ಉತ್ತರಪ್ರಭ
ಶಿರಹಟ್ಟಿ:
ಪಟ್ಟಣದ ಹೊರವಲಯದಲ್ಲಿ ಗುಡುಗು ಸಿಡಿಲು ಸಹಿತ ಭಾರಿ ಮಳೆಯಾಗಿದ್ದು, ಸಿಡಿಲು ಬಡಿದು ಇಬ್ಬರು ಸಾವನ್ನಪ್ಪಿದ ಘಟನೆ ಶನಿವಾರ ಸಂಭವಿಸಿದೆ.

ಮಧ್ಯಾನ್ಹ ಗಾಳಿ ಗುಡುಗು ಸಹಿತವಾಗಿ ಸುರಿದ ಭಾರಿ ಮಳೆಯಿಂದ ಹರಿಪುರ ಹೊರವಲಯದಲ್ಲಿನ ಮಾವಿನ ತೋಟ ಕಾಯಲಿಕ್ಕೆ ಹೋದ ಮಾಬುಸಾಬ ದೊಡ್ಡಮನಿ(55) ಹಾಗೂ ದನ ಮೇಯಿಸಲು ಹೋಗಿದ್ದ ಹರಿಪುರದ ನಿವಾಸಿ ಮುರಗೇಶ (40)ಹೊಸಮನಿ ಸಿಡಿಲು ಬಡಿದು ಸಾವನ್ನಪ್ಪಿದ ದುರ್ದೈವಿಗಳು.

ಘಟನಾ ಸ್ಥಳಕ್ಕೆ ತಹಶೀಲ್ದಾರ ಕಲಗೌಡ ಪಾಟೀಲ, ಕಂದಾಯ ನಿರೀಕ್ಷಕ ಮಾಂತೇಶ ಮುಗುದುಂ, ಗ್ರಾಮಲೆಕ್ಕಾಧಿಕಾರಿ ಪ್ರವೀಣ, ಪಿಎಸ್ಐ ಪ್ರವೀಣ ಗಂಗೋಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

You May Also Like

ಅನಾಮಧೇಯ ವ್ಯಕ್ತಿಯ ಶವಪತ್ತೆ: ಗುರುತು ಪತ್ತೆಗೆ ಮನವಿ

ಗಜೇಂದ್ರಗಡ : ಪಟ್ಟಣದ ಟಿಟಿಡಿ ಕಲ್ಯಾಣ ಮಂಟಪದ ಸಮೀಪದಲ್ಲಿ ಅನಾಮಧೇಯ ವ್ಯಕ್ತಿಯ ಶವ ಪತ್ತೆಯಾಗಿದೆ. ಪಟ್ಟಣದ…

ಜಕ್ಕಲಿ ಗ್ರಾಮದಲ್ಲಿ ಪಲ್ಸ್ ಪೋಲಿಯೋ ಜಾಗೃತಿ ಜಾಥಾ

ಜಕ್ಕಲಿ ಗ್ರಾಮದ ಎಸ್ಎಜೆಡಿ ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿಗಳು ರಾಷ್ಟ್ರೀಯ ಪಲ್ಸ್ ಪೋಲಿಯೋ ದಿನಾಚರಣೆ ಅಂಗವಾಗಿ ಆರೋಗ್ಯ ಇಲಾಖೆಯ ಸಹಯೋಗದೊಂದಿಗೆ ಊರಿನ ಪ್ರಮುಖ ರಸ್ತೆಗಳಲ್ಲಿ ಜಾಗೃತಿ ಜಾಥಾ ಕೈಗೊಂಡರು.

ಡ್ರೈವರ್ ಕಂಡಕ್ಟರ್ ಗಳ ನಿತ್ಯ ಶೋಷಣೆಗೆ ಮುಕ್ತಿ ಎಂದು?

ಕೆಎಸ್ಆರ್ಟಿಸಿ ಚಾಲಕ ಹಾಗೂ ನಿರ್ವಾಹಕರು ಕೊರೋನಾ ವಾರಿಯರ್ಸ್ ಎಂದು ಬಾಯಿ ಮಾತಿಂದ ಹೇಳಿದರೆ ಸಾಲದು. ಪಾಪ..!, ಅವರ ಸಂಕಷ್ಟಗಳಿಗೆ ಸರ್ಕಾರ ಸ್ಪಂದಿಸುವ ಅವಶ್ಯಕತೆ ಇದೆ.