ಉತ್ತರಪ್ರಭ
ಧಾರವಾಡ:
ಹಿರಿಯ ಐಎಎಸ್ ಅಧಿಕಾರಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿಯಾದ ಘಟನೆ ತಾಲೂಕಿನ ಯರಿಕೊಪ್ಪ ಬಳಿ ಹುಬ್ಬಳ್ಳಿ-ಧಾರವಾಡ ಬೈಪಾಸ್‌ನಲ್ಲಿ ಮಂಗಳವಾರ ಬೆಳಗಿನ ಜಾವ ಸಂಭವಿಸಿದೆ. ಅಧಿಕಾರಿ ಜೊತೆ ಅವರ ಕುಟುಂಬದವರು ಪ್ರಯಾಣಿಸುತ್ತಿದ್ದರು ಆದರೆ, ಅಚ್ಚರಿಯ ರೀತಿಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಐಎಎಸ್ ಅಧಿಕಾರಿ ವಿಜಯ ಮಹಾಂತೇಶ ದಾನಮ್ಮನವರ ಕಾರು ಪಲ್ಟಿಯಾಗಿದ್ದು, ಅವರ ಜೊತೆ ಪತ್ನಿ ಶ್ವೇತಾ, ಮಕ್ಕಳಾದ ತನ್ವಿ, ವಿಹಾನ್, ಮಾವ ಗಂಗಾಧರ, ಸಂಬAಧಿ ಪ್ರವೀಣಕುಮಾರ ಪ್ರಯಾಣಿಸುತ್ತಿದ್ದರು.

ಅಪಘಾತದಲ್ಲಿ ಕಾರು ಚಾಲಕ ಬಸವರಾಜ ಸಣ್ಣ ಗಾಯಗೊಂಡಿದ್ದು, ಗಾಯಗೊಂಡ ಎಲ್ಲರನ್ನೂ ಸಮೀಪದ ಎಸ್.ಡಿ.ಎಂ. ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸುದ್ದಿ ತಿಳಿದ ಕೂಡಲೇ ಗ್ರಾಮೀಣ ಸಿಪಿಐ ಮಂಜುನಾಥ ಕುಸುಗಲ್ಲ ಮತ್ತು ಸಿಬ್ಬಂದಿ ಘಟನಾ ಸ್ಥಳಕ್ಕೆ ಭೇಟಿ ನೀಡಿ, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಎದುರಿನಿಂದ ಬಂದ ವಾಹನದಿಂದಾಗಿ ದಾರಿ ಇಲ್ಲದೇ ಅಪಘಾತ ತಪ್ಪಿಸಲು ಹೋಗಿ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ ಎಂದು ಗೊತ್ತಾಗಿದೆ. ಈ ಹಿಂದೆ ದಾವಣಗೆರೆ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿದ್ದ ವಿಜಯಮಹಾಂತೇಶ ಬಿ.ದಾನಮ್ಮನವರ ಅವರ ವರ್ಗಾವಣೆ ಆದೇಶ ಸೋಮವಾರ ಬಂದಿತ್ತು. ಈ ಹಿನ್ನೆಲೆಯಲ್ಲಿ ಡಾವಣಗೆರೆಯಿಂದ ವಿಜಯಪುರಕ್ಕೆ ಅಧಿಕಾರ ವಹಿಸಿಕೊಳ್ಳಲು ಅವರು ತೆರಳುತ್ತಿದ್ದ ಸಮಯದಲ್ಲಿಯೇ ಈ ದುರ್ಘಟನೆ ನಡೆದಿದೆ.

Leave a Reply

Your email address will not be published. Required fields are marked *

You May Also Like

ಟಿಕ್ ಟಾಕ್ ಬ್ಯಾನ್ ಗೆ ಆಗ್ರಹಿಸಿ ಮುಂಡರಗಿಯಲ್ಲಿ ಪ್ರತಿಭಟನೆ

ಚೀನಿ ಆಪ್ ಟಿಕ್ ಟಾಕ್ ನ್ನು ಬ್ಯಾನ್ ಮಾಡಬೇಕು ಎಂದು ಆಗ್ರಹಿಸಿ ಮುಂಡರಗಿಯಲ್ಲಿಂದು ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸಿದವು.

ಕಾರ್ಮಿಕರ ಮುಷ್ಕರ ಹಿನ್ನೆಲೆ ಲಕ್ಷ್ಮೇಶ್ವರದಲ್ಲಿ ಪ್ರತಿಭಟನೆ

ಕೇಂದ್ರ ಸರ್ಕಾರದ ಕಾರ್ಮಿಕ ಹಾಗೂ ರೈತ ವಿರೊಧ ನೀತಿ ಖಂಡಿಸಿ ಗದಗ ಜಿಲ್ಲೆ ಲಕ್ಷ್ಮೇಶ್ವರ ಪಟ್ಟಣದಲ್ಲಿ ವಿವಿಧ ಕಾರ್ಮಿಕ ಹಾಗೂ ರೈತಪರ ಮತ್ತು ಕನ್ನಡ ಪರ ಸಂಘಟನೆಗಳಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

ಪವರ ಸ್ಟಾರ್ ಅಭಿಮಾನಿ ಹೃದಯಾಘಾತದಿಂದ ಸಾವು

ಉತ್ತರಪ್ರಭನಂಜನಗೂಡು: ಪವರ್‌ಸ್ಟಾರ್ ಪುನೀತ್ ರಾಜಕುಮಾರ್ ಹುಟ್ಟುಹಬ್ಬದ ಸಂಭ್ರಮಾಚರಣೆಯ ವೇಳೆ ಅಭಿಮಾನಿಯೊಬ್ಬ ಆಕಾಶ್(22) ತೀವ್ರ ಹೃದಯಾಘಾತದಿಂದ ಮೃತಪಟ್ಟಿದ್ದಾನೆ…

ಆಹಾರ ಸಾಮಾಗ್ರಿಗಾಗಿ ಶೀಲ್ ಡೌನ್ ಪ್ರದೇಶದ ಜನರ ಧರಣಿ

ಹಾವೇರಿ: ಆಹಾರ ಸಾಮಗ್ರಿ ನೀಡುತ್ತಿಲ್ಲವೆಂದು ಸೀಲ್ ಡೌನ್ ಪ್ರದೇಶ ಜನರು ಧರಣಿ ನಡೆಸಿದ ಘಟನೆ ಹಾವೇರಿ…