ರೂ. 5 ಲಕ್ಷ ಪರಿಹಾರ

ಗದಗ ಜಿಲ್ಲೆಯ ಮುಂಡರಗಿ ತಾಲ್ಲೂಕಿನ ಕೇಲೂರು ಗ್ರಾಮದಲ್ಲಿ ನಿನ್ನೆ ಅರಣ್ಯ ಇಲಾಖೆಯ ಭೂಮಿ ಒತ್ತುವರಿ ತೆರವು ಕಾರ್ಯಾಚರಣೆಯ ಸಂದರ್ಭದಲ್ಲಿ ಉದ್ಯೋಗಕ್ಕೆ ಒಳಗಾಗಿ ಇಬ್ಬರು ಮಹಿಳೆಯರು ವಿಷ ಸೇವಿಸಿದ್ದು, ಅವರಲ್ಲಿ ಒಬ್ಬರು ಮೃತಪಟ್ಟಿರುವುದು ಅತ್ಯಂತ ದುರ್ದೈವದ ಘಟನೆ ಎಂದು ಲೋಕೋಪಯೋಗಿ ಸಚಿವರಾದ ಶ್ರೀ ಸಿ.ಸಿ.ಪಾಟೀಲರು ವಿಷಾದಿಸಿದ್ದಾರೆ.

ಈ ಘಟನೆಯ ಬಗ್ಗೆ ಸಂಬಂಧಿಸಿದ ಗದಗ ಜಿಲ್ಲೆಯ ಅಧಿಕಾರಿಗಳೊಂದಿಗೆ ಮಾತನಾಡಿ, ಈ ರೀತಿಯ ಅವಘಡಗಳು ಮರುಕಳಿಸದಂತೆ ಎಚ್ಚರ ವಹಿಸಬೇಕು ಮತ್ತು ಒತ್ತುವರಿ ತೆರವು ಕಾರ್ಯಾಚರಣೆಯಂತಹ ಪ್ರಸಂಗಗಳಲ್ಲಿ ಮಾನವೀಯ ದೃಷ್ಟಿಯಿಂದ ನೋಡಬೇಕೆಂದು ಅವರು ಅಧಿಕಾರಿಗಳಿಗೆ ಸೂಚಿಸಿದರು.

ಘಟನೆಯಲ್ಲಿ ವಿಷ ಸೇವಿಸಿ ಈಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶ್ರೀಮತಿ ಸರೋಜ ಪಾಟೀಲ) ಮಹಿಳೆಗೆ ಅಗತ್ಯವಿರುವ ಹೆಚ್ಚಿನ ಚಿಕಿತ್ಸೆ ನೀಡಲು ಸೂಕ್ತ ಕ್ರಮ ಕೈಗೊಳ್ಳಲು ಸಚಿವರು ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡಿದರು.

ಈಗಾಗಲೇ ಮೃತ ಮಹಿಳೆಯ (ಶ್ರೀಮತಿ ನಿರ್ಮಲ ಪಾಟೀಲ) ಕುಟುಂಬದ ಸದಸ್ಯರನ್ನು ಜಿಲ್ಲಾಧಿಕಾರಿಗಳು ಭೇಟಿಯಾಗಿದ್ದಾರೆ. ತಾವೂ ಕೂಡಾ ಸದ್ಯದಲ್ಲೇ ಅಲ್ಲಿಗೆ ತೆರಳಿ ಅವರನ್ನು ಭೇಟಿಯಾಗಿ ಸಾಂತ್ವನ ಹೇಳುವುದಾಗಿ ಸಷ್ಟಪಡಿಸಿದ ಸಿ.ಸಿ.ಪಾಟೀಲರು, ಅರಣ್ಯ ಒತ್ತುವರಿ ಕಾರ್ಯಾಚರಣೆ ಮಾಡುವಾಗ ಯಾರಿಗೂ ಅನ್ಯಾಯವಾಗದಂತೆ ಮತ್ತು ನಿಯಮಾನುಸಾರವಾಗಿ ಕ್ರಮ ಕೈಗೊಳ್ಳುವಂತೆ ಅರಣ್ಯ ಅಧಿಕಾರಿಗಳಿಗೆ ಸಚಿವರು ತಾಕೀತು ಮಾಡಿದರು.

