ಉತ್ತರಪ್ರಭ ಸುದ್ದಿ
ಲಕ್ಷ್ಮೇಶ್ವರ: ಸಾರಿಗೆ ಸಂಸ್ಥೆಯ ಬಸವೊಂದರ ವೀಲ್ ಜೇಂಟ್ ಕಟ್ ಆಗಿರುವ ಪರಿಣಾಮ, ಬಸ್ ಪಲ್ಟಿಯಾಗಿ ಹತ್ತಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಗೋವನಾಳ ಹಾಗೂ ಯಲವಿಗಿ ಮಧ್ಯದಲ್ಲಿ ನಡೆದಿದೆ.
ಗದಗನಿಂದ ಹಾವೇರಿಗೆ ಹೊರಟಿದ್ದ ಬಸ್ ಗೋನಾಳ ಸಮೀಪದ ಹಳ್ಳದಲ್ಲಿ ಪಲ್ಟಿಯಾಗಿದ್ದು ರಸ್ತೆ ತಿರುವಿನಲ್ಲಿ ವೀಲ್ ಜೇಂಟ್ ಕಟ್ ಆಗಿದ್ದು ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಜಾರಿದೆ. ಅಲ್ಲದೇ ಅಪಘಾತದಲ್ಲಿ ಹತ್ತಕ್ಕೂ ಹೆಚ್ಚು ಪ್ರಯಾಣಿಕರು ತೀವ್ರ ಗಾಯಗೊಂಡಿದ್ದು ಅಂಬ್ಯಲೆನ್ಸ ಮೂಲಕ ಸ್ಥಳೀಯ ಆಸ್ಪತ್ರೆ ದಾಖಲಾಗಿದೆ.


ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಯಲವಿಗಿ ಗ್ರಾಮದ ಜನರು ಪೊಲೀಸರಿಗೆ ಹಾಗೂ ಅಂಬ್ಯುಲೆನ್ಸ ಸಿಬ್ಬಂದಿಗೆ ಮಾಹಿತಿ ನೀಡಿ ಪ್ರಯಾಣಿಕರನ್ನು ಆಸ್ಪತ್ರೆಗೆ ತಲುಪಿಸುವ ಕಾರ್ಯವನ್ನು ಮಾಡಿದರು. ನಂತರ ಸ್ಥಳಕ್ಕೆ ಲಕ್ಷ್ಮೇಶ್ವರ ಪೊಲೀಸ್ ಠಾಣೆಯ ಪಿ.ಎಸ್.ಐ.ಪ್ರಕಾಶ ಅವರು ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಿದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Leave a Reply

Your email address will not be published. Required fields are marked *

You May Also Like

ರಾಜ್ಯದಲ್ಲಿಂದು 210 ಕೊರೊನಾ ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು..?

ಬೆಂಗಳೂರು: ರಾಜ್ಯದಲ್ಲಿಂದು 210 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 7944…

ಒಂದೇ ದಿನಕ್ಕೆ ರಾಜ್ಯದಲ್ಲಿ 50 ಪಾಸಿಟಿವ್

ಒಂದೇ ದಿನಕ್ಕೆ ರಾಜ್ಯದಲ್ಲಿ 50 ಪಾಸಿಟಿವ್ ಬೆಂಗಳೂರು: ರಾಜ್ಯದಲ್ಲಿ ಒಂದೇ ದಿನದಲ್ಲಿ 50 ಪಾಸಿಟಿವ್ ಪ್ರಕರಣಗಳು…

ಸಾಲೋಣಿ ಅವರಿಗೆ ಕಾಡಾ ಅಧ್ಯಕ್ಷ ಸ್ಥಾನ ನೀಡಲು ಒತ್ತಾಯ

ಕನಕಗಿರಿ ಕ್ಷೇತ್ರದ ಕುರುಬ ಸಮಾಜದ ಪ್ರಭಾವಿ ರಾಜಕಾರಣಿ ಮಾಜಿ ಸಚಿವ ನಾಗಪ್ಪ ಸಾಲೋಣಿಗೆ ತುಂಗಭದ್ರಾ ಕಾಡಾ ಅಧ್ಯಕ್ಷ ಸ್ಥಾನ ನೀಡಬೇಕೆಂದು ಇಲ್ಲಿನ ಕುರುಬ ಸಮಾಜದ ಯುವ ಮುಖಂಡ ಬೀರಪ್ಪ ವೆಂಕಟಾಪೂರ ಒತ್ತಾಯಿಸಿದ್ದಾರೆ.