ವರದಿ:ವಿಠ್ಠಲ ಕೇಳುತ್

ಮಸ್ಕಿ: ಜಾತ್ಯತೀತ, ಸಮಾನತೆಯ ಸಮಾಜ ನಿರ್ಮಾಣ ಗಣರಾಜ್ಯದ ಆಶಯವಾಗಿದ್ದು, ಇದನ್ನು ಸಕಾರಗೊಳಿಸುವ ಜವಬ್ದಾರಿ ರಾಷ್ಟ್ರದ ಪ್ರತಿಯೊಬ್ಬ ಪ್ರಜೆಯ ಮೇಲಿದೆ ಎಂದು ಶಾಸಕ ಆರ್.‌ಬಸನಗೌಡ ತುರವಿಹಾಳ ಅವರು ಹೇಳಿದರು.
ಪಟ್ಟಣದ ಕೇಂದ್ರ ಶಾಲೆ ಆವರಣದಲ್ಲಿ‌ ನಡೆದ 73ನೇ ಗಣರಾಜ್ಯೋತ್ಸವ ದ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು,ಭಾರತ ದೇಶ ಸಂಯುಕ್ತ ರಾಜ್ಯಗಳ ಒಕ್ಕೂಟವಾಗಿದ್ದು, 1950 ಜನೆವರಿ 26ರಂದು ಜಾರಿಗೆ ತಂದ ಸಂವಿಧಾನ ಎಂಬ ಭದ್ರ ತಳಹದಿಯ ಮೇಲೆ ನಿಂತಿದೆ.ಸಂವಿಧಾನದ ಆಶಯಗಳನ್ನು ಕಾಪಾಡುವುದು ಪ್ರತಿಯೊಬ್ಬ ಪ್ರಜೆಯ ಮೂಲಭೂತ ಕರ್ತವ್ಯವಾಗಿದೆ ಎಂದರು.


ಡಾ. ಬಿ.ಆರ್ ಅಂಬೇಡ್ಕರ್ ಅವರ ನೇತೃತ್ವದ ಸಮಿತಿ ರಚಿಸಿದ ನಮ್ಮ ದೇಶದ ಸಂವಿಧಾನವನ್ನು ಸ್ಮರಿಸುವ ದಿನವಾಗಿದೆ. ಸಂವಿಧಾನದ ಸಮಗ್ರತೆಯನ್ನು ಎತ್ತಿ ಹಿಡಿಯುವ ಮೂಲಕ ಈ ದಿನದ ಗಣರಾಜ್ಯೋತ್ಸವನ್ನು ಆಚರಿಸೋಣ ಎಂದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ಕವಿತಾ.ಕೆ.ಆರ್. ಸಿಪಿಐ ಸಂಜೀವ್ ಬಳಿಗಾರ, ತಾಪಂ ಇಒ ಬಾಬು ರಾಠೋಡ್, ಪುರಸಭೆ ಮುಖ್ಯಾಧಿಕಾರಿ ಹನುಮಂತಮ್ಮ ನಾಯಕ, ಮುಖಂಡ ಶ್ರೀಶೈಲಪ್ಪ ಬ್ಯಾಳಿ, ಹೆಚ್. ಬಿ ಮುರಾರಿ, ಎಂ. ಅಮರೇಶ, ಬಿ.ಹೆಚ್ ದಿವಟರ್ ಸೇರಿದಂತೆ ಇನ್ನಿತರ ಗಣ್ಯರು ಇದ್ದರು.

Leave a Reply

Your email address will not be published. Required fields are marked *

You May Also Like

ನಿಧಿ ನೀಡದ ಮನೆಗಳು ಗುರುತಿಸುವ ಸಂಸ್ಕೃತಿ ನಮ್ಮದಲ್ಲ

ರಾಮ ಮಂದಿರ ನಿರ್ಮಾಣಕ್ಕೆ ನಿಧಿ ನೀಡದ ಮನೆಗಳನ್ನು ಗುರುತಿಸುವ ಸಂಸ್ಕೃತಿ ನಮ್ಮದಲ್ಲ ಎಂದು ಮಾಜಿ ಸಿಎಂ ಎಚ್ ಡಿ ಕೆ ಹೇಳಿಕೆಗೆ ಆರೆಸ್ಸೆಸ್ ಸರ ಸಂಘ ಚಾಲಕ ಡಾ.ಮೋಹನ್ ಭಾಗವತ್ ಅವರು ತುರುಗೇಟು ನೀಡಿದ್ದಾರೆ.

ಶಾಸಕರೇ ಲಕ್ಷ್ಮೇಶ್ವರ ಸರ್ಕಾರಿ ಆಸ್ಪತ್ರೆಯನ್ನೊಮ್ಮೆ ನೋಡಿ!

ರೋಗಿಗಳ ಪಾಲಿಗೆ ಆಸ್ಪತ್ರೆಗಳೇ ಸಂಜೀವಿನಿ ಅಂತಾರೆ. ಆದರಲ್ಲೂ ಸರ್ಕಾರಿ ಆಸ್ಪತ್ರೆಗಳಂತೂ ಬಡರೋಗಿಗಳಿಗೆ ಅನುಕೂಲವಾಗಿದೆ. ಆದರೆ ಸರಿಯಾದ ನಿರ್ವಹಣೆ ಇಲ್ಲದ ಕಾರಣ ಸರ್ಕಾರಿ ಆಸ್ಪತ್ರೆ ಗಬ್ಬು ನಾರುತ್ತಿದೆ.

ಪವರ ಸ್ಟಾರ್ ಅಭಿಮಾನಿ ಹೃದಯಾಘಾತದಿಂದ ಸಾವು

ಉತ್ತರಪ್ರಭನಂಜನಗೂಡು: ಪವರ್‌ಸ್ಟಾರ್ ಪುನೀತ್ ರಾಜಕುಮಾರ್ ಹುಟ್ಟುಹಬ್ಬದ ಸಂಭ್ರಮಾಚರಣೆಯ ವೇಳೆ ಅಭಿಮಾನಿಯೊಬ್ಬ ಆಕಾಶ್(22) ತೀವ್ರ ಹೃದಯಾಘಾತದಿಂದ ಮೃತಪಟ್ಟಿದ್ದಾನೆ…

ಪಂಚಮಸಾಲಿ ಸಮಾಜಕ್ಕೆ 2ಎ ಮಿಸಲಾತಿ ಅವಶ್ಯವಿದೆ: ಮೋಹನ ಮಾಳಿಶೆಟ್ಟಿ

ಪಂಚಮಸಾಲಿ 2ಎ ಮಿಸಲಾತಿಗೆ ಸೇರಿಸಬೇಕು ಎಂದು ಒತ್ತಾಯಿಸಿ ಫೆ.21 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುವ ಬೃಹತ್ ಸಮಾವೇಶದಲ್ಲಿ ಜಿಲ್ಲೆಯ ಸಮಾಜದ ಜನರು ಪಾಲ್ಗೊಳ್ಳಲಿದ್ದಾರೆ ಎಂದು ಜಿಲ್ಲಾಧ್ಯಕ್ಷ ಮೋಹನ ಮಾಳಿಶೆಟ್ಟಿ ಹೇಳಿದರು.