ಉತ್ತರಪ್ರಭ ಸುದ್ದಿ

ಕೊಪ್ಪಳ: ತಾಲೂಕಿನ ಲೆಬಗೇರಿ ಗ್ರಾಮದ ನಾಗರಾಜ (೩೫) ಜಡಿಯಪ್ಪ ಚಿಲವಾಡಗಿ ಎಂಬಾತನು ಬ್ಯಾಂಕ್ ಸಾಲ ತೀರಿಸಲಾಗದೇ ಜಮೀನಿನಲ್ಲಿ ನೇಣಿಗೆ ಶರಣಾದ ಘಟನೆ ನಿನ್ನೆ ಸಾಯಂಕಾಲ ನಡೆದಿದೆ.


ಮೃತರಿಗೆ ಪತ್ನಿ, ಇಬ್ಬರು ಗಂಡು ಮಕ್ಕಳು, ಓರ್ವ ಪುತ್ರಿ ಇದ್ದಾರೆ. ಈ ಹಿಂದೆ ಇತನು ಅಂಚೆ ಕಚೇರಿಯಲ್ಲಿ ಕೆಲಸ ಮಾಡಿ ನಂತರ ಖಾಸಗಿ ಬ್ಯಾಂಕಿನಲ್ಲಿ ಕೊಪ್ಪಳ ಹಾಗೂ ಇರಕಲ್ಗಡದಲ್ಲಿ ಪಿಗ್ಮಿ ಏಜೆಂಟ್ ರಾಗಿ ಕೆಲಸ ಮಾಡುತ್ತಿದ್ದನು ಎನ್ನಲಾಗುತ್ತಿದೆ.
ಬ್ಯಾಂಕಿನಲ್ಲಿ ಒಟ್ಟು 28 ಲಕ್ಷಗಳ ಸಾಲ ಮಾಡಿದ್ದು, ಬ್ಯಾಂಕ್ ಸಾಲ ಕಟ್ಟಲಾಗದೇ ಜೀವನದಲ್ಲಿ ಜಿಗುಪ್ಸೆಗೊಂಡು ನೇಣಿಗೆ ಶರಣಾಗಿದ್ದಾನೆ. ಬ್ಯಾಂಕ್ ನವರ ಸಾಕಷ್ಟು ಕಿರುಕುಳದಿಂದ ಸಾವಿಗೆ ಕಾರಣ ಎಂದು ಹೇಳಲಾಗುತ್ತಿದೆ. ಈ ಕುರಿತು ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರೆದಿದೆ.

Leave a Reply

Your email address will not be published. Required fields are marked *

You May Also Like

ಲಾಕ್ ಡೌನ್ : ಸೀಜ್ ಆದ ವಾಹನ ಮಾಲಿಕರಿಗೆ ಸಿಹಿ ಸುದ್ದಿ

ಈಗಾಗಲೇ ದೇಶಾದ್ಯಂತ ಮಾ.24 ರಿಂದಲೇ ಲಾಕ್ ಡೌನ್ ಆರಂಭವಾಗಿದೆ. ಪೊಲೀಸರು ವಶಪಡಿಸಿಕೊಂಡ ವಾಹನಗಳನ್ನು ಮೇ.1 ರಂದು ಮಾಲಿಕರಿಗೆ ಮರಳಿ ನೀಡುವ ಬಗ್ಗೆ ನಿರ್ಧರಿಸಲಾಗಿದೆ.

ಅಮೆರಿಕದಲ್ಲಿ ವೇದ ಮಂತ್ರ ಪಠಣ!

ಅಮೆರಿಕದಲ್ಲಿ ರಾಷ್ಟ್ರೀಯ ಪ್ರಾರ್ಥನಾ ದಿನಾಚರಣೆ ಅಂಗವಾಗಿ ಶ್ವೇತ ಭವನದಲ್ಲಿ ವೇದ ಮಂತ್ರ ಪಠಣ ಮಾಡಲಾಗಿದೆ.

ದಿನದಿಂದ ದಿನಕ್ಕೆ ದೇಶದಲ್ಲಿ ಹೆಚ್ಚಾಗುತ್ತಿದೆ ಆತಂಕ!

ಬೆಂಗಳೂರು: ದೇಶದಲ್ಲಿ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದೆ. ಹಲವು ದೇಶಗಳಲ್ಲಂತೂ ಇದರ ನಾಗಾಲೋಟ…

ಗದಗನಲ್ಲಿ ಕಂದಮ್ಮಳಿಗೆ ಕೊರೊನಾ ಕಾಟ : ಇಂದು 4 ಪಾಸಿಟಿವ್!

ಗದಗ: ಜಿಲ್ಲೆಯಲ್ಲಿಂದು 4 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 203…