ಉತ್ತರಪ್ರಭ ಸುದ್ದಿ
ಗದಗ:
ಜಿಲ್ಲೆಯಲ್ಲಿ ಶಾಲೆ ಹಾಗೂ ವಸತಿ ಶಾಲೆಗಳಲ್ಲಿರುವ ಮಕ್ಕಳ ಆರೋಗ್ಯದ ಕುರಿತು ಹೆಚ್ಚಿನ ನಿಗಾ ವಹಿಸಬೇಕು ಎಂದು ಜಿಲ್ಲಾಧಿಕಾರಿ ಎಂ.ಸುoದರೇಶ್‌ಬಾಬು ತಿಳಿಸಿದರು. ಜಿಲ್ಲಾ ಪಂಚಾಯತ್ ವಿಡಿಯೋ ಸಭಾಂಗಣದಲ್ಲಿ ಶುಕ್ರವಾರ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ನಡೆದ ವಿಡಿಯೋ ಸಂವಾದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಮಾಜ ಕಲ್ಯಾಣ, ಅಲ್ಪಸಂಖ್ಯಾತ, ಹಿಂದುಳಿದ ವರ್ಗ ಹಾಗೂ ಶಿಕ್ಷಣ ಇಲಾಖೆಗಳ ತಾಲೂಕಾ ಮಟ್ಟದ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಶಾಲೆಗಳಿಗೆ ಕ್ರಮವಾಗಿ ಭೇಟಿ ನೀಡುವ ಮೂಲಕ ಸೋಂಕು ನಿಯಂತ್ರಣಕ್ಕೆ ವಹಿಸುವ ಕ್ರಮಗಳ ಕುರಿತು ಪರಿಶೀಲನೆ ನಡೆಸಬೇಕು ಹಾಗೂ ಅಗತ್ಯ ಸಲಹೆ ಸೂಚನೆಗಳನ್ನು ಶಾಲಾ ಮುಖ್ಯಸ್ಥರಿಗೆ ನೀಡಬೇಕು. ಸೋಂಕು ಕಂಡು ಬಂದ ಶಾಲೆಗಳಲ್ಲಿ ಸರ್ಕಾರದ ನಿಯಮಾನುಸಾರ ಕ್ರಮ ಜರುಗಿಸಿ ಮೇಲಾಧಿಕಾರಿಗಳಿಗೆ ವರದಿ ನೀಡಬೇಕು ಎಂದು ತಿಳಿಸಿದರು.

ಕೋವಿಡ್ ಸೋಂಕು ಪ್ರಕರಣಗಳು ಹೆಚ್ಚಾದಲ್ಲಿ ಅಂತಹ ಶಾಲೆಗಳನ್ನು ಬಂದ್ ಮಾಡಲು ಕ್ರಮ ಕೈಗೊಳ್ಳಬೇಕು. ವಸತಿ ಶಾಲೆಯಲ್ಲಿ ಕೋವಿಡ್ ಸೋಂಕು ದೃಢಪಟ್ಟ ಮಕ್ಕಳಿಗೆ ಕಡ್ಡಾಯವಾಗಿ ಪ್ರತ್ಯೇಕವಾಗಿ ಚಿಕಿತ್ಸೆ ಒದಗಿಸಬೇಕು. ಸಾಧ್ಯವಾದಷ್ಟು ಶಾಲಾ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಅನಗತ್ಯ ಪ್ರಯಾಣವನ್ನು ನಿರ್ಬಂಧಿಸಬೇಕು. ಮಕ್ಕಳಲ್ಲಿ ಕೋವಿಡ್ ಸೋಂಕಿನ ಕುರಿತು ಜಾಗೃತಿ ಮೂಡಿಸಿ ಸೋಂಕು ಲಕ್ಷಣಗಳು ಕಂಡು ಬಂದಲ್ಲಿ ಮೇಲಾಧಿಕಾರಿಗಳ ಗಮನಕ್ಕೆ ತಕ್ಷಣ ವರದಿ ಮಾಡಬೇಕು. ಈ ಬಗ್ಗೆ ಇಲಾಖಾ ಮುಖ್ಯಸ್ಥರುಗಳು ಕ್ರಮ ವಹಿಸುವಂತೆ ಸೂಚಿಸಿದರು.

