ಆಲಮಟ್ಟಿ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಅಡಿ ಮಹಿಳೆಯರು ಸಕ್ರಿಯವಾಗಿ ಭಾಗವಹಿಸಿ ಕೂಲಿ ಕೆಲಸದೊಂದಿಗೆ ವೈಯಕ್ತಿಕ ಕಾಮಗಾರಿಗಳನ್ನು ಮಾಡಿಕೊಳ್ಳಿ ಎಂದು ತಾಲ್ಲೂಕು ಮಾಹಿತಿ ಶಿಕ್ಷಣ ಹಾಗೂ ಸಂವಹನ ಸಂಯೋಜಕ ದಸ್ತಗೀರ್ ಗುಡಿಹಾಳ ಹೇಳಿದರು.
ಆಲಮಟ್ಟಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಆಲಮಟ್ಟಿ ಗ್ರಾಮದ ಸಿದ್ರಾಮ ಗಣಾಚಾರಿ ಹೊಲದಿಂದ ಬಡಗೇರ ಹೊಲದ ವರೆಗೆ ಬಸಿಗಾಲುವೆ ಹೂಳೆತ್ತುವ ಕಾಮಗಾರಿ ಸ್ಥಳದಲ್ಲಿ ಗುರುವಾರ ರೋಜ್ ಗಾರ ದಿವಸ್ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಈ ವೇಳೆ ಕಾರ್ಮಿಕರು ತಮಗೆ ನಿರಂತರ ಕೆಲಸ ನೀಡುವಂತೆ ಹೇಳಿಕೊಂಡರು. ಅಲ್ಲದೇ ಮಹಿಳಾ ಕೂಲಿಕಾರ್ಮಿಕರು ತಮ್ಮ ಸಮಸ್ಯೆಗಳನ್ನು ಹೇಳಿಕೊಂಡರು. ಅವರಲ್ಲಿದ್ದ ಗೊಂದಲ ಮತ್ತು ಸಮಸ್ಯೆಗಳಿಗೆ ಪರಿಹಾರ ಕ್ರಮ ತಿಳಿಸಲಾಯಿತು. ಶಂಕರ್ ವಡ್ಡರ್ , ಕೂಲಿಕಾರ್ಮಿಕರು ಉಪಸ್ಥಿತರಿದ್ದರು.