ರೂ. 5 ಲಕ್ಷ ಪರಿಹಾರ

ಈ ಘಟನೆಯ ಬಗ್ಗೆ ತಾವು ಈಗಾಗಲೇ ಸನ್ಮಾನ್ಯ ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿಯವರೊಂದಿಗೆ ಚರ್ಚಿಸಿದ್ದು, ಮಾನವೀಯ ದೃಷ್ಟಿಯಿಂದ ಮೃತ ಮಹಿಳೆಯ ಕುಟುಂಬದವರಿಗೆ 5 ಲಕ್ಷ ರೂ. ಪರಿಹಾರ ಘೋಷಿಸುವಂತೆ ಮುಖ್ಯಮಂತ್ರಿಗಳು ತಿಳಿಸಿದ್ದಾರೆ. ಆ ಪ್ರಕಾರ ಅವರ ಕುಟುಂಬದವರಿಗೆ ಪರಿಹಾರ ತಲುಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಿ.ಸಿ.ಪಾಟೀಲರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಬಸವ ತತ್ವ, ಧರ್ಮಸೂತ್ರ ಪರಿಪಾಲಿಸಿ ಭವ್ಯ ಹಿಂದು ಧರ್ಮ ಉಳಿವಿಗೆ ಸಂಕಲ್ಪ ಮಾಡಿ- ಮಾಜಿ ಸಚಿವ ಎಸ್.ಕೆ. ಬೆಳ್ಳುಬ್ಬಿ

ಆಲಮಟ್ಟಿ: ಪವಿತ್ರ ಬಸವ ಭೂಮಿಯ ನಾಡಿನಲ್ಲಿ ಇನ್ನೂ ಅಸ್ಪೃಶ್ಯತೆ ಪೂರ್ಣ ತೊಲಗಿಲ್ಲ. ಕಂದಾಚಾರ,ಅನಾಚಾರ,ಮೂಡನಂಬಿಕೆಗಳಂಥ ಮೌಢ್ಯಗಳು ಅಲ್ಲಲ್ಲಿ…

ಕೆಲಸ ಮಾಡುವಾಗ ವಿದ್ಯುತ್ ಪ್ರವಹಿಸಿ ಲೈನ್ ಮ್ಯಾನ್ ಸಾವು

ಮೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ: ಕುಟುಂಬಸ್ಥರ ಆರೋಪ ಗದಗ: ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಉಳವಿ…

ಕೊರೊನಾ ಸಂಕಷ್ಟದ ಕುರಿತು ತುರ್ತು ಸಭೆಯಲ್ಲಿ ಅಧಿಕಾರಿಗಳಿಗೆ ಸಿಎಂ ಹೇಳಿದ್ದೇನು..?

ಬೆಂಗಳೂರಿನಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ನಿರಂತರ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಇಂದು ತುರ್ತು ಸಭೆ ನಡೆಸಿದರು.

ಬೆಂಗಳೂರು : ಮಹಾಮಾರಿ ನಿಯಂತ್ರಿಸುವ ನಿಟ್ಟಿನಲ್ಲಿ

ವೈದ್ಯಕೀಯ ಸಲಕರಣೆ ಖರೀದಿಯಲ್ಲಿ ಅವ್ಯವಹಾರವಾಗಿಲ್ಲ ಎನ್ನುವುದಾದರೆ ಸೂಕ್ತ ದಾಖಲೆ ಬಿಡುಗಡೆ ಮಾಡಿ ಎಂದು ಮಾಜಿ ಸಿಎಂ…