ಉತ್ತರಪ್ರಭ
ನಂಜನಗೂಡು: ಪವರ್‌ಸ್ಟಾರ್ ಪುನೀತ್ ರಾಜಕುಮಾರ್ ಹುಟ್ಟುಹಬ್ಬದ ಸಂಭ್ರಮಾಚರಣೆಯ ವೇಳೆ ಅಭಿಮಾನಿಯೊಬ್ಬ ಆಕಾಶ್(22) ತೀವ್ರ ಹೃದಯಾಘಾತದಿಂದ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.
ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಹೆಡಿಯಾಲ ಗ್ರಾಮದಲ್ಲಿ ಪವರ್ ಸ್ಟಾರ್ ಜನ್ಮದಿನಾಚರಣೆಯ ನಿಮಿತ್ಯ ಸ್ನೇಹಿತರೊಂದಿಗೆ ನೃತ್ಯ ಮಾಡುತ್ತಿದ್ದ ಆಕಾಶ್ ಏಕಾಏಕಿ ಕುಸಿದು ಬಿದ್ದಿದ್ದು ತಕ್ಷಣ ಆತನನ್ನು ಸ್ಥಳೀಯರು ಸಮೀಪದ ಖಾಸಗಿ ಆಸ್ಪತ್ರೆಗೆ ಸೇರಿಸುವಷ್ಟರಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.

