ಉತ್ತರಪ್ರಭ
ಗದಗ:
ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರಾದ ಬಿ. ಶ್ರೀರಾಮುಲು ಅವರು ಗದಗ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಮಾರ್ಚ 13 ರಂದು ಮುಂಜಾನೆ 10.30 ಗಂಟೆಗೆ ಶಿರಹಟ್ಟಿ ನೂತನ ಬಸ ನಿಲ್ದಾಣ ಉದ್ಘಾಟಿಸುವರು. 11.30 ಗಂಟೆಗೆ ಮಹರ್ಷಿ ವಾಲ್ಮೀಕಿ ಭವನ ಕಾಮಗಾರಿ ವೀಕ್ಷಿಸಿ 12.30 ಗಂಟೆಗೆ ದೇವಿಹಾಳದಲ್ಲಿ ಸಾಣ್ವಿ ಪೆಟ್ರೋಲ್ ಬಂಕ್ ಉದ್ಘಾಟಿಸುವರು. ಮಧ್ಯಾಹ್ನ 1.30 ಗಂಟೆಗೆ ಮುಂಡರಗಿಯಲ್ಲಿ ಮಹರ್ಷಿ ವಾಲ್ಮೀಕಿ ಭವನ ಭೂಮಿ ಪೂಜೆ ನೆರವೇರಿಸಿ 2.30 ಗಂಟೆಗೆ ಕೆಲೂರಿನ ಮೃತ ಶ್ರೀಮತಿ ನಿರ್ಮಲಾ ಪಾಟೀಲ ಅವರ ಮನೆಗೆ ಭೇಟಿ ನೀಡಿ ಸಾಯಂಕಾಲ ಹುಬ್ಬಳ್ಳಿಗೆ ತೆರಳುವರು ಎಂದು ಪ್ರಕಟಣೆಯಲ್ಲಿ ತಿಳಿಸಿದೆ. ಶಿರಹಟ್ಟಿ ನೂತನ ಬಸ ಘಟಕ ಉದ್ಘಾಟನೆ ಹಾಗೂ ಅಪಘಾತ ರಹಿತ ಚಾಲಕರಿಗೆ ಬಂಗಾರ, ಬೆಳ್ಳಿ ಪದಕ ವಿತರಣಾ ಸಮಾರಂಭವು ಮಾರ್ಚ 13 ರ ರವಿವಾರ ಬೆಳಗ್ಗೆ 10.30ಗಂಟೆಗೆ ಶಿರಹಟ್ಟಿ ನೂತನ ಬಸ ಘಟಕದಲ್ಲಿ ಜರುಗಲಿದೆ. ವಿಧಾನ ಪರಿಷತ ಸಭಾಪತಿ ಬಸವರಾಜ ಹೊರಟ್ಟಿ ಅವರು ಘನ ಉಪಸ್ಥಿತಿ ವಹಿಸುವರು. ಕೃಷಿ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ ಅವರು ಅಪಘಾತ ರಹಿತ ಚಾಲಕರಿಗೆ ಬಂಗಾರ ಹಾಗೂ ಬೆಳ್ಳಿ ಪದಕ ವಿತರಣೆ ಮಾಡುವರು. ಸಾರಿಗೆ ಸಚಿವ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಸಚಿವ ಬಿ.ಶ್ರೀರಾಮುಲು ಅವರು ನೂತನ ಬಸ ಘಟಕ ಉದ್ಘಾಟಿಸುವರು. ಲೋಕೊಪಯೋಗಿ ಸಚಿವ ಸಮಾರಂಭದ ಜ್ಯೋತಿ ಬೆಳಗಿಸುವರು. ಶಿರಹಟ್ಟಿ ಶಾಸಕ ರಾಮಣ್ಣ ಲಮಾಣಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ವಾ.ಕ.ರ.ಸಾ.ಸಂಸ್ಥೆ ಅಧ್ಯಕ್ಷ ವಿ.ಎಸ್.ಪಾಟೀಲ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟಿಸುವರು.
ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಕಳಕಪ್ಪ ಬಂಡಿ, ಸಂಸದರುಗಳಾದ ಶಿವಕುಮಾರ ಉದಾಸಿ, ಪಿ.ಸಿ.ಗದ್ದಿಗೌಡರ, ಶಾಸಕ ಎಚ್.ಕೆ.ಪಾಟೀಲ, ವಿಧಾನ ಪರಿಷತ ಸದಸ್ಯರುಗಳಾದ ಎಸ್.ವಿ.ಸಂಕನೂರ, ಪ್ರದೀಪ ಶೆಟ್ಟರ, ಸಲೀಂ ಅಹ್ಮದ, ದ್ರಾಕ್ಷಾರಸ್ ಮಂಡಳಿ ಅಧ್ಯಕ್ಷ ಕಾಂತಿಲಾಲ ಬನ್ಸಾಲಿ, ವಾ.ಕ.ರ.ಸಾ ಸಂಸ್ಥೆ ಉಪಾದ್ಯಕ್ಷ ಬಸವರಾಜ ಕೆಲಗಾರ, ಶಿರಹಟ್ಟಿ ಪಟ್ಟಣ ಪಂಚಾಯತ ಅಧ್ಯಕ್ಷೆ ಶ್ರೀಮತಿ ಗಂಗಮ್ಮ ಆಲೂರ, ಉಪಾಧ್ಯಕ್ಷ ಇಸಾಕ ಆದರಳ್ಳಿ, ವಾ.ಕ.ರ.ಸಾ.ಸಂಸ್ಥೆ ಮಂಡಳಿ ನಿರ್ದೇಶಕರುಗಳಾದ ಅಶೋಕ ಮಳಗಿ, ಸಂತೋಷಕುಮಾರ ಪಾಟೀಲ, ಸಿದ್ದಲಿಂಗೇಶ್ವರ ಮಠದ, ಶರಣ ಪಾಟೀಲ, ಸದಾಶಿವ ತೇಲಿ, ಶಿರಹಟ್ಟಿ ಪಟ್ಟಣ ಪಂಚಾಯತ ಸದಸ್ಯರುಗಳು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದ್ರಕುಮಾರ ಕಟಾರಿಯಾ, ವಾಕರಸಾ ಸಂಸ್ಥೆ ವ್ಯವಸ್ಥಾಪಕ ಗುರುದತ್ತ ಹೆಗಡೆ, ಜಿಲ್ಲಾಧಿಕಾರಿ ಎಂ.ಸುoದರೇಶ್ ಬಾಬು, ಜಿ.ಪಂ. ಸಿ.ಇ.ಓ ಭರತ ಎಸ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ ದೇವರಾಜು ವಿಶೇಷ ಆಹ್ವಾನಿತರಾಗಿ ಕಾರ್ಯಕ್ರಮದಲ್ಲಿ ಭಾಗವಹಿಸುವರು.

