ಉತ್ತರಪ್ರಭ

ಗದಗ: ಗದಗ ಜಿಲ್ಲೆಯಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಯ ಕಾರಣದಿಂದ ಎಲ್ಲಾ ಅಂಗನವಾಡಿ, ಶಾಲೆಗಳಿಗೆ ಇಂದು ಮೇ.20 ರಂದು ಜಿಲ್ಲಾಧಿಕಾರಿ ಎಂ. ಸುಂದರೇಶ್ ಬಾಬು ಅವರು ರಜೆ ಘೋಷಿಸಿದ್ದಾರೆ.

ಮಕ್ಕಳ ಸುರಕ್ಷತೆಯ ಹಿತದೃಷ್ಟಿಯಿಂದ ಮತ್ತು ಹವಾಮಾನ ಇಲಾಖೆಯು ಮಳೆ ಮುಂದುವರೆಯುವ ಸಾಧ್ಯತೆಯ ಮುನ್ಸೂಚನೆ ನೀಡಿದ ಹಿನ್ನೆಲೆಯಲ್ಲಿ ಮೇ.20 ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ ಹಾಗೂ ಶಾಲೆಗಳಿಗೆ ರಜೆ ನೀಡಲಾಗಿದೆ.

ನಿನ್ನೆ ಮೇ.19 ರಿಂದ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಮಳೆಯಾಗುತ್ತಿದ್ದು, ಇಂದು ಮುಂದುವರೆದಿದೆ. ಜನ ಹಾಗೂ ಜಾನುವಾರುಗಳ ಸುರಕ್ಷತೆಗೆ ಜಿಲ್ಲೆಯ ಸಾರ್ವಜನಿಕರು ಹೆಚ್ಚು ಮುತುವರ್ಜಿ ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ಮನವಿ ಮಾಡಿದ್ದಾರೆ.

Leave a Reply

Your email address will not be published. Required fields are marked *

You May Also Like

ಗದಗ ಜಿಲ್ಲೆಯಲ್ಲಿ ಕೊರೊನಾ ಕಾರ್ಮೋಡ: ಇಂದು 31 ಪಾಸಿಟಿವ್!

ಜಿಲ್ಲೆಯಲ್ಲಿಂದು 31 ಕೊರೊನಾ ಪಾಸಿಟಿವ್ ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 616 ಕ್ಕೆ ಏರಿಕೆಯಾಗಿದೆ. ಒಟ್ಟು ಗುಣಮುಖ ಹೊಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 226. 376

ಹುಲ್ಲೂರಿನಲ್ಲಿ ಮಳೆಯ ಆರ್ಭಟ: ಧರೆಗುರುಳುತ್ತಿವೆ ಮನೆ-ಮರಗಳು

ಕಳೆದ ಎರ್ಡ್ಮೂರು ದಿನಗಳಿಂದ ಸುರಿಯುತ್ತಿರುವ ಮಳೆಗೆ ಮನೆ ಹಾಗೂ ಮರಗಳು ಧರೆಗುರುಳುತ್ತಿವೆ. ಇದರಿಂದ ಗದಗ ಜಿಲ್ಲೆಯ ರೋಣ ತಾಲೂಕಿನ ಹುಲ್ಲೂರು ಗ್ರಾಮಸ್ಥರು ಆತಂಕಕ್ಕೀಡಾಗಿದ್ದಾರೆ.

ರಾಷ್ಟ್ರೀಯ ಹಸಿರು ಪಡೆ ಕಾರ್ಯಕ್ರಮ

ಗ್ರಾಮದ ಸರಕಾರಿ ಮಾದರಿಯ ಹಿರಿಯ ಪ್ರಾಥಮಿಕ ಡಿಪಿಇಪಿ ಶಾಲೆಯಲ್ಲಿ ರಾಷ್ಟ್ರೀಯ ಹಸಿರು ಪಡೆ ಕಾರ್ಯಕ್ರಮವನ್ನು ಶಾಲೆಯ ಪ್ರಧಾನ ಶಿಕ್ಷಕ ಎಂ.ಟಿ.ಕಟ್ಟಿಮನಿ ಸಸಿಗಳಿಗೆ ನೀರು ಹಾಕುವ ಮೂಲಕ ಆಚರಿಸಲಾಯಿತು.