ರೂ. 5 ಲಕ್ಷ ಪರಿಹಾರ

ಗದಗ ಜಿಲ್ಲೆಯ ಮುಂಡರಗಿ ತಾಲ್ಲೂಕಿನ ಕೇಲೂರು ಗ್ರಾಮದಲ್ಲಿ ನಿನ್ನೆ ಅರಣ್ಯ ಇಲಾಖೆಯ ಭೂಮಿ ಒತ್ತುವರಿ ತೆರವು ಕಾರ್ಯಾಚರಣೆಯ ಸಂದರ್ಭದಲ್ಲಿ ಉದ್ಯೋಗಕ್ಕೆ ಒಳಗಾಗಿ ಇಬ್ಬರು ಮಹಿಳೆಯರು ವಿಷ ಸೇವಿಸಿದ್ದು, ಅವರಲ್ಲಿ ಒಬ್ಬರು ಮೃತಪಟ್ಟಿರುವುದು ಅತ್ಯಂತ ದುರ್ದೈವದ ಘಟನೆ ಎಂದು ಲೋಕೋಪಯೋಗಿ ಸಚಿವರಾದ ಶ್ರೀ ಸಿ.ಸಿ.ಪಾಟೀಲರು ವಿಷಾದಿಸಿದ್ದಾರೆ.

ಈ ಘಟನೆಯ ಬಗ್ಗೆ ಸಂಬಂಧಿಸಿದ ಗದಗ ಜಿಲ್ಲೆಯ ಅಧಿಕಾರಿಗಳೊಂದಿಗೆ ಮಾತನಾಡಿ, ಈ ರೀತಿಯ ಅವಘಡಗಳು ಮರುಕಳಿಸದಂತೆ ಎಚ್ಚರ ವಹಿಸಬೇಕು ಮತ್ತು ಒತ್ತುವರಿ ತೆರವು ಕಾರ್ಯಾಚರಣೆಯಂತಹ ಪ್ರಸಂಗಗಳಲ್ಲಿ ಮಾನವೀಯ ದೃಷ್ಟಿಯಿಂದ ನೋಡಬೇಕೆಂದು ಅವರು ಅಧಿಕಾರಿಗಳಿಗೆ ಸೂಚಿಸಿದರು.

ಘಟನೆಯಲ್ಲಿ ವಿಷ ಸೇವಿಸಿ ಈಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶ್ರೀಮತಿ ಸರೋಜ ಪಾಟೀಲ) ಮಹಿಳೆಗೆ ಅಗತ್ಯವಿರುವ ಹೆಚ್ಚಿನ ಚಿಕಿತ್ಸೆ ನೀಡಲು ಸೂಕ್ತ ಕ್ರಮ ಕೈಗೊಳ್ಳಲು ಸಚಿವರು ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡಿದರು.

ಈಗಾಗಲೇ ಮೃತ ಮಹಿಳೆಯ (ಶ್ರೀಮತಿ ನಿರ್ಮಲ ಪಾಟೀಲ) ಕುಟುಂಬದ ಸದಸ್ಯರನ್ನು ಜಿಲ್ಲಾಧಿಕಾರಿಗಳು ಭೇಟಿಯಾಗಿದ್ದಾರೆ. ತಾವೂ ಕೂಡಾ ಸದ್ಯದಲ್ಲೇ ಅಲ್ಲಿಗೆ ತೆರಳಿ ಅವರನ್ನು ಭೇಟಿಯಾಗಿ ಸಾಂತ್ವನ ಹೇಳುವುದಾಗಿ ಸಷ್ಟಪಡಿಸಿದ ಸಿ.ಸಿ.ಪಾಟೀಲರು, ಅರಣ್ಯ ಒತ್ತುವರಿ ಕಾರ್ಯಾಚರಣೆ ಮಾಡುವಾಗ ಯಾರಿಗೂ ಅನ್ಯಾಯವಾಗದಂತೆ ಮತ್ತು ನಿಯಮಾನುಸಾರವಾಗಿ ಕ್ರಮ ಕೈಗೊಳ್ಳುವಂತೆ ಅರಣ್ಯ ಅಧಿಕಾರಿಗಳಿಗೆ ಸಚಿವರು ತಾಕೀತು ಮಾಡಿದರು.

