ಉತ್ತರಪ್ರಭ
ಧಾರವಾಡ:
ಹಿರಿಯ ಐಎಎಸ್ ಅಧಿಕಾರಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿಯಾದ ಘಟನೆ ತಾಲೂಕಿನ ಯರಿಕೊಪ್ಪ ಬಳಿ ಹುಬ್ಬಳ್ಳಿ-ಧಾರವಾಡ ಬೈಪಾಸ್‌ನಲ್ಲಿ ಮಂಗಳವಾರ ಬೆಳಗಿನ ಜಾವ ಸಂಭವಿಸಿದೆ. ಅಧಿಕಾರಿ ಜೊತೆ ಅವರ ಕುಟುಂಬದವರು ಪ್ರಯಾಣಿಸುತ್ತಿದ್ದರು ಆದರೆ, ಅಚ್ಚರಿಯ ರೀತಿಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಐಎಎಸ್ ಅಧಿಕಾರಿ ವಿಜಯ ಮಹಾಂತೇಶ ದಾನಮ್ಮನವರ ಕಾರು ಪಲ್ಟಿಯಾಗಿದ್ದು, ಅವರ ಜೊತೆ ಪತ್ನಿ ಶ್ವೇತಾ, ಮಕ್ಕಳಾದ ತನ್ವಿ, ವಿಹಾನ್, ಮಾವ ಗಂಗಾಧರ, ಸಂಬAಧಿ ಪ್ರವೀಣಕುಮಾರ ಪ್ರಯಾಣಿಸುತ್ತಿದ್ದರು.

ಅಪಘಾತದಲ್ಲಿ ಕಾರು ಚಾಲಕ ಬಸವರಾಜ ಸಣ್ಣ ಗಾಯಗೊಂಡಿದ್ದು, ಗಾಯಗೊಂಡ ಎಲ್ಲರನ್ನೂ ಸಮೀಪದ ಎಸ್.ಡಿ.ಎಂ. ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸುದ್ದಿ ತಿಳಿದ ಕೂಡಲೇ ಗ್ರಾಮೀಣ ಸಿಪಿಐ ಮಂಜುನಾಥ ಕುಸುಗಲ್ಲ ಮತ್ತು ಸಿಬ್ಬಂದಿ ಘಟನಾ ಸ್ಥಳಕ್ಕೆ ಭೇಟಿ ನೀಡಿ, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಎದುರಿನಿಂದ ಬಂದ ವಾಹನದಿಂದಾಗಿ ದಾರಿ ಇಲ್ಲದೇ ಅಪಘಾತ ತಪ್ಪಿಸಲು ಹೋಗಿ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ ಎಂದು ಗೊತ್ತಾಗಿದೆ. ಈ ಹಿಂದೆ ದಾವಣಗೆರೆ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿದ್ದ ವಿಜಯಮಹಾಂತೇಶ ಬಿ.ದಾನಮ್ಮನವರ ಅವರ ವರ್ಗಾವಣೆ ಆದೇಶ ಸೋಮವಾರ ಬಂದಿತ್ತು. ಈ ಹಿನ್ನೆಲೆಯಲ್ಲಿ ಡಾವಣಗೆರೆಯಿಂದ ವಿಜಯಪುರಕ್ಕೆ ಅಧಿಕಾರ ವಹಿಸಿಕೊಳ್ಳಲು ಅವರು ತೆರಳುತ್ತಿದ್ದ ಸಮಯದಲ್ಲಿಯೇ ಈ ದುರ್ಘಟನೆ ನಡೆದಿದೆ.

Leave a Reply

Your email address will not be published. Required fields are marked *

You May Also Like

ಕಾಂಗ್ರೆಸ್ ನಾಯಕ ಖರ್ಗೆ ಕುಟುಂಬಕ್ಕೆ ಜೀವಬೆದರಿಕೆ..!

ಬೆಂಗಳೂರು: ಕಾಂಗ್ರೆಸ್ ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಕುಟುಂಬಕ್ಕೆ ಜೀವ ಬೆದರಿಕೆಯ ಕರೆ ಬಂದಿದೆ…

ಗದಗನಲ್ಲಿ ಮತ್ತೆ ಐದು ಪಾಸಿಟಿವ್!

ಗದಗ: ಜಿಲ್ಲೆಯಲ್ಲಿ ಮತ್ತೆ ಐದು ಜನರಿಗೆ ಕರೊನಾ ಸೋಂಕು ದೃಢಪಟ್ಟಿದೆ.ಎರಡು ಕೇಸ್ ಕಂಟೈನಮೆಂಟ್ ಝೂನ್ ಹಾಗೂ…

ರೈತರ ಕಷ್ಟ ಕಣ್ತೆರೆದು ನೋಡ್ರಿ ಎಮ್.ಎಲ್.ಎ ಹೇಳಿದಂಗ ಕೇಳಬ್ಯಾಡ್ರಿ: ರೈತರಿಂದ ಲಕ್ಷ್ಮೇಶ್ವರ ತಹಶೀಲ್ದಾರ್ ತರಾಟೆಗೆ

ರಾಜ್ಯದಲ್ಲಿ ಸರ್ಕಾರ ಭೂಸುಧಾರಣೆ ಕಾಯ್ದೆ ಮೂಲಕ ರೈತರಿಗೆ ಮಾರಕವಾದ ಕಾಯ್ದೆ ಜಾರಿಗೆ ತಂದಿದೆ. ಜೊತೆಗೆ ಸ್ಥಳೀಯವಾಗಿಯೂ ರೈತರು ಸಾಕಷ್ಟು ಸಮಸ್ಯೆ ಎದುರಿಸುತ್ತಿದ್ದಾರೆ. ಇದಕ್ಕೆ ನೀವು ಸರಿಯಾಗಿ ಸ್ಪಂದಿಸುತ್ತಿಲ್ಲ. ಶಾಸಕರು ಹೇಳಿದಂತೆ ಮಾತ್ರ ಕೇಳಬೇಡಿ ರೈತರ ಸಂಕಷ್ಟಗಳನ್ನು ಕಣ್ತೆರೆದು ನೋಡಿ ಎಂದು ತಹಶೀಲ್ದಾರರನ್ನು ರೈತರು ತರಾಟೆಗೆ ತೆಗೆದುಕೊಂಡ ಘಟನೆ ಲಕ್ಷ್ಮೇಶ್ವರದಲ್ಲಿ ನಡೆಯಿತು.