ಉತ್ತರಪ್ರಭ ಸುದ್ದಿ
ಗದಗ: ತಾಲೂಕಿನ ಲಕ್ಕುಂಡಿ ಗ್ರಾಮದ ಮನೆಯಲ್ಲಿ ಪೊಲೀಸ್ ಪೇದೆಯೊಬ್ಬರು ಡೆತ್‌ನೋಟ್ ಬರೆದಿಟ್ಟು ಸಾವಿಗೆ ಶರಣಾಗಿರುವ ಘಟನೆ ನಡೆದಿದೆ. ಪೋಲಿಸ್ ಪೇದೆಗೆ ಕೆಲವು ಜನರು ಕಿರುಕುಳ ಕೊಡುತ್ತಿದ್ದರು ಎನ್ನಲಾಗಿದೆ ಅದರಿಂದ ಮನನೊಂದು ಸಾವಿಗೆ ಶರಣಾಗಿದ್ದಾನೆಂದು ತಿಳಿದು ಬಂದಿದೆ.
ಸಾವಿಗೆ ಶರಣಾದ ವ್ಯಕ್ತಿ ಬೆಟಗೇರಿ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಪೇದೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಲಕ್ಕುಂಡಿ ಗ್ರಾಮದ ಅಜ್ಜುಗೌಡ ಪಾಟೀಲ್ ಎಂದು ತಿಳಿದು ಬಂದಿದೆ. ಮೃತ ಪೇದೆ ಮಹಿಳಿಯೊಂದಿಗೆ ಪ್ರೀತಿಯ ಬಲೆಗೆ ಬಿದ್ದು ಅವಳೋಂದಿಗೆ ಮೊಬೈಲ ಚಾಟಿಂಗ್ ಮಾಡುತ್ತಿದ್ದ, ಮಹಿಳೆಯೋಂದಿಗೆ ಇರುವ ಅರೆಬರೆ ವಿಡಿಯೋ ವನ್ನೇ, ಬಂಡವಾಳ ಮಾಡಿಕೊಂಡ ಕೆಲವರು ಮೃತ ಪೇದೆಗೆ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದರು ಎಂದು ಪೊಲೀಸ ಮೂಲಗಳಿದ ತಿಳಿದುಬಂದಿದೆ.
ಸಾವಿಗೂ ಮುನ್ನ ಸುದೀರ್ಘ ಡೆತ್‌ನೋಟ್ ಬರೆದಿಟ್ಟಿದ್ದಾನೆ ಎನ್ನಲಾಗಿದೆ. ಡೆತ್‌ನೋಟ್‌ನಲ್ಲಿ ಕೆಲವರ ಹೆಸರುಗಳಿವೆ ಎಂದು ಹೇಳಲಾಗುತ್ತಿದ್ದು, ಅಜ್ಜುಗೌಡಗೆ ಹೆದರಿಸುತ್ತಿದ್ದವರು ಯಾರು ಎಂಬುವುದು ಪೊಲೀಸರ ಸೂಕ್ತ ತನಿಖೆಯಿಂದ ಗೋತ್ತಾಗಬೇಕಾಗಿದೆ.
ಸ್ಥಳಕ್ಕಾಗಮಿಸಿದ ಇಲಾಖೆಯ ಹಿರಿಯ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ.ಗ್ರಾಮೀಣ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.