ಉತ್ತರಪ್ರಭ ಸುದ್ದಿ
ಆಲಮಟ್ಟಿ:
ಶಿಕ್ಷಕ ಸ್ನೇಹಿ ವರ್ಗಾವಣಾ ಕಾಯ್ದೆಯನ್ನು ಉಭಯ ಸದನಗಳಲ್ಲಿ ಮಂಡಿಸಿ ಅನುಮೋದನೆ ಪಡೆದುಕೊಂಡ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಬಿ.ಸಿ.ನಾಗೇಶ್ ಅವರನ್ನು ಕನಾ೯ಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ತುಂಬು ಹೃದಯದಿಂದ ಅಭಿನಂದನೆ ಸಲ್ಲಿಸಿದೆ.ಶುಕ್ರವಾರ ಸಚಿವರ ಕಚೇರಿಗೆ ತೆರಳಿದ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಶಂಭುಲಿಂಗನಗೌಡ ಪಾಟೀಲ, ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ನುಗ್ಲಿ, ಸಂಘದ ಹಾಗು ರಾಜ್ಯದ ಸಮಸ್ತ ಶಿಕ್ಷಕ ಬಳಗದ ಪರವಾಗಿ ಸಚಿವ ಬಿ.ಸಿ.ನಾಗೇಶ್ ಅವರನ್ನು ಅಭಿನಂದಿಸಿದರು. ಈ ವೇಳೆ ಸಚಿವರಿಗೆ ಹೂಗುಚ್ಚ ನೀಡಿ ಸನ್ಮಾನಿಸಿ ಗೌರವಿಸಿದರು.

ರಾಜ್ಯದ ಶಿಕ್ಷಕರ ಬಹುದಿನಗಳ ಬೇಡಿಕೆಯಾದ ಶಿಕ್ಷಕರ ವರ್ಗಾವಣೆಯನ್ನು ಶಿಕ್ಷಕ ಸ್ನೇಹಿ ವರ್ಗಾವಣೆಯಾಗಿ ಮಂಡಿಸಿ ಉಭಯ ಸದನಗಳಲ್ಲಿ ಅನುಮೋದನೆ ಪಡೆದುಕೊಂಡಿದ್ದು ಶಿಕ್ಷಕರ ವಲಯದಲ್ಲಿ ಹೊಸ ನೆಮ್ಮದಿಯ ಸಂಚಲನ ಮೂಡಿಸಿದೆ. ಗುರು ವೃಂದದ ಮೊಗದಲ್ಲಿ ಹರ್ಷದ ಬುಗ್ಗೆ ಸೃಷ್ಟಿಯಾಗಿದೆ. ಶಿಕ್ಷಕ ಸ್ನೇಹಿ ಸಚಿವರು, ದಕ್ಷರು, ಪ್ರಾಮಾಣಿಕರು,ಪಾರದರ್ಶಕರು ಅಗಿದ್ದಾರೆ. ಶಿಕ್ಷಕರ ಬಹುತೇಕ ಎಲ್ಲ ಸಮಸ್ಯೆಗಳಿಗೆ ಮುಕ್ತವಾಗಿ ಸ್ಪಂದಿಸಿ ಒತ್ತಡಗಳ ಮಧ್ಯೆಯೂ ಉತ್ಕಟ ಮಟ್ಟದಲ್ಲಿ ಕ್ರಿಯಾಶೀಲತೆಯಿಂದ ತಮ್ಮ ಹೊಣೆಗಾರಿಕೆ ನಿಭಾಯಿಸುತ್ತಿದ್ದಾರೆ. ಸಚಿವರ ಕಾರ್ಯಕ್ಷಮತೆ ಅದಮ್ಯ ಚೇತನ ಭರಿತವಾಗಿದೆ ಎಂದು ಸಚಿವ ನಾಗೇಶ್ ಅವರ ಸೇವಾ ಮನೋಭಾವದ ಗುಣಗಾನ ಶಂಭುಲಿಂಗನಗೌಡ ಪಾಟೀಲ ಹಾಗು ಚಂದ್ರಶೇಖರ ನುಗ್ಲಿ ಬಣ್ಣಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಆಲಮಟ್ಟಿಗೆ ಸಿಎಂ ಆಗಮನ – ಬಿಗಿ ಭದ್ರತೆ ನಿಯೋಜನೆ

ಆಲಮಟ್ಟಿ : ರಾಜ್ಯದ ದೊರೆ ಆಗಮನದ ಹಿನ್ನೆಲೆಯಲ್ಲಿ ಉದ್ಯಾನ ನಗರಿ ಆಲಮಟ್ಟಿ ಸಕಲ ಭದ್ರತಾ ಸಿದ್ದತೆಯೊಂದಿಗೆ…

ಕನ್ನಡದ ಕಂಪು ಕಮರದಿರಲಿ: ಶಾಸಕ ರಾಮಣ್ಣ

ಪ್ರಸ್ತುತ ದಿನಗಳಲ್ಲಿ ಕನ್ನಡದ ಜನತೆ ಆಂಗ್ಲ ಭಾಷೆಯ ವ್ಯಾಮೋಹಕ್ಕೆ ಒಳಗಾಗಿ ಮಾತೃ ಭಾಷೆಯನ್ನು ಮರೆಯುತ್ತಿದ್ದು, ಕನ್ನಡದ ಕಂಪು ಕಮರಿ ಹೋಗುತ್ತಿರುವುದು ವಿಷಾದಕರ ಸಂಗತಿ ಎಂದು ಶಾಸಕ ರಾಮಣ್ಣ ಲಮಾಣಿ ಹೇಳಿದರು.

ವಿಕೆಂಡ್ ಕರ್ಪ್ಯೂಗೆ ವಾಣಿಜ್ಯ ನಗರಿ ಸ್ಥಬ್ಧ

ಕೊರೋನಾ ವೈರಸ್ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಜಾರಿ ಮಾಡಿರುವ ವೀಕೆಂಡ್ ಕರ್ಫ್ಯೂ ಗೆ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ವ್ಯಾಪಕ ಬೆಂಬಲ ವ್ಯಕ್ತವಾಗಿದೆ.

ಇನ್ಮುಂದೆ ಪೊಲೀ‍‍ಸರಿಗೆ ವಾರದ ರಜೆ ಕಡ್ಡಾಯ

ಪೊಲೀಸರಿಗೆ ವಾರದ ರಜೆ ಕಡ್ಡಾಯಗೊಳಿಸುವಂತೆ ಡಿಜಿ ಮತ್ತು ಐಜಿಪಿ ಪ್ರವೀಣ್ ಸೂದ್​ ಸುತ್ತೋಲೆ ಹೊರಡಿಸಿದ್ದಾರೆ. ತುರ್ತು ಪರಿಸ್ಥಿತಿ ಬಿಟ್ಟು ಎಲ್ಲ ಸಂದರ್ಭದಲ್ಲಿ ವಾರದ ರಜೆ‌ ಕಡ್ಡಾಯವಾಗಿ ನೀಡಬೇಕು ಎಂದು ವಲಯ ಐಜಿಪಿ ಮತ್ತು ಎಸ್ ಪಿ ಗಳಿಗೆ ಆದೇಶ ಹೊರಡಿಸಿದ್ದಾರೆ.