ಉತ್ತರಪ್ರಭ

ಮುಂಡರಗಿ: ಗದಗ ಪೊಲೀಸರು ಅಂದರ್ ಬಾಹರ್ ಅಡ್ಡೆ ಮೇಲೆ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಲಕ್ಷಾಂತರ ರೂಪಾಯಿ ಜೂಜಾಟದಲ್ಲಿ ಅಂದರೆ ಅಂದರ್ ಬಾಹರ್ ಆಡುತ್ತಿದ್ದ ಸರ್ಕಾರಿ ನೌಕರ ಸೇರಿದಂತರ 17 ಜನರು ಮೇಲೆ ಪ್ರಕರಣ ದಾಖಲಾಗಿದೆ.


ಹೌದು‌ ಇದು ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಬಿದರಹಳ್ಳಿ ಬಳಿ ಅಂದರ್ ಬಾಹರ್ ಆಡುತ್ತಿದ್ದವರ ಮೇಲೆ ದಾಳಿ ನಡೆಸಿದ ಪೊಲೀಸರು ಬೇರೆ ಬೇರೆ ಜಿಲ್ಲೆಯ ಜೂಜುಕೋರರ ಮೇಲೆ ಪೋಲಿಸರು ಕಾರಯಾಚರಣೆ ಮಾಡಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಕುರಿತು ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ್ ಡಿ ದೇವರಾಜು ಅವರ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ವಿಜಯ ಬಿರಾದಾರ ನೇತೃತ್ವದಲ್ಲಿ ಖಚಿತ ಮಾಹಿತಿ ಮೇರೆಗೆ ಪಂಡ್ ಅಡ್ಡೆಯ ಮೇಲೆ ದಾಳಿ ನಡೆಸಿ 17 ಆರೋಪಿಗಳಿಂದ ಒಟ್ಟು 14.83 ಲಕ್ಷ ರೂ. ಹೆಚ್ಚಿನ ಹಣ, 04 ಕಾರು ಹಾಗೂ 18 ಮೊಬೈಲ್ ಫೋನ್ ವಶಕ್ಕೆ ಪಡೆದಿದ್ದಾರೆ.
ಇದರಲ್ಲಿ ಅಚ್ಚರಿಯೆಂದರೆ ಸರ್ಕಾರಿ ನೌಕರನು ಭಾಗಿ ಆಗಿದ್ದು, ಬೇರೆ ಬೇರೆ ವೃತ್ತಿಯಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ . ಗದಗ ಮೂಲದವರು ಪರಾರಿಯಾಗಿದ್ದು ಬೇರೆ ಜಿಲ್ಲೆಗಳಾದ ಚಿತ್ರದುರ್ಗ, ಹಾವೇರಿ, ದಾವಣಗೆರೆ, ವಿಜಯನಗರ, ಬಳ್ಳಾರಿಯ ಆರೋಪಿಗಳು ಸೆರೆ ಸಿಕ್ಕದ್ದಾರೆ. ಆರೋಪಿಗಳ ಮೇಲೆ ಕೆ.ಪಿ ಆ್ಯಕ್ಟ್ 87 ಕಲಂನಡಿ ಜೂಜಾಟದ ಕೇಸ್ ದಾಖಲಿಸಲಾಗಿದೆ.
ಫಂಡ್ ಗೇಮ್ ಕಾರ್ಯಾಚರಣೆಯಲ್ಲಿ ಡಿವೈಎಸ್ಪಿ ವಿಜಯ ಬಿರಾದಾರ, ಇನ್ಸ್‌ಪೆಕ್ಟರ್‌ ಮಹಾಂತೇಶ್ ಟಿ. ಹಾಗೂ 10ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಗಳು ದಾಳಿ ನಡೆಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಶಿವಾನುಭದಲ್ಲಿಂದು ಜ. ಮಾತೆಮಹಾದೇವಿ ಸ್ಮರಣೆ

ಲಿಂಗಾಯತ ಪ್ರಗತಿಶೀಲ ಸಂಘ, ಆಶ್ರಯದಲ್ಲಿಂದು ಎಡೆಯೂರು ಜಗದ್ಗುರು ತೋಂಟದಾರ್ಯ ಮಠದಲ್ಲಿ ಜರುಗುವ ಶಿವಾನುಭವದಲ್ಲಿ ವಿಶ್ವದ ಪ್ರಥಮ ಮಹಿಳಾ ಜಗದ್ಗುರು ಡಾ. ಮಾತೆಮಹಾದೇವಿ ಅವರು 2ನೇ ಸ್ಮರಣೋತ್ಸವ ಹಾಗೂ ಪುಸ್ತಕ ಬಿಡುಗಡೆ ಕಾರ್ಯಕ್ರಮ ಆಯೋಜಿಸಲಾಗಿದೆ.