ತಾಲೂಕಾ ಆಡಳಿತಗಳು ಕೋವಿಡ್ ಸೋಂಕು ನಿಯಂತ್ರಣ ಹಾಗೂ ಸೋಂಕಿತರಿಗೆ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ಲಭ್ಯವಾಗುವಂತೆ ನೋಡಿಕೊಳ್ಳಬೇಕು. ಸೋಂಕು ದೃಢಪಟ್ಟ ವ್ಯಕ್ತಿಯು ಹೋಮ್ ಐಸೋಲೇಶನ್‌ನಲ್ಲಿರುವವರೆಗೆ ಆರೋಗ್ಯ ಇಲಾಖೆಯಿಂದ ನೀಡುವ ಔಷಧಿ ಕಿಟ್ ಗಳು ಸಕಾಲದಲ್ಲಿ ತಲುಪುವ ಬಗ್ಗೆ ಖಚಿತಪಡಿಸಿಕೊಳ್ಳಬೇಕು. ಒಟ್ಟಾರೆ ಸೋಂಕು ನಿಯಂತ್ರಣಕ್ಕೆ ಹಾಗೂ ಸೋಂಕಿತರಿಗೆ ಉತ್ತಮ ಚಿಕಿತ್ಸೆ ಲಭ್ಯವಾಗುವಂತೆ ಕ್ರಮ ಜರುಗಿಸಲು ತಿಳಿಸಿದರು.

ಇನ್ನುಳಿದಂತೆ ಸಭೆಯಲ್ಲಿ ಬೆಳೆ ಸಮೀಕ್ಷೆ, ವಿಮಾ ಪರಿಹಾರ ಪಾವತಿ, ರುದ್ರಭೂಮಿಗೆ ಜಾಗ ಗುರುತಿಸುವಿಕೆ ಸೇರಿದಂತೆ ಕಂದಾಯ ವಿಷಯಗಳ ಬಗ್ಗೆ ಚರ್ಚಿಸಿ ಅಗತ್ಯ ಸಲಹೆ ಸೂಚನೆಗಳನ್ನು ಅಪರ ಜಿಲ್ಲಾಧಿಕಾರಿ ಎಂ.ಸತೀಶಕುಮಾರ್ ಅವರು ನೀಡಿದರು.
ಸಭೆಯಲ್ಲಿ ಉಪವಿಭಾಗಾಧಿಕಾರಿ ರಾಯಪ್ಪ ಹುಣಸಗಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಬಸವಲಿಂಗಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಉಸ್ಮಾನ್ ಎ, ಜಂಟಿ ಕೃಷಿ ನಿರ್ದೇಶಕ ವೀರೇಶ ಹುನಗುಂದ, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಬಿರಾದಾರ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಪ್ರಶಾಂತ ವರಗಪ್ಪನವರ, ಡಿಡಿಎಲ್ ಆರ್ ರವಿಕುಮಾರ್, ಹಿಂದುಳಿದವರ್ಗ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸೇರಿದಂತೆ ತಾಲೂಕಿನ ತಹಶೀಲ್ದಾರರು, ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ಹಾಜರಿದ್ದರು.

