪಿ ಯುವ ಮುಖಂಡನೊಬ್ಬ ಎಸಿಬಿ ಬಲೆಗೆ ಬಿದ್ದಿದ್ದಾನೆ. ಬಿಜೆಪಿಯ ಯುವ ಮುಖಂಡ ರಮೇಶ್ ಸಜ್ಜಗಾರ ಎಂದು ತಿಳಿದು ಬಂದಿದೆ. ACBಯವರು ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

ಡಂಬಳ ಅಥವಾ ಮುಂಡರಗಿ ಸರಕಾರಿ ಆಸ್ಪತ್ರೆಯಲ್ಲಿ ನರ್ಸಿಂಗ್ ಹುದ್ದೆ ಕೊಡಿಸುತ್ತೇನೆಂದು ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಡಂಬಳದ ಗ್ರಾಮದ ಈರಯ್ಯ ವಿರಕ್ತಮಠ ಅವರ ಪತ್ನಿಗೆ ಒಂದು ಲಕ್ಷ ರೂ. ಬೇಡಿಕೆ ಇಟ್ಟಿದ್ದು. ಇಂದು ಹೊಟೇಲ್ ನಲ್ಲಿ 90 ಸಾವಿರ ರೂ. ಪಡೆದುಕೊಳ್ಳುತ್ತಿದ್ದಾಗ ಎಸಿಬಿ ಪೊಲೀಸರು ದಾಳಿ ಮಾಡಿ ವಶಕ್ಕೆ ಪಡೆದಿದ್ದಾರೆ.

ಕಾರ್ಯಾಚರಣೆ ಯನ್ನು ಭ್ರಷ್ಟಾಚಾರ ನಿಗ್ರಹ ದಳದ ಎಸ್ಪಿ ಬಿ ಎಸ್ ನ್ಯಾಮಗೌಡ ಮಾರ್ಗದರ್ಶನದಲ್ಲಿ ಡಿವೈಎಸ್ಪಿಗಳಾದ ಎಮ್ ವಿ ಮಲ್ಲಾಪೂರ, ಸುರೇಶ್ ರೆಡ್ಡಿ ಅವರ ನೇತೃತ್ವದಲ್ಲಿ ಗದಗ ಎಸಿಬಿ ಇನ್ಸ್ಪೆಕ್ಟರ್ ಗಳಾದ ಆರ್ ಎಫ್ ದೇಸಾಯಿ, ವೀರಣ್ಣ ಹಳ್ಳಿ, ಸಿಬ್ಬಂದಿಗಳಾದ ಎಮ್ ಎಮ್ ಅಯ್ಯನಗೌಡ್ರ, ವೀರೇಶ್ ಜೋಳದ, ನಾರಾಯಣ ತಾಯಣ್ಣವರ್, ವೀರಣ್ಣ ಜಾಲಿಹಾಳ, ಶರೀಫ್ ಮುಲ್ಲಾ ಮಂಜುನಾಥ್ ಮುಳಗುಂದ, ವೀರೇಶ್ ಬಿಸನಳ್ಳಿ, ನಾರಾಯಣರಡ್ಡಿ ವೆಂಕರಡ್ಡಿ ಇದ್ದರೂ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

You May Also Like

ನಿಧನ : ಹೊನ್ನಪ್ಪ ಬದ್ದೆಪ್ಪ ಲಮಾಣಿ

ಉತ್ತರಪ್ರಭಲಕ್ಷ್ಮೇಶ್ವರ: ಹೊನ್ನಪ್ಪ ಬದ್ದೆಪ್ಪ ಲಮಾಣಿ, ನಿರ್ದೇಶಕರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತ ಅಡರಕಟ್ಟಿ,…

ಅವಿಕಾ ಜೊತೆ ರೊಮ್ಯಾನ್ಸ್ ಮಾಡಲಿರುವ ಆದಿ

ಯುವ ನಟ ಆದಿ ಸಾಯಿಕುಮಾರ್ ಅವರು ಮುಂಬರುವ ದೊಡ್ಡ ಬಜೆಟ್ ಚಿತ್ರ ‘ಅಮರನ್’ ಚಿತ್ರಕ್ಕಾಗಿ ಸಜ್ಜಾಗಿದ್ದಾರೆ.

ಶಿಶುವಿನ ಜೀವ ಉಳಿಸಿದ ವೈದ್ಯರಿಗೆ ಸಚಿವ ಸಿ .ಸಿ .ಪಾಟೀಲರ ಅಭಿನಂದನೆ

ಉತ್ತರಪ್ರಭ ಸುದ್ದಿಗದಗ: ಮಹಿಳೆಯೊಬ್ಬರು ಮೃತ ಪಟ್ಟರೂ ಸಹ ಅತ್ಯಂತ ಕಾಳಜಿಯಿಂದ ಅಪರೂಪದ ಶಸ್ತ್ರಚಿಕಿತ್ಸೆ ನಡೆಸಿ ಅವರ…

ಲಾರಿಯಲ್ಲಿದ್ದ ಮಶೀನ್ ಗೆ ಬೆಂಕಿ

ಚಲಿಸುತ್ತಿದ್ದ ಲಾರಿಯಲ್ಲಿದ್ದ ಏಕಾಏಕಿ ಬೆಂಕಿ ಹೊತ್ತಿಕೊಂಡ ಘಟನೆ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.