ಉತ್ತರಪ್ರಭ
ಮುಂಡರಗಿ: ತಾಲ್ಲೂಕಿನ ಮುರುಡಿಯ ಸರಕಾರಿ ಪ್ರೌಢ ಶಾಲೆಯ 2021-22ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಬಂದಿದ್ದು, ಒಟ್ಟು 45 ವಿದ್ಯಾರ್ಥಿಗಳು ಪರೀಕ್ಷೆ ಹಾಜರಾಗಿದ್ದರು. ಅದರಲ್ಲಿ 42 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಒಟ್ಟು ಶೇಕಡವಾರು ಫಲಿತಾಂಶ 93.33 ಬಂದಿದೆ.



ಮುರುಡಿ ಪ್ರೌಢ ಶಾಲೆಯ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸರ್ವ ಸದಸ್ಯರು ಮತ್ತು ಶಾಲೆಯ ಗುರುಬಳಗ ಹಾಗೂ ಗ್ರಾಮದ ಶಿಕ್ಷಣ ಪ್ರೇಮಿಗಳು ಅಭಿನಂದಿಸಿದ್ದಾರೆ.