ಆಲಮಟ್ಟಿ: 15 ರಂದು ಹಳಕಟ್ಟಿ ಶಾಲೆಯ 64 ನೇ ವಾಷಿ೯ಕ ಸ್ನೇಹ ಸಮ್ಮೇಳನ

ಗುಲಾಬಚಂದ ಆರ್. ಜಾಧವ
ಆಲಮಟ್ಟಿ :
ಸ್ಥಳೀಯ ಎಸ್.ವ್ಹಿ.ವ್ಹಿ.ಸಂಸ್ಥೆಯ ರಾವಬಹದ್ದೂರ ಡಾ. ಫ.ಗು.(ಆರ್.ಬಿ.ಪಿ.ಜಿ) ಹಳಕಟ್ಟಿ ಪ್ರೌಢಶಾಲೆಯ 2021-22 ನೇ ಸಾಲಿನ 64 ನೇ ವಾಷಿ೯ಕ ಸ್ನೇಹ ಸಮ್ಮೇಳನ ಹಾಗು ಎಸ್ಸೆಸ್ಸೆಲ್ಸಿ ಮಕ್ಕಳ ಶುಭ ಕೋರುವ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭ ದಿ,15 ರಂದು ಮಂಗಳವಾರ ಜರುಗಲಿದೆ.
ಎಡೆಯೂರು ಶ್ರೀ ತೋಂಟದಾರ್ಯ ಸಂಸ್ಥಾನಮಠ ಡಂಬಳ- ಗದುಗಿನ ತ್ರಿವಿಧ ದಾಸೋಹಿ ಪೂಜ್ಯ ಲಿಂಗೈಕ್ಯ ಶ್ರೀಮನ್ನಿರಂಜನ ಜಗದ್ಗುರು ಡಾ.ತೋಂಟದ ಸಿದ್ದಲಿಂಗ ಮಹಾಸ್ವಾಮಿಗಳ ದಿವ್ಯ ಪ್ರಕಾಶನದಲ್ಲಿ ಸಂಸ್ಥೆಯ ಘನ ಅಧ್ಯಕ್ಷರಾದ ತ್ರಿವಿಧ ದಾಸೋಹಿ ಪರಮಪೂಜ್ಯ ಜಗದ್ಗುರು ಡಾ.ಸಿದ್ದರಾಮ ಮಹಾಸ್ವಾಮಿಗಳು ಎಡೆಯೂರು ಶ್ರೀ. ಜ.ತೋಂಟದಾರ್ಯ ಸಂಸ್ಥಾನಮಠ ಡಂಬಳ- ಗದಗ ರವರ ಕೃಪಾಶೀವಾ೯ದದಿಂದ ಮತ್ತು ಎಸ್.ವ್ಹಿ.ವ್ಹಿ. ಅಸೋಸಿಯೇಷನ್ ಸಂಸ್ಥೆಯ ಚತೋಹಾರಿ ಕಾರ್ಯದರ್ಶಿಗಳಾದ ಶ್ರೀ ಎಸ್.ಎಸ್.ಪಟ್ಟಣಶೆಟ್ಡರ ಗುರುಗಳ ಮಾರ್ಗದರ್ಶನದಲ್ಲಿ ಆಯೋಜಿಸಿರುವ ಈ ಕಾರ್ಯಕ್ರಮವನ್ನು ನಿಡಗುಂದಿ ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ವ್ಹಿ.ಎಸ್.ಹಿರೇಮಠ ಉದ್ಘಾಟಿಸಲ್ಲಿದ್ದಾರೆ
ಆರ್.ಬಿ.ಪಿ.ಜಿ.ಹಳಕಟ್ಟಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಜಿ.ಎಂ.ಕೋಟ್ಯಾಳ ಅಧ್ಯಕ್ಷತೆ ವಹಿಸಲ್ಲಿದ್ದಾರೆ. ಮುಖ್ಯ ಅತಿಥಿಗಳಾಗಿ ಆಲಮಟ್ಟಿ ಗ್ರಾಮ ಪಂಚಾಯತಿ ಅಧ್ಯಕ್ಷ ಮಂಜುನಾಥ್ ಹಿರೇಮಠ, ವಿಶ್ರಾಂತ ಪ್ರಾಚಾರ್ಯರಾದ ಎಸ್.ಬಿ.ಪಾಟೀಲ, ಕೃಷ್ಣಾ ಭಾಗ್ಯ ಜಲ ನಿಗಮದ ಮುಖ್ಯ ಅಭಿಯಂತರ ಕಚೇರಿಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಆಯ್.ಎಲ್.ಕಳಸಾ, ಎಂ.ಎಚ್.ಎಂ.ಪ.ಪೂ.ಕಾಲೇಜಿನ ಪ್ರಾಚಾರ್ಯರಾದ ಪ್ರಭುಸ್ವಾಮಿ ಹೇಮಗಿರಿಮಠ, ತಾಲೂಕು ಪಂಚಾಯತಿ ಮಾಜಿ ಸದಸ್ಯ ಮಲ್ಲೇಶ ರಾಠೋಡ, ನಿಡಗುಂದಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶಂಕರ ಜಲ್ಲಿ, ಕೆ.ಬಿ.ಜೆ.ಎನ್.ಎಲ್. ಗೇಟ್ಸ್ ಉಪ ವಿಭಾಗದ ಸಹಾಯಕ ಅಭಿಯಂತರರಾದ ಎಸ್. ಆಯ್. ಮಠಪತಿ, ಎಂ.ಎಚ್.ಎಂ.ಪದವಿ ಕಾಲೇಜಿನ ಪ್ರಾಂಶುಪಾಲರಾದ ಎಚ್.ಎನ್.ಕೆಲೂರ, ಎಂ.ಎಚ್.ಎಂ.ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಎಸ್.ಆಯ್.ಗಿಡ್ಡಪ್ಪಗೋಳ, ಎಂ.ಎಚ್.ಎಂ. ಹಿರಿಯ ಪ್ರಾಥಮಿಕ ಕನ್ನಡ ಮಾಧ್ಯಮ ಶಾಲೆ ಮುಖ್ಯ ಗುರುಮಾತೆ ಕೆ.ಎನ್.ಹಿರೇಮಠ, ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಗುರುಮಾತೆ ಶ್ರೀಮತಿ ತನುಜಾ ಪೂಜಾರಿ ಮೊದಲಾದವರು ಆಗಮಿಸಲಿದ್ದಾರೆ ಎಂದು ಮುಖ್ಯ ಶಿಕ್ಷಕ ಜಿ.ಎಂ.ಕೋಟ್ಯಾಳ ತಿಳಿಸಿದ್ದಾರೆ.

Exit mobile version