ತುಮಕೂರು: ಇಂದು ಬೆಳ್ಳಂಬೆಳಿಗ್ಗೆ ಬಾರಿ ದುರಂತವೋಂದು ನಡೆದು ಹೋಗಿದೆ. ಹೌದು ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಪಳವಳ್ಳಿಕಟ್ಟೆ ತಿರುವಿನ ಬಳಿ ಖಾಸಗಿ ಬಸ್ ಪಲ್ಟಿಯಾಗಿ 5 ಜನ ಸಾವನ್ನಪ್ಪಿದ್ದು 25ಕ್ಕೂ ಜನರಿಗೆ ಗಂಭೀರವಾದ ಗಾಯಗಳಾಗಿದ್ದು ಸಾವಿನ ಸಂಖ್ಯೆ ಇನ್ನಷ್ಟೂ ಹೆಚ್ಚಾಗುವ ಸಾಧ್ಯತೆ ಇದೆ.ಚಾಲಕನ ನಿಯಂತ್ರಣ ತಪ್ಪಿ ಈ ಘಟನೆ ನಡೆದಿರಬಹುದು ಎನ್ನಲಾಗಿದೆ. ಸ್ಥಳಕ್ಕೆ ಪಾವಗಡ ಪೋಲೀಸರು ಬೇಟಿ ನೀಡಿ ಗಾಯಾಳುಗಳನ್ನು ಪಾವಗಡ ಆಸ್ಪತ್ರೆಗೆ ಸಾಗಿಸುತ್ತಿದ್ದಾರೆ. ಪಾವಗಡ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ಹೆಚ್ಚು ಕಾಲೇಜಿನ ವಿದ್ಯಾರ್ಥಿ ಗಳೆ ಆ ಬಸ್ನಲ್ಲಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ ರಸ್ತೆಯಲ್ಲಿ ಅನೇಕ ತಿರುವುಗಳಿದ್ದು ಅದೇ ಅವಘಡಕ್ಕೆ ಕಾರಣವಾಗಿರಬಹುದು ಎಂದು ಸ್ಥಳಿಯರು ಅನುಮಾನ ವ್ಯಕ್ತಪಡಿಸಿದ್ದಾರೆ.

