ಉತ್ತರಪ್ರಭ ಸುದ್ದಿ
ಗದಗ:
545 ಪಿ.ಎಸ್.ಐ ಹುದ್ದೆಗಳಿಗೆ ನೇಮಕಾತಿ ಕರೆದಿದ್ದ ಸರ್ಕಾರ ಸದ್ಯ ತಾತ್ಕಾಲಿಕ ಆಯ್ಕೆಪಟ್ಟಿ ಬಿಡುಗಡೆಯಾಗಿದ್ದರೂ ಹೈದ್ರಾಬಾದ್ ಕರ್ನಾಟಕ ನಾಯಕರುಗಳ ಒತ್ತಡಕ್ಕೆ ಮಣಿದು ನೇಮಕಾತಿಗೆ ತಡೆಯಾಜ್ಞೆ ನೀಡಿರುವುದರಿಂದ ನಮ್ಮ ಭಾಗದ ಯುವಕರಿಗೆ ಅನ್ಯಾಯವಾಗಿದೆ ಎಂದು ಕಾಂಗ್ರೆಸ್ ಯುವ ಮುಖಂಡ ಮೋಹನ ದೊಡಕುಂಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಹೈ.ಕ ಭಾಗದವರಿಗೆ ಈಗಾಗಲೇ ಮೀಸಲಾತಿ ಇದ್ದರೂ ಹೆಚ್ಚುವರಿಯಾಗಿ ಮೀಸಲಾತಿ ಕೇಳುತ್ತಿದ್ದು, ಇದರಿಂದ ಗದಗ ಸೇರಿದಂತೆ ಉಳಿದ ಪ್ರದೇಶಗಳಿಂದ ಆಯ್ಕೆಗೊಂಡ ವಿದ್ಯಾರ್ಥಿಗಳಿಗೆ ನಿರಾಸೆ ಉಂಟಾಗುವ ಸಂಭವವಿದೆ. ಮೋದಿ ನೇತೃತ್ವದ ಸರ್ಕಾರ 2 ಕೋಟಿ ಉದ್ಯೋಗ ಸೃಷ್ಠಿಸುವುದಾಗಿ ಹೇಳಿ ಅಧಿಕಾರಕ್ಕೆ ಬಂದರೆ ಇಲ್ಲಿ ರಾಜ್ಯ ಸರ್ಕಾರ ಆಯ್ಕೆಯಾಗಿರುವ ನೇಮಕಾತಿ ಸಹ ರದ್ದುಗೊಳಿಸುವ ಮೂಲಕ ಜನರಿಗೆ ಅನ್ಯಾಯ ಮಾಡುತ್ತಿದೆ. ಈ ಕೂಡಲೇ ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸಬೇಕು, ಇದಕ್ಕಾಗಿ ಈ ಭಾಗದ ನಾಯಕರುಗಳು-ಸಂಘಟನೆಗಳು ಧ್ವನಿ ಎತ್ತಬೇಕು ಎಂದು ಆಗ್ರಹಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಗದಗ ಜಿಲ್ಲೆ : ನರೇಗಾದಲ್ಲಿ ಬಿಎಫ್‌ಟಿ ಹುದ್ದೆಗೆ ಅರ್ಜಿ

ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ 5 ಬಿ.ಎಫ್.ಟಿ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಬ್ಯೂಟಿ ಪಾರ್ಲರ್ ಸೇಲ್ಸ್ ಗರ್ಲ್ ಹುಡುಗಿಯ ಭಯಾನಕ ಕತೆ!

ಕಳೆದ ನಾಲ್ಕು ವರ್ಷಗಳ ಹಿಂದೆ ನಾಗಾಲ್ಯಾಂಡ್‌ನಿಂದ ಬ್ಯೂಟಿ ಪಾರ್ಲರ್ ಸೇಲ್ಸ್ ಗರ್ಲ್ ಆಗಿ ಬಂದವಳು ಬೆಂಗಳೂರಿಗೆ ಬಂದವಳು ಆಪ್ತರೊಂದಿಗೆ ಜೈಲು ಪಾಲಾಗಿದ್ದಾರೆ.

ಕಂಡಕ್ಟರ್- ಡ್ರೈವರ್ ಗಳಿಗೆ ವೇತನ ರಹಿತ ರಜೆಗೆ ಚಿಂತನೆ?

ಬೆಂಗಳೂರು: ಲಾಕ್ ಡೌನ್ ಹಿನ್ನೆಲೆ ಬಂದ್ ಆಗಿದ್ದ ಬಸ್ ಸಂಚಾರ ಈಗಷ್ಟೆ ಆರಂಭವಾಗಿದೆ. ಆದರೆ ಪ್ರಯಾಣಿಕರು…

ಗದಗ ಜಿಲ್ಲೆಯಲ್ಲಿ ಮುಂದುವರಿದ ಕೊರೊನಾ ಆರ್ಭಟ

ಗದಗ:ಭಾನುವಾರದವರೆಗೆ ಜಿಲ್ಲೆಯಲ್ಲಿ ಸೋಂಕಿನ ಪರೀಕ್ಷೆಗಾಗಿ 7,05,325 ಮಾದರಿ ಸಂಗ್ರಹಿಸಿದ್ದು, 6,78,688 ನಕಾರಾತ್ಮಕವಾಗಿವೆ. ಶನಿವಾರದ 117 ಪ್ರಕರಣ…