Leave a Reply

Your email address will not be published. Required fields are marked *

You May Also Like

ಕೋವಿಡ್ ವ್ಯಾಕ್ಸಿನ್ ಹಾಕಿಸಿಕೊಂಡವರಿಗೆ ಮಾತ್ರ ಪಡಿತರ ಧಾನ್ಯ ವಿತರಣೆ: ಕೊತಬಾಳ ಗ್ರಾಪಂ ನಿರ್ದಾರ

ಗದಗ: ಕೊರೊನಾ ನಿಯಂತ್ರಣಕ್ಕಾಗಿ ಸರ್ಕಾರ ಏನೆಲ್ಲ ನಿರ್ಧಾರಗಳನ್ನು ತೆಗೆದುಕೊಂಡರೂ ಜನರು ಮಾತ್ರ ಇನ್ನು ಈ ಬಗ್ಗೆ ನಿರ್ಲಕ್ಷ್ಯ ತೋರುತ್ತಿದ್ದಾರೆ. ಆದ್ರೆ ಗ್ರಾಮ ಪಂಚಾಯತಿ ಒಂದು ಮನಸ್ಸು ಮಾಡಿದ್ರೆ ಏನೆಲ್ಲವೂ ಸಾಧ್ಯ ಅನ್ನೋದು ತೋರಿಸಿಕೊಟ್ಟಿದೆ ಆ ಊರಿನ ಗ್ರಾಮ ಪಂಚಾಯತಿ.

ವಿದುತ್ ಸ್ಪರ್ಷ: ಕೂಲಿ ಕಾರ್ಮಿಕ ಸಾವು

ಲಕ್ಷ್ಮೇಶ್ವರ: ಜಮೀನಿನಲ್ಲಿ ಕೂಲಿ ಕೆಲಸ ಮುಗಿಸಿಕೊಂಡು ಬುಲೇರೋ ವಾಹನದಲ್ಲಿ ಮನೆಗೆ ಮರಳುವ ವೇಳೆ ವಿದ್ಯುತ್ ಸ್ಪರ್ಷದಿಂದ ಓರ್ವ ಸಾವನ್ನಪ್ಪಿದ್ದು, ಮತ್ತೊರ್ವ ಗಂಭೀರ ಗಾಯಗೊಂಡಿದ್ದಾನೆ.

ಗ್ರಾಮೀಣ ಜನರಿಗಾಗಿ ಅಂಚೆ ಇಲಾಖೆ ವಿವಿಧ ಯೋಜನೆ ಜಾರಿಗೆ ತಂದಿದೆ:ಚಿದಾನಂದ

ಅಂಚೆ ಸೇವೆಯಲ್ಲಿ ಅಮೂಲಾಗ್ರ ಬದಲಾವಣೆಯಾಗಿದ್ದು ಗ್ರಾಮೀಣ ಜನರ ಬದಕು ಸುಧಾರಿಸಲು ಇಲಾಖೆಯು ಅಂಚೆ ಜೀವ ವಿಮಾ, ಸುಕನ್ಯಾ ಸಮೃದ್ಧಿ ಯೋಜನೆ ಸೇರಿದಂತೆ ವಿವಿಧ ಯೋಜನೆಗಳನ್ನ ಅಂಚೆ ಸಿಬ್ಬಂದಿ ಜನರ ಮನೆಬಾಗಿಲಿಗೆ ತಲುಪಿಸುವಂತಹ ಕೆಲಸ ಮಾಡಬೇಕು ಎಂದು ಗದಗ ಅಂಚೆ ವರಿಷ್ಠಾಧಿಕಾರಿ ಚಿದಾನಂದ ಪದ್ಮಸಾಲಿ ಹೇಳಿದರು.

ಈಜಲು ಹೋದ ಇಬ್ಬರು ಹುಡುಗರು ಕ್ವಾರಿಯಲ್ಲೆ ಸಾವು: ಅಗ್ನಿಶಾಮಕ ದಳದಿಂದ ಶೋಧ ಕಾರ್ಯ

ಉತ್ತರಪ್ರಭಗದಗ: ತಾಲೂಕಿನ ಶ್ಯಾಗೋಟಿ ಗ್ರಾಮದ ಇಬ್ಬರು ವಿದ್ಯಾರ್ಥಿಗಳು ಈಜಲು ಹೋಗಿ ಮಣ್ಣು ಹುತಿದ್ದ ದೋಡ್ಡ ಕ್ವಾರಿಯಲ್ಲಿ…