Leave a Reply

Your email address will not be published. Required fields are marked *

You May Also Like

ಕೊಪ್ಪಳದಲ್ಲಿ ಇಂದು ವಿದ್ಯುತ್ ಶಾರ್ಟ್ ಸರ್ಕ್ಯೂಟ್

ಕೊಪ್ಪಳ: ಕೊಪ್ಪಳದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಅಂಗಡಿ ಸುಟ್ಟು ಹೊಗಿರುವ ಘಟನೆ ಇಂದು ಬೆಳಿಗ್ಗೆ…

ಆಲಮಟ್ಟಿಗೆ ಸಿಎಂ ಆಗಮನ – ಬಿಗಿ ಭದ್ರತೆ ನಿಯೋಜನೆ

ಆಲಮಟ್ಟಿ : ರಾಜ್ಯದ ದೊರೆ ಆಗಮನದ ಹಿನ್ನೆಲೆಯಲ್ಲಿ ಉದ್ಯಾನ ನಗರಿ ಆಲಮಟ್ಟಿ ಸಕಲ ಭದ್ರತಾ ಸಿದ್ದತೆಯೊಂದಿಗೆ…

ತಿಮ್ಮಾಪೂರ : ರೈತ ಸಂಘಕ್ಕೆ ಪದಾಧಿಕಾರಿಗಳ ಆಯ್ಕೆ

ತಿಮ್ಮಾಪೂರ ಗ್ರಾಮ ಘಟಕದ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ರೈತ ನಾಯಕ ಪ್ರೋ.ನಂಜುಂಡಸ್ವಾಮಿ ಸ್ಥಾಪಿತ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ವಿ.ಆರ್.ನಾರಾಯಣರಡ್ಡಿ ಬಣದ ಸಂಘಕ್ಕೆ ತಾಲ್ಲೂಕಿನ ತಿಮ್ಮಾಪೂರ ಗ್ರಾಮ ಘಟಕದ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

ರಾಜ್ಯದಲ್ಲಿನ ಎರಡು ಕ್ಷೇತ್ರಗಳಿಗೆ ಇಂದು ಮತದಾನ!

ಬೆಂಗಳೂರು : ರಾಜರಾಜೇಶ್ವರಿ ನಗರ ಹಾಗೂ ಶಿರಾ ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ಆರಂಭವಾಗಿದೆ.