ಉತ್ತರಪ್ರಭ ಸುದ್ದಿ

ಆಲಮಟ್ಟಿ: ಲಾಲ್ ಬಹಾದ್ದೂರ್ ಶಾಸ್ತ್ರಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಹರಿದು ಬರುವ ನೀರಿನ ಪ್ರಮಾಣ ಅಧಿಕಗೊಳ್ಳುತ್ತಿರುವುದಕ್ಕೆ ಮುಂಜಾಗ್ರತಾ ಕ್ರಮವಾಗಿ ಹೊರಹರಿವು ಹೆಚ್ಚಿಸಲಾಗಿದೆ. ಈ ಮುಂಚೆ ಒಂದು ಲಕ್ಷ ಕ್ಯುಸೆಕ್ ನೀರು ಬಿಡುಗಡೆ ಮಾಡಲಾಗುತ್ತಿತ್ತು. ಇಂದು 1.25 ಲಕ್ಷ ಕ್ಯುಸೆಕ್ ನೀರು ಹರಿಸಲಾಗುತ್ತಿದೆ. ಸೋಮವಾರ ಸಂಜೆ ವೇಳೆಗೆ ನದಿಪಾತ್ರಕ್ಕೆ 1 ಲಕ್ಷ ಕ್ಯುಸೆಕ್ ಬಿಡಲಾಗುತ್ತಿದ್ದ ನೀರುಮಂಗಳವಾರ ಬೆಳಿಗ್ಗೆಯಿಂದ ನೀರು ಬಿಡುಗಡೆ ಪ್ರಮಾಣದಲ್ಲಿ ಹೆಚ್ಚಳವಾಗಿದೆ.
ನೇರೆಯ ಮಹಾರಾಷ್ಟ್ರದ ಪಶ್ಚಿಮಘಟ್ಟ ಮತ್ತು ರಾಜ್ಯದ ಕೃಷ್ಣಾ ಅಚ್ಚುಕಟ್ಟು ಭಾಗದಲ್ಲಿ ನಿರಂತರ ಮೇಘ ವೃಷ್ಟಿ ಆಗುತ್ತಿದೆ. ಇದರಿಂದ ಕೃಷ್ಣಾ ನದಿಯಲ್ಲಿ ಒಳಹರಿವಿನ ರಭಸ ಜೋರಾಗಿದೆ. ಜಲಾಶಯದ ಮುಂಭಾಗದ ನದಿ ತೀರದ ಗ್ರಾಮಗಳಲ್ಲಿ ಈಗಾಗಲೇ ಗ್ರಾಮ ಪಂಚಾಯಿತಿ ವತಿಯಿಂದ ಡಂಗುರ ಸಾರಲಾಗಿದೆ. ನದಿ ತೀರಕ್ಕೆ ತೆರಳದಂತೆ ಗ್ರಾಮಸ್ಥರಿಗೆ ಎಚ್ಚರಿಸಲಾಗಿದೆ. ಮಂಗಳವಾರವೂ ಡಂಗೂರ ಸಾರಿ ಮುನ್ನೆಚ್ಚರಿಕೆ ವಹಿಸುವಂತೆ ಜನತೆಯಲ್ಲಿ ಕೋರಲಾಗಿದೆ.

Leave a Reply

Your email address will not be published. Required fields are marked *

You May Also Like

ಅತಿವೃಷ್ಟಿ ಅನಾಹುತ ನಿರ್ವಣೆಗೆ ಅನುದಾನ ಬಿಡುಗಡೆ ಮಾಡಿ: ಎಚ್.ಡಿ.ಕುಮಾರಸ್ವಾಮಿ

ನೆರೆಪೀಡಿತ ಪ್ರದೇಶಗಳ ಸಂಕಷ್ಟ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಅಧಿಕಾರಿಗಳು ಮತ್ತು ಸಚಿವರನ್ನು ತಕ್ಷಣವೇ ನಿಯೋಜಿಸಬೇಕು ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ಗದಗ ಜಿಲ್ಲೆಯಲ್ಲಿಂದು ನಿಲ್ಲದ ಕೊರೊನಾ ಸಂಚಾರ: ಇಂದು ಮತ್ತೆ 61 ಕೊರೊನಾ ಪಾಸಿಟಿವ್!

ಜಿಲ್ಲೆಯಲ್ಲಿಂದು ಕೂಡ 61 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಒಟ್ಟು ಈವರೆಗೆ 1004 ಸೋಂಕಿತರು ಪತ್ತೆಯಾದಂತಾಗಿದೆ. ಇಂದು 26 ಜನ ಗುಣಮುಖ ಹೊಂದಿ ಆಸ್ಪತ್ರೆಯಿಂದ ಬಿಡುಗಡ

ರಾಜ್ಯದಲ್ಲಿ ಕೊವೀಡ್ ಕರ್ಫ್ಯೂ : ಏನಿರುತ್ತೆ…? ಏನಿರಲ್ಲ…?

ನಾಳೆ ಸಂಜೆಯಿಂದ 14 ದಿನಗಳ ಕಾಲ ಕರ್ನಾಟಕ ಸಂಪೂರ್ಣ ಲಾಕ್‌ಡೌನ್‌’ ಮಾಡಲಾಗುವುದರ ಬಗ್ಗೆ ಮಹತ್ವದ ತೀರ್ಮಾನವನ್ನು ತೆಗೆದುಕೊಂಡಿದೆ.

ಮನುಕುಲದ ಏಳಿಗೆಗಾಗಿ ಶ್ರಮಿಸಿದ ಸಂತ ಸೇವಾಲಾಲರು

ಶಿರಹಟ್ಟಿ: ಆಲ್ ಇಂಡಿಯಾ ಬಂಜಾರ ಸೇವಾ ಸಂಘ ಬೆಂಗಳೂರು, ತಾಲೂಕ ಘಟಕ ಶಿರಹಟ್ಟಿ ಹಾಗೂ ಬಂಜಾರ…