ರೂ. 5 ಲಕ್ಷ ಪರಿಹಾರ

ಈ ಘಟನೆಯ ಬಗ್ಗೆ ತಾವು ಈಗಾಗಲೇ ಸನ್ಮಾನ್ಯ ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿಯವರೊಂದಿಗೆ ಚರ್ಚಿಸಿದ್ದು, ಮಾನವೀಯ ದೃಷ್ಟಿಯಿಂದ ಮೃತ ಮಹಿಳೆಯ ಕುಟುಂಬದವರಿಗೆ 5 ಲಕ್ಷ ರೂ. ಪರಿಹಾರ ಘೋಷಿಸುವಂತೆ ಮುಖ್ಯಮಂತ್ರಿಗಳು ತಿಳಿಸಿದ್ದಾರೆ. ಆ ಪ್ರಕಾರ ಅವರ ಕುಟುಂಬದವರಿಗೆ ಪರಿಹಾರ ತಲುಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಿ.ಸಿ.ಪಾಟೀಲರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ತಹಸೀಲ್ದಾರ್ ಆದೇಶಕ್ಕೆ ಕಿಂಚಿತ್ತೂ ಬೆಲೆ ಇಲ್ಲ

ನಗರದ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಯ ಸೂತ್ತಲೂ ಬ್ಯಾರಿಕೇಡ್ ಹಾಗೂ ಸ್ಯಾನಿಟೈಸರ್ ಸಿಂಪಡಿಸಲು ತಾಲೂಕು ದಂಡಾಧಿಕಾರಿಗಳು ಆದೇಶಿಸಿದ್ದರು. ಆದರೆ, ಪೊಲೀಸ್ ಇಲಾಖೆ ಹಾಗೂ ಪುರಸಭೆ ಅಧಿಕಾರಿಗಳು ಮಾತ್ರ ತಾಲೂಕು ದಂಡಾಧಿಕಾರಿಗಳ ಆದೇಶಕ್ಕೆ ಬೆಲೆ ಕೊಡದೇ ನಿರ್ಲಕ್ಷ್ಯವಹಿಸಿದ್ದಾರೆ.

ಕೊರೊನಾ ಪಾಸಿಟಿವ್ ಆರೋಗ್ಯ ಕೇಂದ್ರದ ನೌಕರ ಬಲಿ!

ಬಾಗಲಕೋಟೆ: ಬೆನ್ನ ಬಿಡದೆ ಕಾಡುತ್ತಿರುವ ಮಾಹಾಮಾರಿಗೆ ಕೊರೊನಾ ಸೋಂಕಿಗೆ ಸಮುದಾಯ ಆರೋಗ್ಯ ಕೇಂದ್ರದ ಡಿ ದರ್ಜೆ…

ಸಸ್ಯ ಪ್ರೇಮ ನಿತ್ಯ ಮೂಡಲಿ-ಶಿವಾನಂದ ಪಟ್ಟಣಶೆಟ್ಟರ

ವರದಿ : ಗುಲಾಬಚಂದ ಜಾಧವಆಲಮಟ್ಟಿ: ಸಕಲ ಜೀವ ಸಂಕುಲಗಳಿಗೆ ಪ್ರಕೃತಿ ಮಾತೆಯೆ ಆಧಾರ.ಪ್ರಕೃತಿ ಸೃಷ್ಟಿಯಿಂದಲೇ ನಮಗೆಲ್ಲ…

ಒಬ್ಬ ವ್ಯಕ್ತಿಯಿಂದ ಇಡೀ ಹಿರೇಬಾಗೇವಾಡಿಯಲ್ಲಿ ಆವರಿಸಿದ ಸೋಂಕು!

ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ತನ್ನ ಅಟ್ಟಹಾಸ ಮೆರೆಯುತ್ತಿದೆ. ಇಲ್ಲಯವರೆಗೂ ಜಿಲ್ಲೆಯಾದ್ಯಂತ 85 ಪ್ರಕರಣಗಳು ಪತ್ತೆಯಾಗಿದ್ದು, ಅರ್ಧಕ್ಕಿಂತ ಹೆಚ್ಚು ಒಂದೇ ಗ್ರಾಮದಲ್ಲಿ ಪತ್ತೆಯಾಗಿದ್ದು, ಆತಂಕಕ್ಕೆ ಕಾರಣವಾಗುತ್ತಿದೆ.