ಕೊರೋನಾ ಸಂಕಷ್ಟ: ಜನರ ನೋವಿಗೆ ಧ್ವನಿಗುತ್ತಿರುವ ಶಿವಕುಮಾರಗೌಡ

ಈಗಾಗಲೇ ಒಂದುವರೆ ತಿಂಗಳ ಲಾಕ್ ಡೌನ್ ನಿಂದಾಗಿ ಬಹುತೇಕ ಬಡ ಹಾಗೂ ಮದ್ಯಮ ಕುಟುಂಬಗಳು ತೀವ್ರ ಸಂಕಷ್ಟಕ್ಕೀಡಾಗಿವೆ. ಇದರಿಂದಾಗಿ ಸಾಕಷ್ಟು ಜನ ತಮ್ಮದೇ ಆದ ರೀತಿಯಲ್ಲಿ ಜನ ಸೇವಾ ಕಾರ್ಯಕ್ಕೆ ಮುಂದಾಗಿದ್ದಾರೆ. ಈ ನಿಟ್ಟಿನಲ್ಲಿ ಮುಂಡರಗಿ ಎಪಿಎಂಸಿ ಅಧ್ಯಕ್ಷ ಶಿವಕುಮಾರಗೌಡ ಪಾಟೀಲ್ ಜನರ ಸಂಕಷ್ಟಕ್ಕೆ ಧ್ವನಿಯಾಗಿದ್ದಾರೆ.

ಕೊರ್ಲಹಳ್ಳಿ: ಕುಡಿಯುವ ನೀರಿನ ಪೈಪ್ ಒಡೆದು ನೀರು ಪೋಲು!

ಗದಗ ನಗರಕ್ಕೆ ಸರಬರಾಜಾಗುವ ಕುಡಿಯುವ ನೀರಿನ ಪೈಪ್ ಲೈನ್ ಒಡೆದು ಅಪಾರ ಪ್ರಮಾಣದ ನೀರು ಪೋಲಾಗುತ್ತಿದೆ. ಮುಂಡರಗಿ ತಾಲೂಕಿನ ಕೊರ್ಲಹಳ್ಳಿಯಿಂದ ಗದಗ ನಗರಕ್ಕೆ ಕುಡಿಯುವ ನೀರು ಸರಬರಾಜು ಮಾಡುವ ಪೈಪ್ ಲೈನ್ ಇದಾಗಿದೆ. ಕೊರ್ಲಹಳ್ಳಿ ಸಮೀಪದಲ್ಲಿ ಹೆದ್ದಾರಿ ಪಕ್ಕದಲ್ಲಿ ಅಪಾರ ಪ್ರಮಾಣದ ನೀರು ಪೋಲಾಗುತ್ತಿದೆ.

ಗ್ರಾಮ ಪಂಚಾಯ್ತಿ ಚುನಾವಣೆ: ಶಿರಹಟ್ಟಿ ತಾಲೂಕಿನ ಮೀಸಲಾತಿಯ ವಿವರ

ಕರ್ನಾಟಕ ಸರ್ಕಾರವು ಗ್ರಾಮ ಪಂಚಾಯ್ತಿಗಳಿಗೆ ಚುನಾವಣೆ ನಡೆಸಲು ನಿರ್ಧರಿಸಿದ್ದು, ಈ ಕುರಿತು ಕ್ಷೇತ್ರವಾರು ಮೀಸಲಾತಿಯನ್ನು ಪ್ರಕಟಿಸಿದೆ. ಇಂದು ಶಿರಹಟ್ಟಿ ತಾಲೂಕಿನ ಗ್ರಾಮ ಪಂಚಾಯತಿಗಳ