ಉತ್ತರಪ್ರಭ ಸುದ್ದಿ
ಗದಗ:
ಡಾ. ಪಂಡಿತ್ ಪುಟ್ಟರಾಜ ಕವಿ ಗವಾಯಿಗಳವರ 108ನೇ ಜಯಂತ್ಯೋತ್ಸವ ಪ್ರಯುಕ್ತ ರಾಜ್ಯಮಟ್ಟದ ಪ್ರಶಸ್ತಿ ಪ್ರಧಾನ ಸಮಾರಂಭ ಹಾಗೂ ಸಂಗೀತ ಪಾಠಶಾಲೆಯ ಪ್ರಥಮ ವಾರ್ಷಿಕೋತ್ಸವ ಸಮಾರಂಭ ಮಾರ್ಚ್ 3ರಂದು ಶ್ರೀ ಸಾಯಿ ಜ್ಞಾನ ಯೋಗಾಶ್ರಮ ವಿಶ್ವೇಶ್ವರಯ್ಯ ನಗರ, ಕಳಸಾಪುರ ಗದಗದಲ್ಲಿ ಆಯೋಜನೆಗೊಂಡಿದ್ದು, ಡಾ. ವ್ಹಿ.ಬಿ.ಹಿರೇಮಠ ಮೆಮೋರಿಯಲ್ ಪ್ರತಿಷ್ಠಾನದಿಂದ ಪ್ರತಿ ಪ್ರತಿವರ್ಷದಂತೆ ನಾಡಿನ ವಿವಿಧ ಕ್ಷೇತ್ರಗಳಲ್ಲಿ

ಸಾಧನೆಗೈದ ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡುವ ಕಾರ್ಯಕ್ರಮದಲ್ಲಿ ಜಿಲ್ಲಾ ಕನ್ನಡ ಜಾನಪದ ಪರಿಷತ್ ಅಧ್ಯಕ್ಷರು ಹಾಗೂ ದಲಿತ ಸಾಹಿತ್ಯ ಅಕಾಡೆಮಿ ನವದೆಹಲಿ ಶಾಖೆ ಜಿಲ್ಲಾ ಕಾರ್ಯಾಧ್ಯಕ್ಷರಾದ ಡಾ. ಶಾಂತಕುಮಾರ ಬಸಪ್ಪ ಭಜಂತ್ರಿ ಅವರಿಗೆ “ರಾಜ್ಯಮಟ್ಟದ ಸಾಹಿತ್ಯ ರತ್ನ” ಪ್ರಶಸ್ತಿ ನೀಡಲು ಪ್ರತಿಷ್ಠಾನದ ಸಮಿತಿ ತೀರ್ಮಾನಿಸಿದೆ. ಮಾರ್ಚ್ 3ರಂದು ಜರುಗುವ ಸಮಾರಂಭದಲ್ಲಿ ಗಣ್ಯರ ಸಮ್ಮುಖದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪ್ರತಿಷ್ಠಾನದ ಅಧ್ಯಕ್ಷೆ ಡಾ. ಶ್ರೀಮತಿ ವ್ಹಿ.ವಿ. ಹಿರೇಮಠ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಪ.ಜಾ-ಪ.ಪಂ ಕುಂದುಕೊರತೆ ಸಭೆ

ನಗರದ ಡಿ.ಸಿ.ಮಿಲ್ ತಳಗೇರಿ ಓಣಿಯಲ್ಲಿ ಪೊಲೀಸ್ ಇಲಾಖೆಯ ವತಿಯಿಂದ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಕುಂದುಕೊರತೆ ಸಭೆ ಆಯೋಜಿಸಲಾಯಿತು.

ಅನಾಮಧೇಯ ವ್ಯಕ್ತಿಯ ಶವಪತ್ತೆ: ಗುರುತು ಪತ್ತೆಗೆ ಮನವಿ

ಗಜೇಂದ್ರಗಡ : ಪಟ್ಟಣದ ಟಿಟಿಡಿ ಕಲ್ಯಾಣ ಮಂಟಪದ ಸಮೀಪದಲ್ಲಿ ಅನಾಮಧೇಯ ವ್ಯಕ್ತಿಯ ಶವ ಪತ್ತೆಯಾಗಿದೆ. ಪಟ್ಟಣದ…

ಆಸ್ಟ್ರಿಯಾ ಅಂತರರಾಷ್ಟ್ರೀಯ ಚಿತ್ರೋತ್ಸವಕ್ಕೆ ಬರಗೂರರ 'ಅಮೃತಮತಿ' ಆಯ್ಕೆ

ಬೆಂಗಳೂರು: ಇಂಚರ ಪುಟ್ಟಣ್ಣ ಪ್ರೊಡಕ್ಷನ್ಸ್ನ ಪುಟ್ಟಣ್ಣ ನಿರ್ಮಿಸಿ, ಬರಗೂರು ರಾಮಚಂದ್ರಪ್ಪ ನಿರ್ದೇಶಿಸಿರುವ ‘ಅಮೃತಮತಿ’ ಕನ್ನಡ ಚಿತ್ರ…