ಉತ್ತರಪ್ರಭ
ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದೆ. ದಿನಾಂಕ:08.02.2022 ರ ಸುತ್ತೋಲೆಯನ್ನು ಮುಂದುವರೆಸುತ್ತಾ, ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಮುಂಜಾಗ್ರತ ಕ್ರಮವಾಗಿ, ಫೆಬ್ರವರಿ 2022 ರ ದಿನಾಂಕ 12, 13 ರ ಭಾನುವಾರ ರಜಾ ದಿನ ಸಹಿತವಾಗಿ, 14, 15 ಮತ್ತು 16 ರವರೆಗೆ ಉನ್ನತ ಶಿಕ್ಷಣ ಇಲಾಖೆಯ ವ್ಯಾಪ್ತಿಗೊಳಪಡುವ ಎಲ್ಲಾ ವಿಶ್ವವಿದ್ಯಾಲಯಗಳು ಹಾಗೂ ಕಾಲೇಜು ಶಿಕ್ಷಣ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ವ್ಯಾಪ್ತಿಗೊಳಪಡುವ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪದವಿ ಕಾಲೇಜುಗಳು, ಡಿಪ್ಲೋಮೊ ಕಾಲೇಜುಗಳ ವಿದ್ಯಾರ್ಥಿಗಳಿಗೆ ಮಾತ್ರ ರಜೆಯನ್ನು ಘೋಷಿಸಲಾಗಿದೆ.
ಮುಂದುವರೆದು, ಸದರಿ ದಿನಾಂಕಗಳಂದು ಪರೀಕ್ಷೆಗಳು ನಡೆಯುತ್ತಿದ್ದಲ್ಲಿ ಯಥಾವತ್ತಾಗಿ ನಡೆಯಲಿವೆ ಹಾಗೂ ಆನ್ ಲೈನ್ ತರಗತಿಗಳ ಮೂಲಕ ವ್ಯಾಸಂಗ ಕ್ರಮವನ್ನು ನಡೆಸುವಂತೆ ಸೂಚಿಸಿದೆ.