ಉತ್ತರಪ್ರಭ ಸುದ್ದಿ
ಗದಗ:
2022-23 ನೇ ಸಾಲಿನಲ್ಲಿ ಪ್ರಪ್ರಥಮವಾಗಿ ಪ್ರತಿ ಗ್ರಾಮ ಪಂಚಾಯತಿಗೆ ಒಂದರ0ತೆ ಸ್ವಾಮಿ ವಿವೇಕಾನಂದ ಯುವ ಸ್ವ-ಸಹಾಯ ಗುಂಪುಗಳನ್ನು ರಚಿಸಿ, ಸ್ವ-ಉದ್ಯೋಗ ಹಾಗೂ ಆರ್ಥಿಕ ಚಟುವಟಿಕೆಗಳನ್ನು ಕೈಗೊಳ್ಳಲು ಯುವಕರನ್ನು ಪ್ರೋತ್ಸಾಹಿಸಲಾಗುವುದು. ಸ್ವಾಮಿ ವಿವೇಕಾನಂದ ಯುವಕರ ಸ್ವ-ಸಹಾಯ ಗುಂಪುಗಳನ್ನು ರಚಿಸಿ ಸ್ವ-ಉದ್ಯೋಗ ಹಾಗೂ ಆರ್ಥಿಕ ಚಟುವಟಿಕೆಗಳನ್ನು ಕೈಗೊಳ್ಳಲು ಯುವಕರನ್ನು ಪ್ರೋತ್ಸಾಹಿಸುವ ಕಾರ್ಯಕ್ರಮವನ್ನು ರಾಜ್ಯ ಸರ್ಕಾರವು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಅನುಷ್ಟಾನಗೊಳಿಸಲು ನಿರ್ಧರಿಸಿದೆ. ಸ್ವಾಮಿ ವಿವೇಕಾನಂದ ಯುವ ಸ್ವಸಹಾಯ ಸಂಘಗಳನ್ನು ಜಿಲ್ಲೆಯಲ್ಲಿರುವ 122 ಗ್ರಾಮ ಪಂಚಾಯತಿಗೆ ಒಂದರAತೆ ಯುವ ಸ್ವಸಹಾಯ ಗುಂಪನ್ನು ರಚಿಸಲು 18-29 ವರ್ಷದೊಳಗಿನ ಯುವಕರು ಸ-ಸಹಾಯ ಗುಂಪನ್ನು ರಚಿಸಲು ಅರ್ಹರಾಗಿರುತ್ತಾರೆ.
ಸರ್ಕಾರದಿಂದ ಯುವ ಜನರಿಗಾಗಿ ಇರುವ ಯೋಜನೆಗಳನ್ನು ಉಪಯೋಗಿಸಿಕೊಂಡು ಮತ್ತು ಸ್ಥಳೀಯವಾಗಿ ಇರುವ ಸಂಪನ್ಮೂಲಗಳನ್ನು ಬಳಸಿಕೊಂಡು ಒಂದು ಸಶಕ್ತ, ಸುಸ್ಥಿತ ಮತ್ತು ಸ್ವ-ಸಹಾಯ ಸಂಘವನ್ನು ಸ್ಥಾಪಿಸುವುದು, ಈ ಯೋಜನೆಯ ಮುಖ್ಯ ಗುರಿಯಾಗಿದೆ. ಗ್ರಾಮ ಪಂಚಾಯತಿ ವ್ಯಾಪ್ತಿಗೆ ಒಳಪಡುವ ಯುವಕರು ಈ ಯೋಜನೆಯ ಸದುಪಯೋಗಪಡೆದುಕೊಳ್ಳಲು ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ,ಗದಗ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಯುವ ಸಮಾಲೋಚಕರು, ಯುವ ಸ್ಪಂದನ, ಗದಗ ದೂರವಾಣಿ ಸಂಖ್ಯೆ 8277234335, 08372-220375 ಹಾಗೂ ಸಹಾಯಕ ನರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಗದಗ ಇವರನ್ನು ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ 08372-238345 ಸಂರ್ಕಿಸಬಹುದಾಗಿದೆ.

Leave a Reply

Your email address will not be published. Required fields are marked *

You May Also Like

ಕೈ ಕಮಲದ ನಡುವೆ ಟ್ವೀಟ್ ಸಮರ

ಬ್ರಷ್ಟಾಚಾರದ ವಿಷಯವೀಗ ಕೈ-ಕಮಲದ ಟ್ವೀಟ್ ಸಮರಕ್ಕೆ ಕಾರಣವಾಗಿದೆ. ಡಿಕೆಶಿ ವಿಚಾರವಾಗಿ ಬಿಜೆಪಿ ಟ್ವೀಟ್ ಮಾಡಿದರೆ, ಸಿಎಂ ಬಿಎಸ್ವೈ ಕುರಿತು ಕಾಂಗ್ರೆಸ್ ಟ್ವೀಟ್ ಮಾಡಿದೆ.

ಗದಗ ಜಿಲ್ಲೆಯಲ್ಲಿಂದು 116 ಕೊರೊನಾ ಪಾಸಿಟಿವ್!

ಜಿಲ್ಲೆಯಲ್ಲಿಂದು 116 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3894 ಕ್ಕೆ ಏರಿಕೆಯಾಗಿದೆ. ಸೋಂಕಿನಿಂದ ಗುಣಮುಖರಾಗಿ ಇಂದು 121 ಜನರು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಈ ಮೂಲಕ ಒಟ್ಟು ಬಿಡುಗಡೆ ಹೊಂದಿದವರ ಸಂಖ್ಯೆ 2756.

ಜುಲೈ ತಿಂಗಳಲ್ಲಿ ರಾಜ್ಯದಲ್ಲಿ ಹೆಚ್ಚಾಗಲಿದೆ ಸೋಂಕು : ಸುಧಾಕರ್

ರಾಜ್ಯದಲ್ಲಿ ಜುಲೈ ತಿಂಗಳಲ್ಲಿ ಅತೀ ಹೆಚ್ಚು ಕೊರೊನಾ ಸೋಂಕು ಹರಡುವ ಸಾಧ್ಯತೆ ಇದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಕೆ. ಸುಧಾಕರ್ ತಿಳಿಸಿದ್ದಾರೆ.

ಕೇಲೂರ ಗ್ರಾಮಕ್ಕೆ ಜಿಲ್ಲಾಧಿಕಾರಿಗಳ ಬೇಟಿ: ಸಮಾಜ ಕಲ್ಯಾಣ ಇಲಾಖೆಯಿಂದ 4ಲಕ್ಷದ ಚೆಕ್ ವಿತರಣೆ

ಉತ್ತರಪ್ರಭ ಗದಗ: ಮುಂಡರಗಿ ತಾಲೂಕಿನ ಕೇಲೂರು ಗ್ರಾಮದಲ್ಲಿ ಅರಣ್ಯ ಇಲಾಖೆಯಿಂದ ಅರಣ್ಯ ಭೂಮಿ ಒತ್ತುವರಿ ತೆರವು…