ಪರೀಕ್ಷಾ ಕೊಠಡಿಯಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡಿದ್ದ ಪ್ರಕರಣ ಏಳು ಜನರ ಅಮಾನತ್ತು…!

ಉತ್ತರಪ್ರಭ ಸುದ್ದಿ
ಗದಗ: ಪರೀಕ್ಷಾ ಕೊಠಡಿಯಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡಿದ್ದ ಪ್ರಕರಣ. ಐವರು ಮೇಲ್ವಿಚಾರಕರು, ಇಬ್ಬರು ಅಧೀಕ್ಷಕರು ಸೇರಿದಂತೆ ಏಳು ಜನರ ಅಮಾನತ್ತು ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಇಂದು ನಡೆದ ಎಸ್ ಎಸ್ ಎಲ್ ಸಿ ಪರೀಕ್ಷೆಯು ನಗರದ ಸಿಎಸ್ ಪಾಟೀಲ ಪ್ರೌಢ ಶಾಲೆಯ ನಡೆಸಲಾಯಿತು.

ಈ ಸಂದರ್ಭದಲ್ಲಿ ಕೆಲ ವಿದ್ಯಾರ್ಥಿನಿಯರು ಪರೀಕ್ಷಾ ಕೊಠಡಿಯಲ್ಲಿ ಹಿಜಾಬ್ ಧರಿಸಿ ಪರೀಕ್ಷೆ ಬರೆದಿದ್ದಾರೆ. ಪರೀಕ್ಷೆ ಗೆ ಅವಕಾಶ ನೀಡಿದ್ದ ಶಿಕ್ಷಕರು ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗಿದೆ.ಮಾರ್ಚ್ 28 ರಂದು ನಡೆದಿದ್ದ ಪ್ರಥಮ ಭಾಷೆ ಪರೀಕ್ಷೆ ವೇಳೆ ಹಿಜಾಬ್ ಗೆ ಅವಕಾಶ ನೀಡಿದ ಪ್ರಕರಣಕ್ಕೆ ಸಂಬಂದಿಸಿದಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ವರದಿ ಹಿನ್ನೆಲೆ ಪರೀಕ್ಷಾ ಮೇಲ್ವಿಚಾರಕರು, ಸೂಪರಿಟೆಂಡೆಂಟ್ ಗಳನ್ನು ಅಮಾನತು ಮಾಡಲಾಗಿದೆ ಎಂದು ತಿಳಿದು ಬಂದಿದೆ. ಪರೀಕ್ಷಾ ಕೇಂದ್ರದ ಅಧೀಕ್ಷಕರು ಕೆಬಿ ಭಜಂತ್ರಿ, ಬಿಎಸ್ ಹೊನ್ನಗುಡಿ,ಕೊಠಡಿ ಮೇಲ್ವಿಚಾರಕರಾದ ಎಸ್ ಜಿ ಗೋಡಕೆ, ಎಸ್ ಎಸ್ ಗುಜಮಾಗಡಿ, ವಿಎನ್ ಕಿವುಡರ್, ಎಸ್ ಯು ಹೊಕ್ಕಳದ, ಎಸ್ ಎಮ್ ಪತ್ತಾರ ಅವರನ್ನೂ ಅಮಾನತು ಮಾಡಿ ತಕ್ಷಣಕ್ಕೆ ಜಾರಿಯಾಗುವಂತೆ ಏಳು ಜನರನ್ನ ಅಮಾನತು ಮಾಡಿ ಗದಗ ಡಿಡಿಪಿಐ ಜಿ ಎಮ್ ಬಸವಲಿಂಗಪ್ಪ ಆದೇಶ ಮಾಡಿದ್ದಾರೆ ಎಂದು ತಿಳಿದುಬಂದಿದೆ.

Exit mobile version