ನಿಡಗುಂದಿ: ರಸ್ತೆ ದಾಟುತ್ತಿದ್ದ ಕುರಿ ಹಿಂಡಿನ ಮೇಲೆ ಆಕಸ್ಮಿಕವಾಗಿ ಕಾರು ಹರಿದ ಪರಿಣಾಮ 8 ಕುರಿಗಳು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಆರು ಕುರಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆಯೊಂದು ಸಮೀಪದ ಅಬ್ಬಿಹಾಳ ಕ್ರಾಸ್ ಹತ್ತಿರದ ರಾಷ್ಟ್ರೀಯ ಹೆದ್ದಾರಿ-50 ರಲ್ಲಿ ಬುಧವಾರ ಸಂಜೆ ನಡೆದಿದೆ. ಬೇನಾಳ ಎನ್ ಎಚ್ ಗ್ರಾಮದ ಅಶೋಕ ಬೆಳ್ಳೆಪ್ಪ ದಿಂಡವಾರ ಅವರಿಗೆ ಸೇರಿದ ಈ 14 ಕುರಿಗಳ ಹಿಂಡು ಮೇಯಲು ಹೊಲಕ್ಕೆ ಹೋಗಿದ್ದವು. ಹೆದ್ದಾರಿ ದಾಟುವಾಗ ಏಕಾಏಕಿ ಈ ಘಟನೆ ಸಂಭವಿಸಿದೆ.
ಆರು ಕುರಿಗಳಿಗೆ ಗಂಭೀರ ಗಾಯವಾಗಿದ್ದು, ಅವು ಕೂಡಾ ಬದಕುಳಿಯುವ ಸಾಧ್ಯತೆ ತೀರಾ ಕಡಿಮೆ ಎನ್ನಲಾಗಿದೆ. ಮೊದಲಿಗೆ ಬೈಕ್ ಸವಾರನೊಬ್ಬ ಒಂದು ಕುರಿಗೆ ಡಿಕ್ಕಿ ಹೊಡೆಸಿದಾಗ, ಇನ್ನುಳಿದ ಕುರಿಗಳು ಬೆದರಿ ಏಕಾಏಕಿ ರಸ್ತೆಗೆ ಬಂದ ಕಾರಣ ರಭಸದಿಂದ ಸಾಗುತ್ತಿದ್ದ ಕಾರು ಡಿಕ್ಕಿ ಹೊಡೆಯಿತು ಎನ್ನಲಾಗಿದ ನಿಡಗುಂದಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದರು. ಕುರಿ ಅಭಿವೃದ್ದಿ ನಿಗಮದಿಂದ ಕುರಿ ಮಾಲೀಕರಿಗೆ ಪರಿಹಾರ ನೀಡಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.
.

Leave a Reply

Your email address will not be published. Required fields are marked *

You May Also Like

ರಾಜ್ಯದಲ್ಲಿಂದು 176 ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು..?

ಬೆಂಗಳೂರು: ರಾಜ್ಯದಲ್ಲಿಂದು 176 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 7000…

ಅತಿಥಿ ಉಪನ್ಯಾಸಕ ನೇಮಕಕ್ಕೆ ಸರ್ಕಾರದ ಗ್ರೀನ್ ಸಿಗ್ನಲ್

ರಾಜ್ಯ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ 1,835 ಹುದ್ದೆಗಳಿಗೆ ಅತಿಥಿ ಉಪನ್ಯಾಸಕರನ್ನು ನೇಮಿಸಿಕೊಳ್ಳುವಂತೆ ಸರ್ಕಾರ ಆದೇಶಿಸಿದೆ.

ತ್ವರಿತ ಕೋವಿಡ್ ಪರೀಕ್ಷೆಗೆ ಸ್ವಾಬ್ ಕಲೆಕ್ಷನ್ ಬೂತ್‌ಗಳಿಗೆ ಚಾಲನೆ

ತ್ವರಿತವಾಗಿ ಮತ್ತು ಹೆಚ್ಚಿನ ಸಂಖ್ಯೆಯ ಕೋವಿಡ್ ಮಾದರಿ ಪರೀಕ್ಷೆ ನಡೆಸಲು ಅನುವಾಗುವಂತೆ ವಿಶಿಷ್ಟ ವಿನ್ಯಾಸದ ಸ್ವಾಬ್ ಕಲೆಕ್ಟಿಂಗ್ ಬೂತ್ ಗೆ ಇಂದು ಬೆಂಗಳೂರಿನಲ್ಲಿ ಚಾಲನೆ ನೀಡಲಾಗಿದೆ.

ತಪ್ಪುಗಳನ್ನು ಸಮರ್ಥಿಸಿಕೊಳ್ಳುತ್ತಿರುವ ಕಾಂಗ್ರೆಸ್ : ಬಿಜೆಪಿ ಟೀಕೆ

ಕಾಂಗ್ರೆಸ್ ಪಕ್ಷ ತಮ್ಮ ತಪ್ಪುಗಳನ್ನು ಸಮರ್ಥಿಸುವುದೇ ತನ್ನ ಸಿದ್ದಾಂತ ಎಂದುಕೊಂಡಿದೆ ಎಂದು ಬಿಜೆಪಿ ತಮ್ಮ ಟ್ವೀಟರ್ ನಲ್ಲಿ ಟ್ವೀಟ್ ಮಾಡುವ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಟೀಕಿಸಿದೆ.