ಉತ್ತರಪ್ರಭ ಸುದ್ದಿ
ಗದಗ:
545 ಪಿ.ಎಸ್.ಐ ಹುದ್ದೆಗಳಿಗೆ ನೇಮಕಾತಿ ಕರೆದಿದ್ದ ಸರ್ಕಾರ ಸದ್ಯ ತಾತ್ಕಾಲಿಕ ಆಯ್ಕೆಪಟ್ಟಿ ಬಿಡುಗಡೆಯಾಗಿದ್ದರೂ ಹೈದ್ರಾಬಾದ್ ಕರ್ನಾಟಕ ನಾಯಕರುಗಳ ಒತ್ತಡಕ್ಕೆ ಮಣಿದು ನೇಮಕಾತಿಗೆ ತಡೆಯಾಜ್ಞೆ ನೀಡಿರುವುದರಿಂದ ನಮ್ಮ ಭಾಗದ ಯುವಕರಿಗೆ ಅನ್ಯಾಯವಾಗಿದೆ ಎಂದು ಕಾಂಗ್ರೆಸ್ ಯುವ ಮುಖಂಡ ಮೋಹನ ದೊಡಕುಂಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಹೈ.ಕ ಭಾಗದವರಿಗೆ ಈಗಾಗಲೇ ಮೀಸಲಾತಿ ಇದ್ದರೂ ಹೆಚ್ಚುವರಿಯಾಗಿ ಮೀಸಲಾತಿ ಕೇಳುತ್ತಿದ್ದು, ಇದರಿಂದ ಗದಗ ಸೇರಿದಂತೆ ಉಳಿದ ಪ್ರದೇಶಗಳಿಂದ ಆಯ್ಕೆಗೊಂಡ ವಿದ್ಯಾರ್ಥಿಗಳಿಗೆ ನಿರಾಸೆ ಉಂಟಾಗುವ ಸಂಭವವಿದೆ. ಮೋದಿ ನೇತೃತ್ವದ ಸರ್ಕಾರ 2 ಕೋಟಿ ಉದ್ಯೋಗ ಸೃಷ್ಠಿಸುವುದಾಗಿ ಹೇಳಿ ಅಧಿಕಾರಕ್ಕೆ ಬಂದರೆ ಇಲ್ಲಿ ರಾಜ್ಯ ಸರ್ಕಾರ ಆಯ್ಕೆಯಾಗಿರುವ ನೇಮಕಾತಿ ಸಹ ರದ್ದುಗೊಳಿಸುವ ಮೂಲಕ ಜನರಿಗೆ ಅನ್ಯಾಯ ಮಾಡುತ್ತಿದೆ. ಈ ಕೂಡಲೇ ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸಬೇಕು, ಇದಕ್ಕಾಗಿ ಈ ಭಾಗದ ನಾಯಕರುಗಳು-ಸಂಘಟನೆಗಳು ಧ್ವನಿ ಎತ್ತಬೇಕು ಎಂದು ಆಗ್ರಹಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಗದಗ ಜಿಲ್ಲೆಯ ಪಶುವೈದ್ಯರ ಕೊರತೆ ಕುರಿತು ಪರಿಷತ್ತಿನಲ್ಲಿ ಪ್ರತಿಧ್ವನಿ

ಜಿಲ್ಲೆಯಲ್ಲಿ ಪಶು ಚಿಕಿತ್ಸಾಲಯಕ್ಕೆ ವೈದ್ಯರ ಕೊರತೆಯಿದ್ದು, ಖಾಲಿ ಹುದ್ದೆ ಭರ್ತಿಗೆ ವಿಧಾನ ಪರಿಷತ್ ಸದಸ್ಯ ಎಸ್.ವ್ಹಿ.ಸಂಕನೂರ ಕೋರಿದರು.

ವಿನಯ್ ಕುಲಕರ್ಣಿ, ಎಂ.ಬಿ.ಪಾಟೀಲ್ ಬಿಜೆಪಿ ಸೇರ್ಪಡೆ ವಿಚಾರ ಪಕ್ಷದಲ್ಲಿ ಚರ್ಚೆ ನಡೆದಿಲ್ಲ

ಮಾಜಿ ಸಚಿವ ವಿನಯ್ ಕುಲಕರ್ಣಿ ಹಾಗೂ ಎಂ.ಬಿ ಪಾಟೀಲ್ ಬಿಜೆಪಿ ಸೇರ್ಪಡೆ ವಿಚಾರ ಕುರಿತು ನಮ್ಮ ಪಕ್ಷದಲ್ಲಿ ಈ ಕುರಿತು ಯಾವುದೇ ಚರ್ಚೆ ನಡೆದಿಲ್ಲ. ಜಗದೀಶ್ ಶೆಟ್ಟರ್ ಹಾಗೂ ನನ್ನ ಜೊತೆ ಯಾವುದೇ ನಾಯಕರು ಮಾತನಾಡಿಲ್ಲ. ನಮ್ಮ ಜೊತೆ ಚರ್ಚಿಸದೆ ಹೇಗೆ ಅವರನ್ನು ಪಕ್ಷಕ್ಕೆ ಕರೆದುಕೊಳ್ಳಲು ಸಾದ್ಯವೆಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಹೇಳಿದರು.

ಅಪಾಯ ಮಟ್ಟ ಹರಿಯುತ್ತಿರುವ ಭೀಮಾ….ಜನರ ರಕ್ಷಣೆಗೆ ಬಂದ ಸೇನೆ!

ಕಲಬುರಗಿ : ಮಳೆ ಹಾಗೂ ಪ್ರವಾಹದಿಂದಾಗಿ ಜಿಲ್ಲೆಯ ಜನರ ಬದುಕು ಮೂರಾಬಟ್ಟೆಯಾಗಿದೆ. ಈ ನಿಟ್ಟಿನಲ್ಲಿ ರಕ್ಷಣಾ ಕಾರ್ಯಕ್ಕೆ ಸೇನೆ ನಿಯೋಜನೆ ಮಾಡಲಾಗಿದೆ.