ಉತ್ತರಪ್ರಭ ಸುದ್ದಿ
ಗದಗ:
ಗದಗ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಗದಗ, ಮುಂಡರಗಿ, ಶಿರಹಟ್ಟಿ, ಲಕ್ಷೆö್ಮÃಶ್ವರ, ನರಗುಂದ ಮತ್ತು ಗಜೇಂದ್ರಗಡ ತಾಲೂಕುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೌಲಾನಾ ಆಝಾದ ಮಾದರಿ ಶಾಲೆಗಳಿಗೆ 2022-23 ನೇ ಸಾಲಿಗೆ 6 ನೇ ತರಗತಿ ಒಟ್ಟು 360 ವಿದ್ಯಾರ್ಥಿಗಳ ದಾಖಲಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಇದರಲ್ಲಿ 75% ರಷ್ಟು ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಹಾಗೂ 25% ರಷ್ಟು ಇತರೇ ವರ್ಗದವರಿಗೆ ವಿತರಿಸಲಾಗುವುದು. ಅಂಗವಿಕಲ ವಿದ್ಯಾರ್ಥಿಗಳು, ವಿಶೇಷ ಗುಂಪಿಗೆ ಸೇರಿದ ಅಂದರೆ ಅನಾಥ ಮಕ್ಕಳು, ವಿಧವೆಯರ ಮಕ್ಕಳು, ಪೌರ ಕಾರ್ಮಿಕರ ಮಕ್ಕಳು ಇತ್ಯಾದಿಗಳಿಗೆ 3% ರಷ್ಟು ಆಸನಗಳನ್ನು ಕಾಯ್ದಿರಿಸಲಾಗಿದೆ 6ನೇ ತರಗತಿಗೆ ದಾಖಲಾತಿ ಬಯಸುವ ವಿದ್ಯಾರ್ಥಿಗಳು 5 ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು ಹಾಗೂ ಕುಟುಂಬದ ವಾರ್ಷಿಕ ಆದಾಯ ರೂ.2.50 ಲಕ್ಷ ಮೀರಿರಬಾರದು, ಅರ್ಜಿಗಳನ್ನು ದಿ:30-04-2022 ರೊಳಗಾಗಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಗದಗ ಇವರನ್ನು ಸಂಪರ್ಕಿಸಬಹುದಾಗಿದೆ. ಹೆಚ್ಚಿನ ವಿವರಗಳಿಗಾಗಿ ಕೆಳಕಂಡ ಅಲ್ಪಸಂಖ್ಯಾತರ ತಾಲೂಕು ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದಾಗಿದೆ.


ಗದಗ: ದೂ.ಸಂ. 9901132191; ರೋಣ: ದೂ.ಸಂ. 849485588; ಮುಂಡರಗಿ: ದೂ.ಸಂ. 9916689778; ಶಿರಹಟ್ಟಿ: ದೂ.ಸಂ. 7144799182; ನರಗುಂದ: ದೂ.ಸಂ. 9901501170

ಜಾಹಿರಾತು
Leave a Reply

Your email address will not be published. Required fields are marked *

You May Also Like

ಪ್ರಾಥಮಿಕ ಶಾಲಾ ಶಿಕ್ಷಕರ ವರ್ಗಾವಣೆ ನಿಯಮಕ್ಕೆ ಆಕ್ಷೇಪಣೆ

ಶಿಕ್ಷಕರ ವರ್ಗಾವಣಾ ಕಾಯ್ದೆಯನ್ನು ಸಂಪೂರ್ಣ ಶಿಕ್ಷಕ ಸ್ನೇಹಿ ವರ್ಗಾವಣಾ ಕಾಯ್ದೆಯಾಗಿ ರೂಪಗೊಳ್ಳಬೇಕಾದರೆ ಕೆಲವು ಅಂಶಗಳನ್ನು ಅಳವಡಿಸಿಕೊಂಡು ಅಂತಿಮ ನಿಯಮಗಳನ್ನು ಹಾಗೂ ಮಾರ್ಗಸೂಚಿಗಳನ್ನು ಪ್ರಕಟಿಸಬೇಕೆಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಈ ಕುರಿತು ಇಂದು ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದೆ.

ಖಾಸಗಿ‌ ಶಾಲಾ ಶಿಕ್ಷಕರ ನೆರವಿಗೆ ಸರ್ಕಾರಿ ಶಿಕ್ಷಕರಿಗೆ ಮನವಿ

ಬೆಂಗಳೂರು: ಸರ್ಕಾರಿ ಮತ್ತು ಅನುದಾನಿತ ಶಾಲೆಯ ಶಿಕ್ಷಕರು ತಮ್ಮ ಒಂದು ಅಥವಾ ಎರಡು ದಿನದ ಸಂಬಳವನ್ನು…

ಪ್ರಕಾಶ ಗೊಂಗಡಿ ದಂಪತಿಗೆ ಆತ್ಮೀಯ ಸನ್ಮಾನ

ಆಲಮಟ್ಟಿ : ವಿಜಯಪುರ ಜಿಲ್ಲೆಯ ಪದವಿ ಪೂರ್ವ ಶಿಕ್ಷಣ ಇಲಾಖೆ ಅಧೀಕ್ಷಕ ಪ್ರಕಾಶ ಗೊಂಗಡಿ ಅವರಿಗೆ…

ದೈಹಿಕ ಶಿಕ್ಷಣ ಶಿಕ್ಷಕರ ನೇಮಕಾತಿಗಾಗಿ ಜಾತಕಪಕ್ಷಿಯಂತೆ ನಿರೀಕ್ಷೆ- ಬಸವರಾಜೇಶ್ವರಿ ಶೀಲವಂತ ನೇಮಕಾತಿ ಪ್ರಕ್ರಿಯೆ ಕೂಡಲೇ ಆರಂಭಿಸಲು ಸಕಾ೯ರಕ್ಕೆ ಆಗ್ರಹ

ಉತ್ತರಪ್ರಭ ಸುದ್ದಿನಿಡಗುಂದಿ: ರಾಜ್ಯದ ಪ್ರತಿಯೊಂದು ಶಾಲಾ, ಪ,ಪೂ ಕಾಲೇಜುಗಳಲ್ಲಿ ದೈಹಿಕ ಶಿಕ್ಷಣ ಪಠ್ಯದ ಸವಿರುಚಿ ಮಕ್ಕಳು…